105 crore croploss compensation ರೈತರಿಗಿಲ್ಲಿದೆ ಗುಡ್ ನ್ಯೂಸ್. ರೈತರಿಗೆ ಗರಿಷ್ಠ 2 ಸಾವಿರ ರೂಪಾಯಿಯವರೆಗೆ ಬೆಳೆ ಹಾನಿ ಪರಿಹಾರ ನೀಡಲು 105 ಕೋಟಿ ರೂಪಾಯಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ಬೆಳೆ ಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2 ಸಾವಿರ ರೂಪಾಯಿಯವರೆಗೆ ಬರ ಪರಿಹಾರ ಹಣ ಪಾವತಿಸಲು 2023-24ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 105 ಕೋಟಿ ರೂಪಾಯಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೇಂದ್ರ ಸರ್ಕಾರದಂದ ಬರ ನಿರ್ವಹಣೆಗಾಗೆ ಎನ್.ಡಿ.ಆರ್.ಎಫ್ ಅನುದಾನ ನಿರೀಕ್ಷಿಸಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯ 11-07-2023 ರಲ್ಲಿ ಹೊರಡಿಸಿರುವ ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ಅರ್ಹ ರೈತರಿಗೆ ಬರ ಪರಿಸ್ಥಿತಿಯಿಂದ ಶೇ. 33 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 2 ಹೆಕ್ಟೇರ್ ಸೀಮಿತಗೊಳಿಸಿ ಇನ್ಪುಟ್ ಸಬ್ಸಿಡಿ ನಿಗದಿಪಡಿಸಲಾಗಿದೆ.
ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರಿಗೆ 8500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರರೂಪಾಯಿ ಹಾಗೂ ಬಹುವಾರ್ಷಿಕ ಬೆಳೆಗೆ 22500 ರೂಪಾಯಿ ನಿಗದಿ ಮಾಡಲಾಗಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಒರಿಜಿನಲ್ ಟಿಪ್ಪಣಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಷರತ್ತುಗಳ ಪಾಲನೆಗೆ ಒಳಪಟ್ಟು ಬಿಡುಗಡೆಗೊಳಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ. ಪ್ರತಿ ರೈತರಿಗೆ ಗರಿಷ್ಠ 2 ಸಾವಿರ ರೂಪಾಯಿಯವರೆಗೆ ರೈತರಿಗೆ ಪಾವತಿಸಲು ಆದೇಶ ಹೊರಡಿಸಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನ ಬಿಡುಗಡೆ ಆದ ನಂತರ ಎಸ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆ ಹಾನಿ ಪರಿಹಾರ ಹಣ ಬಿಡುಗಡೆಗೊಳಿಸಲಾಗುವದು ಎಂದು ಸರ್ಕಾರ ತಿಳಿಸಿದೆ.
ಬೆಳೆ ಹಾನಿ ಪರಿಹಾರವನ್ನು ಭೂಮಿ ಸೆಲ್ ನಿರ್ವಹಿಸುತ್ತಿರುವ ಪರಿಹಾರ ತಂತ್ರಾಂಶದ ಮೂಲಕ ವಿತರಣೆ ಮಾಡಲಾಗುತ್ತಿದ್ದು, ಪ್ರಸ್ತುತ ವರ್ಷ ಬರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರೈತರಿಗೆ ತ್ವರಿತ ಮತ್ತು ಕ್ರಮಬದ್ಧವಾಗಿ ಬೆಳೆ ಹಾನಿ ಪರಿಹಾರವನ್ನುವಿತರಿಸಲು ಇ ಆಡಳಿತ ಇಲಾಖಯಿಂದ ನಿರ್ವಹಣೆಯಾಗುತ್ತಿರುವ ಫ್ರೂಟ್ಸ್ ತಂತ್ರಾಂಶ ಹಾಗೂ 2023ರ ಸಾಲಿನ ಮುಂಗಾರು ಋತುವಿನ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯನ್ನು ಭೂಮಿ ಸೆಲ್ ನವರು ಇ ಆಡಳಿತ ಇಲಾಖೆಯಿಂದ ಪಡೆಯಲಾಗುವುದು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿ ಫಾರ್ಮರ್ಸ್ ಐಡಿ ಹೊಂದಿರುವ ಹಾಗೂ ಬರ ಘೋಷಣೆಯಾಗಿರುವ ತಾಲೂಕುಗಳಲ್ಲಿರುವ ರೈತರಿಗೆ ಬೆಳೆಹಾನಿ ಪರಿಹಾರ ನೀಡಲಾಗುವುದು.
105 crore croploss compensation ಯಾರಿಗೆ ಎಷ್ಟು ಜಮೆಯಾಗಿದೆ? ಮೊಬೈಲ್ ನಲ್ಲಿ ಚೆಕ್ ಮಾಡಿ
ಬರ ಪರಿಹಾರ ಜಮೆಯಾಗಿರುವುದನ್ನು ಚೆಕ್ ಮಾಡಲು ಈ
https://parihara.karnataka.gov.in/service87/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮಊರು ಆಯ್ಕೆ ಮಾಡಿಕೊಳ್ಳಬೇಕು.
select Year ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ select Season ನಲ್ಲಿ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕು. Select Calamity ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.
ಯಾವ ದಾಖಲೆ ಇದ್ದವರಿಗೆ ಹಣ ಜಮೆಯಾಗುವುದು?
ಬೆಳೆ ಹಾನಿ ಪರಿಹಾರ ಪಡೆಯುವ ರೈತರು ಜಮೀನಿಗೆ ಸಂಬಂಧಿಸಿದ ಅಗತ್ಯ ದಾಖಲೆ ಹೊಂದಿರಬೇಕು. ಬೆಳೆ ಹಾನಿ ಪರಿಹಾರ ಪಡೆಯುವ ಫಲಾನುಭವಿಯ ಆಧಾರ್ ಸಂಖ್ಯೆು ಬ್ಯಾಂಕ್ ಖಾತೆಗೆ ಜೋಡಣೆಯಾಗಿರಬೇಕು. ಅಂತಹ ಫಲಾನುಭವಿಗಳಿಗೆ ನಿಯಮಾನುಸಾರ ಆಧಾರ್ ಜೋಡಣೆ ಆಗಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಬೆಳೆ ಹಾನಿ ಪರಿಹಾರ ಪಾವತಿ ಮಾಡಲಾಗುವುದು.