ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Written by Ramlinganna

Updated on:

ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಆಸಕ್ತರು ಅರ್ಜಿ ಸಲ್ಲಿಸಿ ಹುದ್ದೆ ಪಡೆಯಬಹುದು.

ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 8 ಅಂಗನವಾಡಿ ಕಾರ್ಯಕರ್ತೆ, 5 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 39 ಅಂಗನವಾಡಿ ಸಹಾಯಕಿಯ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಹುದ್ದೆಗೆ ಆನ್ಲೈನ್ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 5 ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 12ನೇ ತರಗತಿ, ಡಿಪ್ಲೋಮಾ, ತತ್ಸಮಾನ ಶಿಕ್ಷಣ ಯಾವುದಾದರೊಂದು ಪಾಸ್ ಆಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು.

ಆನ್ಲೈನ್ ನಲ್ಲಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ

https://karnemakaone.kar.nic.in/abcd/home.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಂಗನವಾಡಿ ಕಾರ್ಯಕರ್ತೆ. ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯೊಂದಿಗೆ ಯಾವ ಯಾವ ದಾಖಲೆ ಸಲ್ಲಿಸಬೇಕು?

ಅರ್ಜಿಯೊಂದಿಗೆ ಜನನ ಪ್ರಮಾಣ ಪತ್ರ, ಅಥವಾ ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ, ಪಿಯುಸಿ ಅಂಕಪಟ್ಟಿ ಸಲ್ಲಿಸಬೇಕು. ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಬೇಕು. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು.

ಅಂಗನವಾಡಿ  ಕಾರ್ಯಕರ್ತೆ ಸಹಾಯಕಿ ಯರ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 39 ಅಂಗನವಾಡಿ ಕಾರ್ಯಕರ್ತೆ ಹಾಗೂ 113 ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್ಎಸ್ಎಲ್ಸಿ ಯಲ್ಲಿ ಕನ್ನಡ ಭಾಷೆಯನ್ನಾಗಿ ಓದಿರಬೇಕು. ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಸದರಿಯವರಿಗೆ ಬೋನಸ್ 5 ಅಂಕಗಳನ್ನು ನೀಡಲಾಗುವುದು. ಕನಿಷ್ಟ 19 ಹಾಗೂ ಗರಿಷ್ಟ 35 ವಯೋಮಾನದೊಳಗಿರಬೇಕು.

ಇದನ್ನೂ ಓದಿ ಮೊದಲ ಕಂತಿನ ಬರ ಪರಿಹಾರ ಜಮೆ- ನಿಮಗೆಷ್ಟು ಜಮೆ? ಇಲ್ಲೆ ಚೆಕ್ ಮಾಡಿ

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಕನಿಷ್ಟ 19 ವರ್ಷ ಗರಿಷ್ಠ 35 ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅವರು ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು.

ಆ್ಯಸಿಡ್ ದಾಳಿಗೆ ತುತ್ತಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ ಅರ್ಹ ಅಭ್ಯರ್ಥಿಗೆ  + 5 ಬೋನಸ್ ಅಂಕಗಳನ್ನು ನೀಡಲಾಗುವುದು.

ಫೆಬ್ರವರಿ 15 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರಾಗಿರುತ್ತಾರೆ?

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲಿಚ್ಚಿಸುವವರು ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆಗೆ ಸ್ಥಳೀಯಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆಯಬೇಕು.

Leave a Comment