10 days free goat training ಕುರಿ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಸಂತಸದ ಸುದ್ದಿ. ರೈತರಿಗೆ ಕೃಷಿಯೊಂದಿಗೆ ಉಪಕಸುಬು ಮಾಡಲು ಉಚಿತವಾಗಿ ಕುರಿ ಸಾಕಾಣಿಕೆ ಮಾಡಲು 10 ದಿನಗಳ ಕಾಲ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.
ಹೌದು, ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಫೆಬ್ರವರಿ ೪ನೇ ವಾರದಿಂದ 10 ದಿನಗಳ ಕಾಲ ತರಬೇತಿ ಆಯೋಜಿಸಲಾಗಿದೆ.
18 ರಿಂದ 45 ವರ್ಷದೊಳಗಿನ ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ನಿರುದ್ದೋಗಿ ಯುವಕ ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ಸ್ಥಳೀಯಭಾಷೆ ತಿಳಿದಿರಬೇಕು. ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಹೊಂದಿರಬೇಕು. ಕನಿಷ್ಟ 8ನೇ ತರಗತಿಯವರೆಗೆ ಓದಿರಬೇಕು. ತರಬೇತಿಯಲ್ಲಿ ಭಾಗವಹಿಸಿದ ರೈತರಿಗೆ ಉಚಿತವಾಗಿ ಊಟ ಹಾಗೂ ವಸತಿ ಸೌಲಭ್ಯ ಇರಲಿದೆ.
ಆಸಕ್ತರು ಫೆಬ್ರವರಿ 17ರಂದು ಗುರುವಾರ ಬೆಳಗ್ಗೆ 10.30 ಕ್ಕೆ ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣ ಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲೂಕು ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ದಾಖಲೆಗಳೊಂದಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 95915 14154 ಗೆ ಕರೆ ಮಾಡಿ ಸಂಪರ್ಕಿಸಬಹುದು.
ಉಚಿತ ಸಹಾಯವಾಣಿ
ರೈತರಿಗೆ ಕೋಳಿ ಸಾಕಾಣಿಕೆ, ಕುರಿ ಮೇಕೆ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ರೈತರಿಗೆ ಮಾಹಿತಿ ನೀಡಲು ಉಚಿತ ಸಹಾಯವಾಣಿ ಆರಂಭವಾಗಿದೆ.
10 days free goat training ರೈತರಿಗಾಗಿ ಆರಂಭವಾಗಿದೆ ಉಚಿತ ಸಹಾಯವಾಣಿ
ರೈತರು ಮನೆಯಲ್ಲಿಯೇ ಕುಳಿತು ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಇದಕ್ಕಾಗಿ ರೈತರು ಶುಲ್ಕ ಪಾವತಿಸಬೇಕಿಲ್ಲ. ರೈತರು ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ರೈತರು ಯಾವ ಜಿಲ್ಲೆಗೆ ಸಂಬಂಧಿಸಿರುತ್ತಾರೆಯೋ ಆ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು.
ರೈತರು ಉಚಿತ ಸಹಾಯವಾಣಿ 8277100200 ಗೆ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಕರೆ ಮಾಡಿ ಪಶುವೈದ್ಯರು ಮತ್ತು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.
ಇದನ್ನೂ ಓದಿಃ ರೈತರ ಖಾತೆಗೆ ಜಮೆಯಾಯಿತು ಪರಿಹಾರದ ಹೆಚ್ಚುವರಿ ಹಣಃ ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ
ಈ ಉಚಿತ ಸಹಾಯವಾಣಿಯಿಂದ ರೈತರು ಮನೆಯಲ್ಲಿಯೇ ಕುಳಿತು ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯುತ್ತಾರೆ. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹೀಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ರೈತರಿಗೆ ಮಾಹಿತಿ ನೀಡುತ್ತಾರೆ.
ಕುರಿ, ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಇದೊಂದು ಸಂತಸದ ಸಂಗತಿಯಾಗಿದೆ. ಕೂಡಲೇ ಮೇಲೆ ನೀಡಿದ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿ ಸೌಲಭ್ಯ ಪಡೆೆೆೆೆಯಬಹುದು.