ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಆರೇಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮೂರು ಜಿಲ್ಲೆಗಳಿಗೆ ಆರೇಂಜ್ ಹಾಗೂ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹೌದು, ರಾಜ್ಯದ ಕೆಲವೆಡೆ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕರಾವಳಿಯ ಮೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಉತ್ತರ ಒಳನಾಡಿನ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ. ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ಆರೇಂಜ್ ಅಲರ್ಟ್ ನೀಡಲಾಗಿದೆ. […]