100 crore for goat farming:ಕುರಿ, ಕೋಳಿ ಸಾಕಲು 100 ಕೋಟಿ ಘೋಷಣೆ

Written by Ramlinganna

Updated on:

100 crore for goat farming: ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಮತ್ತು ಅವರ ಸಬಲೀಕರಣಕ್ಕಾಗಿ ಕುರಿ, ಮೇಕೆ, ಕೋಳಿ ಸಾಕಲು 100 ಕೋಟಿ ರೂಪಾಯಿ ಘೋಷಿಸಿದ್ದಾರೆ.

ಹೌದು,  ಶಕ್ತಿ ಹಾಗೂ ಗೃಹಲಕ್ಷ್ಮೀ ಗ್ಯಾರೆಂಟಿ ಯೋಜನೆ ಘೋಷಿಸಿದ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ಕೆಲವೇ ದಿನಗಳಲ್ಲಿ ಈ ಎರಡು ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ 2.0 ಸರ್ಕಾರದ ಎರಡನೇ ಬಜೆಟ್ ನಲ್ಲೂ ಸಹ ಮಹಿಳಾ ಆರ್ಥಿಕತೆಗೆ ಹಾಗೂ ಆರೋಗ್ಯಕ್ಕೆ ಶಕ್ತಿ ತುಂಬಲು ಭರಪೂರ ಯೋಜನೆ ಘೋಷಿಸಿದ್ದಾರೆ.

ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿರುವ ಶಕ್ತಿ ಯೋಜನೆಗೆ 3 ಸಾವಿರ ಕೋಟಿ ರೂಪಾಯಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲು 28,608 ಕೋಟಿ ರೂಪಾಯಿ ಅನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಕುಟುಂಬ ನಿರ್ಹವಣೆಯ ಜೊತೆಗ ಆದಾಯೋತ್ಪನ್ನಕ್ಕೆ ಆದ್ಯತೆ ನೀಡಿರುವ ಮುಖ್ಯಮಂತ್ರಿ ಒಂದು ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳು ಮೀನುಗಾರಿಕೆ, ಕುಕ್ಕುಟ, ಕುರಿ ಮತ್ತು ಮೇಕೆ, ಜೇನು ಸಾಕಾಣಿಕೆ ಸಂಬಂಧಿಸಿದ ಕಿರು ಉದ್ದಿಮೆಗಳನ್ನು ಸ್ಥಾಪಿಸಲು 100 ಕೋಟಿ ರೂಪಾಯಿ (100 crore for goat farming) ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರೇ ಕ್ಯಾಂಟಿನ್ ಸ್ಥಾಪಿಸಲು ಕೆಫೆ ಸಂಜೀವಿನಿ ಎಂಬ ಹೊಸ ರೂಪಿಸಲಾಗಿದ್ದು, ಅದಕ್ಕಾಗಿ ಯೋಜನೆಗೆ 7.5 ಕೋಟಿ ರೂಪಾಯಿ ನೀಡಿದ್ದಾರೆ.

ಇದನ್ನೂ ಓದಿ Annabhagya DBT Status: ಮೊಬೈಲ್ ನಲ್ಲೇ ಚೆಕ್ ಮಾಡಿ

ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲು ಮತ್ತು 2500 ಕಾಫಿ ಕಿಯೋಸ್ಕ್ ಆರಂಭಿಸಲು 25 ಕೋಟಿ ರೂಪಾಯಿ ನೀಡಲಾಗಿದೆ. ರಾಜ್ಯದ ನಗರಗಳಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರು ತಂಗಲು ರಾತ್ರಿ ತಂಗುವ ವ್ಯವಸ್ಥೆ, ರಾಜ್ಯದ100 ಆದ್ಯ ಗ್ರಾಪಂ ಗಳಲ್ಲಿ ಮಹಿಳಾ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯ ಪ್ರಾರಂಭಿಸಲು ಬಜೆಟ್ ನಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ತಲಾ ಒಂದು ಲಕ್ಷ ರೂಪಾಯಿ ನೆರವಿನೊಂದಿಗೆ ಎಣ್ಣೆ ಗಾಣ ಸ್ಥಾಪನೆ, ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಾಣ, ಬಳ್ಳಾರಿಯಲ್ಲಿ ಕ್ರೀಡಾ ಮಹಿಳಾ ವಸತಿ ನಿಲಯದ ಉನ್ನತಿಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಒದಗಿಸಲಾಗಿದೆ.

ಹಸು ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರು ಪಾವತಿಸಿದ ರೈತ ಮಹಿಳೆಗೆ ಶೇ. 6 ರಷ್ಟು ಬಡ್ಡಿ ಸಹಾಯಧನ ಘೋಷಿಸಲಾಗಿದೆ.

ಗ್ರಾಮೀಣ ಭಾಗದ ಸ್ವ- ಸಹಾಯ ಗುಂಪು, ಗ್ರಾಮ ಪಂಚಾಯತ್, ಮಹಿಳಾ ಸದಸ್ಯರು ಹಾಗೂ ಮುಂಚೂಣಿಯ ಕಾರ್ಯಕರ್ತೆಯರಿಗೆ ಮೆನ್ಸ್ ಟ್ರೂಯಲ್ ಕಪ್ ಬಳಕೆ ಪ್ರೋತ್ಸಾಹಿಸಲು, ಸ್ವ- ಸಹಾಯ ಗುಂಪುಗಳ ಸಕ್ರಿಯ ಭಾಗವಹಿಸಲು ಮತ್ತು ನಾಯಕತ್ವ ಬಲಪಡಿಸಲು ಜಿಪಿ-ಎಸ್ಎಚ್.ಜಿ ಒಗ್ಗೂಡಿಸುವಿಕೆಯ ನೀತಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ see village map: ನಿಮ್ಮ ಹೊಲಕ್ಕೆ ಹೋಗುವ ಕಾಲುದಾರಿ ಚೆಕ್ ಮಾಡಿ

ಮಾಧ್ಯಮಿಕ, ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿಸಿ ತರಲು ನಿರ್ಧರಿಸಲಾಗಿದೆ.

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 54 ಕೋಟಿ ರೂಪಾಯಿ, ಬೆಂಗಳೂರಿನ ಮಹಾರಾಣಿ ಕಲಾ, ವಾಣಿಜ್ಯ ಕಾಲೇಜು ಹಾಸ್ಟೇಲ್ ಕಟ್ಟಡ ನಿರ್ಮಾಣ 116 ಕೋಟಿರೂಪಾಯಿ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಿಸಲು ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್  ಗಳ ಉನ್ನತೀಕರಣಕ್ಕೆ ಒಟ್ಟು 30 ಕೋಟಿ ರೂಪಾಯಿ ನೀಡಲಾಗಿದೆ.

Leave a Comment