ಸ್ವಯಂ ಉದ್ಯೋಗಕ್ಕೆ 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

1 lakh self employment subsidy : ಸ್ವಯಂ ಉದ್ಯೋಗ ಸಾಲ ಯೋಜನೆ ಅಡಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು 1 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ  ಹಾಗೂ ಹೊಲಿಗೆ ಯಂತ್ರ ವಿತರಣೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಯೋಜನೆಗಳಡಿ ಸೇವಾ ಸಿಂಧು ಪೋರ್ಟಲ್‌ದಲ್ಲಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಅರ್ಜಿದಾರರು

https://www.kaushalkar.com

ವೆಬ್‌ಸೈಟ್‌ದಲ್ಲಿ ಅರ್ಜಿ ಸಲ್ಲಿಸಬೇಕು.

ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ,  ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗಲಿದೆ.

ಇದನ್ನೂ ಓದಿ ನಿಮ್ಮ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ? ಚೆಕ್ ಮಾಡಿ

1 lakh self employment subsidy ಸಹಾಯಧನ ಹೇಗೆ ನೀಡಲಾಗುವುದು?

2023-24ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 162 ರಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸ್ವಯಂ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡಲು ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ಶೇ.20ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ಗಳ ಸಾಲ ಸಹಾಯಧನವನ್ನು ವಾಣಿಜ್ಯ ಬ್ಯಾಂಕುಗಳ ಮುಖಾಂತರ ನೀಡಲಾಗುವುದೆಂದು ಘೋಷಿಸಲಾಗಿರುತ್ತದೆ.

ಡಿ.ದೇವರಾಜ ಅರಸು ಹಿಂದುಳಿದ ರ‍್ಗಗಳ ಅಭಿವೃದ್ಧಿ ನಿಗಮದಿಂದ  ಹಿಂದುಳಿದ ರ‍್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ರ‍್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು  ಗರಿಷ್ಠ  ರೂ.1.00 ಲಕ್ಷಗಳ ಸಾಲ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್ನಿಂದ ಸಾಲ ಪಡೆಯುವ ಯೋಜನೆಯನ್ನು ಅನುಷ್ಠಾನಗೊಳಿಸಲು  ದಿನಾಂಕ:20.07.2023ರಂದು ನಡೆದ 195ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ.

ಆದ್ದರಿಂದ, ಡಿ.ದೇವರಾಜ ಅರಸು ಹಿಂದುಳಿದ ರ‍್ಗಗಳ ಅಭಿವೃದ್ಧಿ ನಿಗಮದ ಹಿಂದುಳಿದ ರ‍್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು ಗರಿಷ್ಠ ರೂ.1.00 ಲಕ್ಷಗಳ ಸಾಲ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್ನಿಂದ ಸಾಲ ಪಡೆಯುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in
ಮೂಲಕ ಗ್ರಾಮಒನ್, ಗುಲಬರ್ಗಾ  ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ 2025ರ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ www.dbcdc.karnataka.gov.in

ವೆಬ್‌ಸೈಟ್‌ದಿಂದ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಅಥವಾ 8050770005 ಅಥವಾ ಕಲಬುರಗಿ ಜಿಲ್ಲಾ  ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-278635ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment