ರೈತರ ಮಕ್ಕಳಿಗೆ 10 ತಿಂಗಳ ಕಾಲ ತೋಟಗಾರಿಕೆ ತರಬೇತಿ

Written by By: janajagran

Updated on:

10 month Horticulture training ತೋಟಗಾರಿಕೆ ಮಾಡಲಿಚ್ಚಿಸುವ ಯುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ಕಾಲ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು,  ತೋಟಗಾರಿಕೆ ಇಲಾಖೆಯ ವತಿಯಿಂದ ಕಲಬುರಗಿ ಜಿಲ್ಲೆಯ ರೈತರ ಮಕ್ಕಳಿಗಾಗಿ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ತೋಟಗಾರಿಕೆ  ತರಬೇತಿ ಕೇಂದ್ರದಲ್ಲಿ2022-23ನೇ ಸಾಲಿನಲ್ಲಿ ಹತ್ತು ತಿಂಗಳ ಅವಧಿಗೆ ತೋಟಗಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.

ಕಲಬುರಗಿ ಜಿಲ್ಲೆಯ ರೈತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ರಾಜ್ಯವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ತೋಟಗಾರಿಕೆ ತರಬೇತಿಯನ್ನು 2022ರ ಮೇ 2 ರಿಂದ ಹಮ್ಮಿಕೊಳ್ಳಲಾಗುತ್ತಿದ್ದು,  ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳ (ಮಾಜಿ ಸೈನಿಕರು ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳು) ತಂದೆ, ತಾಯಿ, ಪಾಲಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕಲ್ಲದೆ ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ಕಡ್ಡಾಯವಾಗಿ ನೀಡಬೇಕು.

ನಿಗದಿತ ಅರ್ಜಿ ನಮೂನೆಗಳನ್ನು ಕಲಬುರಗಿ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ರಾಜ್ಯ ವಲಯದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಆಯಾ ತಾಲೂಕಿನ ತೋಟಗಾರಿಕೆ ಕಚೇರಿಯಿಂದ ಅಥವಾ ಇಲಾಖೆಯ https://horticulturedir.karnataka.gov.in/

ವೆಬ್ ಸೈಟ್ ನಿಂದ 2022 ರ ಮಾರ್ಚ್ 22 ರಿಂದ ಏಪ್ರಿಲ್  16ರವರೆಗೆ ಡೌನ್ಲೋಡ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ  ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2022 ರ ಏಪ್ರೀಲ್ 16 ರ ಸಂಜೆ 5 ಗಂಟೆಯೊಳಗಾಗಿ ಕಲಬುರಗಿ (ರಾಜ್ಯವಲಯ)  ಉಪನಿರ್ದೇಶಕರು, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಏಪ್ರೀಲ್ 18 ರಂದು  ಬೆಳಗ್ಗೆ 10 ಗಂಟೆಗೆ ತಮ್ಮ ಮೂಲ ದಾಖಲಾತಿಗಳೊಂದಿಗೆ ಕಲಬುರಗಿ ಐವಾನ್ ಇ ಶಾಹಿ ರಸ್ತೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ, ವಯೋಮಿತಿ, ಅರ್ಜಿಯ ಶುಲ್ಕ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ರಾಜ್ಯವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 228479 ಗೆ ಸಂಪರ್ಕಿಸಲು ಕೋರಲಾಗಿದೆ.

ರಾಜ್ಯದ ವಿವಿಧ ಸಮಗ್ರ ಜೈವಿಕ ಕೇಂದ್ರಗಳಲ್ಲಿ ಲಭ್ಯವಿರುವ ಅಂಗಾಂಶ ಕೃಷಿ ಬಾಳೆ ಸಸಿ, ಅಣಬೆ ಸ್ಪಾನ್, ಜೈವಿಕ ಗೊಬ್ಬರ ಮತ್ತು ಜೈವಿಕ ನಿಯಂತ್ರಣ ಪ್ರಸ್ತುತ ದಾಸ್ತಾನು ವಿವರ, ಮಾರಾಟ ದರ ಹಾಗೂ ಸಂಪರ್ಕಿಸಬೇಕಾದ ವಿಳಾಸ ದೂರವಾಣಿ ಸಂಖ್ಯೆಯ ಮಾಹಿತಿ ಪಡೆಯಲು ಈ https://horticulturedir.karnataka.gov.in/storage/pdf-files/Lalbagh/Availability%20of%20Stock%20in%20Biocentres.pdf

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ತೋಟಗಾರಿಕೆ ಇಲಾಖೆಗಳಲ್ಲಿ ಯಾವ ಯಾವ ಸಸಿಗಳು ಲಭ್ಯವಿದೆ ಎಂಬ ಮಾಹಿತಿ ಸಿಗುತ್ತದೆ.

10 month Horticulture training ಹಾಸನ ಜಿಲ್ಲೆಯ ರೈತರಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಹಾಸನ ಜಿಲ್ಲೆಯ ತೋಟಗಾರಿಕೆ ಇಲಾಖೆ ಅಧೀನದಲ್ಲಿರುವ ಸೋಮನಹಳ್ಳಿ ಕಾವಲು ತೋಟಗಾರಿಕೆ ಕ್ಷೇತ್ರದ ತರಬೇತಿ ಕೇಂದ್ರದಲ್ಲಿ ಹಾಸನ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳ ಕಾಲ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ ಅಭ್ಯರ್ಥಿಗಳು ಮಾರ್ಚ್ 15 ರಿಂದ ಮಾರ್ಚ್ 16 ರೊಳಗೆ ಅರ್ಜಿಗಳನ್ನು ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ ರವರ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್ ಸೈಟ್ https://horticulturedir.karnataka.gov.in/

ಮೂಲಕ ಪಡೆದು ಭರ್ತಿ ಮಾಡಿ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಹಾಸನ ಕಚೇರಿಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ರಾಜ್ಯವಲಯ, ಹಾಸನರವರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08172 269995 ನ್ನುಸಂಪರ್ಕಿಸಲು ಕೋರಲಾಗಿದೆ.

Leave a Comment