1000 anganawadi jobs applicaion : ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಬೀದರ್; ಚಾಮರಾಜನಗರ, ಗದಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಎಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕ ಯಾವುದು ಯಾವ ಯಾವ ದಾಖಲೆ ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಮೊದಲು ತಮ್ಮ ಹತ್ತಿರ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಕೊನೆಯ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಅರ್ಜಿ ಸಲ್ಲಿಸಬಹುದು.
ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿಯಿರುವ 441 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾಗಿದ್ದವರು ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 11 ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ.
1000 anganawadi jobs applicaion ಎಲ್ಲೆಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ?
ಬೀದರ್ ಅಂಗನವಾಡಿ ಕಾರ್ಯಕರ್ತೆ 27, ಅಂಗನವಾಡಿ ಸಹಾಯಕಿಯರ 103 ಹುದ್ದೆಗಳು ಖಾಲಿಯಿವೆ. ಔರಾದ್ ನಲ್ಲಿ 27 ಅಂಗನವಾಡಿ 56 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಬಸವಕಲ್ಯಾಣದಲ್ಲಿ 25 ಅಂಗನವಾಡಿ ಕಾರ್ಯಕರ್ತೆ ಹಾಗೂ 47 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಭಾಲ್ಕಿಯಲ್ಲಿ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 43 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಹುಮಾನಾಬಾದ್ 6, ಅಂಗನವಾಡಿ ಸಹಾಯಕಿಯರ ಹುದ್ದೆಗಳು 34, ಚಿಟ್ಟಗುಪ್ಪ ಅಂಗನವಾಡಿ ಕಾರ್ಯಕ್ರೆತ 3 ಹಾಗೂ ಸಹಾಯಕಿಯರ 25 ಹುದ್ದೆಗಳು, ಕಮಲನಗರಕ್ಕೆ 5 ಅಂಗನವಾಡಿ ಕಾರ್ಯಕರ್ತೆ 12 ಸಹಾಯಕಿಯರ ಹುದ್ದೆಗಳ ಖಾಲಿಯಿವೆ.
ಗದಗ ಚಾಮರಾಜನಗರ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ
ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿಯಿರುವ 120 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 271 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
1000 anganawadi jobs applicaion ಯಾವ ಯಾವ ಪಂಚಾಯತ್ ನಿಂದ ಎಷ್ಟು ಹುದ್ದೆಗಳು ಖಾಲಿಯಿದೆ ?
ಶಿಶು ಅಭಿವೃದ್ಧಿ ಯೋಜನೆಯ ಚಾಮರಾಜನಗರ ತಾಲೂಕಿನಲಲ್ 14 ಅಂಗನವಾಡಿ ಕಾರ್ಯಕರ್ತೆಯರು, 43 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 57, ಸಂತೇಮರಹಳ್ಳಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆಯರು, 37 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 55, ಸಹಾಯಕಿಯರ ಹುದ್ದೆಗಳು ಸೇರಿದಂತ ಒಟ್ಟು 55, ಗುಂಡ್ಲುಪೇಟೆ ತಾಲೂಕಿನಲ್ಲಿ 46 ಅಂಗನವಾಡಿ ಕಾರ್ಯಕರ್ತೆಯರು, 76 ಸಹಾಯಕಿಯರ ಹುದ್ದೆಗಳ ಸೇರಿದಂತೆ ಒಟ್ಟು 112, ಕೊಳ್ಳೆಗಾಲ ತಾಲೂಕಿನಲ್ಲಿ 22 ಅಂಗನವಾಡಿ ಕಾರ್ಯಕರ್ತೆಯರು, 45 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 67, ಕೊಳ್ಳೇಗಾಲ (ಹನೂರು) ತಾಲೂಕಿನಲ್ಲಿ 21 ಅಂಗನವಾಡಿ ಕಾರ್ಯಕರ್ತೆಯರು, 48 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 69, ಯಳಂದೂರು ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆಯರು, 22 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ವೆಬ್ಸೈಟ್ ಮೂಲಕ ಡಿಸೆಂಬರ್ 4 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆ ಚಾಮರಾಜನಗರ 08226 222603, ಸಂತೇಮರಹಳ್ಳಿ 08226240215, ಗುಂಡ್ಲುಪೇಟೆ 08229222286, ಕೊಳ್ಳೇಗಾಲ, ಹನೂರು ದೂರವಾಣಿ ಸಂಖ್ಯೆ 08224252367, ಯಳಂದೂರು 08226240224 ಸಂಪರ್ಕಿಸಬಹುದು.
ಇದನ್ನೂ ಓದಿ ಕೃಷಿ ಯಂತ್ರೋಪಕರಣ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://karnemakaone.kar.nic.in/abcd/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸ್ಟೆಪ್ 1 ಮುಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣಲಾದ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.





