subsidy under udyogini scheme ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿಯಲ್ಲಿ ಸಾಲ ಹಾಗೂ ಸಬ್ಸಿಡಿ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2023-24ನೇ ಸಾಲನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ದೇವದಾಸಿ ಮಹಿಳೆಯರ ಆದಾಯೋತ್ಪನ್ನ ಚಟುವಟಿಕೆ ಯೋಜನೆಗಳಡಿಯಲ್ಲಿ ಸೌಲಭ್ಯ ನೀಡಲು ಅರ್ಹ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉದ್ಯೋಗಿನಿ ಯೋಜನೆ (ಶಾಸಕರ ಸಮಿತಿ)
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಮಹಿಳೆಯರು ವಿವಿಧ ಆದಾಯೋತ್ಪನ್ನ ಚಟುವಟಿಕೆ ಹಾಗೂ ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲು 3 ಲಕ್ಷ ರೂಪಾಯಿ ಗಳವರೆಗಿನ ಸಾಲ ಹಾಗೂ ಸಹಾಯಧನ ಸೌಲಭ್ಯ ಇರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಸಾಲದ ಶೇ. 50 ರಷ್ಟು ಗರಿಷ್ಟ 1,50,000 ರೂಪಾಯಿಗಳವರೆಗಿನ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ ಶೇ. 30 ರಷ್ಟು 90 ಸಾವಿರ ರೂಪಾಯಿಗಳ ಬ್ಯಾಂಕ್ ಎಂಡ್ ಸಹಾಯಧನವನ್ನು ನೀಡಲಾಗುತ್ತದೆ.
ಇದನ್ನೂ ಓದಿ : ಗೃಹಲಕ್ಷ್ಮೀ ಹಣ ಯಾರಿಗೆ ಜಮೆಯಾಗುತ್ತದೆ? ಯಾರಿಗೆ ಜಮೆಯಾಗಲ್ಲ? ಇಲ್ಲಿದೆ ಮಾಹಿತಿ
ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.ಅರ್ಹ ಫಲಾನುಭವಿಗಳನ್ನು ಮತಕ್ಷೇತ್ರವಾರು ಶಾಸಕರ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು.
ಜಿಲ್ಲಾ ಆಯ್ಕೆ ಸಮಿತಿ ಯೋಜನೆಗಳು
ಚೇತನ, ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ದೇವದಾಸಿ ಪುನರ್ವಸಲತಿ ಈ ಯೋಜನೆಗಳಡಿ 18 ವರ್ಷ ಮೇಲ್ಪಟ್ಟ ದಮನಿತ ಮಹಿಳೆಯರು, 60 ವರ್ಷದೊಳಗಿನ ಹೆಚ್.ಐ.ವಿ ಸೋಂಕಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು 30 ಸಾವಿರ ರೂಪಾಯಿಗಳ ಆರ್ಥಿಕ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಹ ಫಲಾನುಭವಿಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ಜಿಲ್ಲಾಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುತ್ತದೆ.
subsidy under udyogini scheme ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ
ಅರ್ಹ ಮಹಿಳಾ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಜಾಲತಾಣ
https://sevasindhu.karnataka.gov.in
ದಲ್ಲಿ ಆನ್ಲೈನ್ ಮೂಲಕ ಡಿಸೆಂಬರ್ 22 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ಆಯಾ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಚೇತನ ಯೋಜನೆ
ಚೇತನ ಯೋಜನಾ ಅಡಿಯಲ್ಲಿ ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 30 ಸಾವಿರ ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುವುದು.
ಧನಶ್ರೀ ಯೋಜನೆ
ಧನಶ್ರೀ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 30 ಸಾವಿರ ರೂಪಾಯಿಳ ಪ್ರೋತ್ಸಾಹ ಧನ ನೀಡಲಾಗುವುದು. ವಯೋಮಿತಿ 18 ರಿಂದ 60 ವರ್ಷಗಳ ಮಿತಿಯಲ್ಲಿರಬೇಕು.
ಇದನ್ನೂ ಓದಿ : ನಿಮ್ಮ ಹೊಲಕ್ಕೆ ಹೋಗುವ ದಾರಿ ಮುಚ್ಚಲಾಗಿದೆಯೇ? ಇಲ್ಲಿ ಚೆಕ್ ಮಾಡಿ ಅರ್ಜಿ ಸಲ್ಲಿಸಿ
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿಯಲ್ಲಿ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 30 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ.
ವಿಶೇಷ ಸೂಚನೆ
ಅರ್ಜಿ ಸಲ್ಲಿಸಲಿಚ್ಚಿಸುವ ಮಹಿಳೆಯರ ಬಳಿ ಆಧಾರ್ ಕಾರ್ಡ್ ಇರಬೇಕು. ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಅರ್ಜಿ ಸಲ್ಲಿಸುವಾಗ ಬ್ಯಾಂಕ್ ಪಾಸ್ ಬುಕ್ ಪ್ರತಿ ಸಲ್ಲಿಸಬೇಕು.ಇತ್ತೀಚಿನ ಫೋಟೋ ಇರಬೇಕು.
ಎಲ್ಲಾ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು.