ಬೆಳೆಹಾನಿ ಪರಿಹಾರಕ್ಕೆ 130 ಕೋಟಿ ಬಿಡುಗಡೆ

Written by By: janajagran

Updated on:

130 crore released for cropdamage  ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿಗೊಳಗಾಗಿರುವ ರೈತರಿಗೆ ಪರಿಹಾರ ನೀಡಲು ತಕ್ಷಣ 130 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ಸುರಿದ ಮಳೆಯಿಂದಾಗಿ ಉಂಟಾದ ಹಾನಿಯ ಕುರಿತು ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವೀಡಿಯೋ ಸಂವಾದ ನಡೆಸಿದರು.  ಪರಿಹಾರಕ್ಕೆ ಈ ಹಿಂದಿನ ವರ್ಷಗಳಲ್ಲಿ ಹೊರಡಿಸಿರುವ ಮಾರ್ಗಸೂಚಿಗಳನ್ನೇ ಪಾಲಿಸಲು ಅವರು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಳೆಯಿಂದಾಗಿ ಬೆಳೆ ಹಾನಿ, ಜನಜಾನುವಾರುಗಳ ಪ್ರಾಣ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿ ಪ್ರಕಾರ ಫಲಾನುಭವಿಗಳಿಗೆ ತಾತ್ಕಾಲಿಕ ಪರಿಹರ ಒದಗಿಸಲು ತಕ್ಷಣ ಕ್ರಮಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಅನದಾನವಿಲ್ಲವೆಂಬ ನೆಪ ಹೇಳದೆ ತಕ್ಷಣವೇ ಜಿಲ್ಲಾಡಳಿತಗಳ ಬಳಿಯಿರುವ ಎನ್.ಡಿ.ಆರ್.ಎಫ್ ಅನುದಾನದಲ್ಲಿ ಪರಿಹಾರ ಕಾರ್ಯ ಆರಂಭಿಸಬೇಕು.  ಸಂಪೂರ್ಣ ಮನೆ ಕುಸಿತಕ್ಕೆ ತಾತ್ಕಾಲಿಕವಾಗಿ 1 ಲಕ್ಷ ರೂಪಾಯಿ, ಭಾಗಶ ಮನೆ ಕುಸಿತಕ್ಕೆ ತಲಾ 10 ಸಾವಿರ ರೂಪಾಯಿ ಉಳಿದಂತೆ ಜನ,ಜಾನುವಾರುಗಳ ಪ್ರಾಣಹಾನಿಗೆ ನಿಯಮಾನುಸಾರ ತಕ್ಷಣ ಪರಿಹಾರ ನೀಡಲು ಸೂಚಿಸಿದ್ದಾರೆ.

ಬೆಳೆ ಹಾನಿಯಾದ ರೈತರ ಖಾತೆಗೆ ಪರಿಹಾರ ಹಣ ಜಮೆ-ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈಗಾಗಲೇ ವ್ಯಾಪಕವಾಗಿ ಅಕಾಲಿಕ ಮಳೆಯಾಗಿದೆ. ಅಕ್ಟೋಬರ್ ಮತ್ತು ನವಂಬರ್ ತಿಂಗಳಲ್ಲಿ ಹೆಚ್ಚು ಮಳೆಯಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಕೇಳಿದ್ದೇನೆ.  ವಿಶೇಷವಾಗೀ ಈ ಬಾರಿ ಹೆಚ್ಚು ಬೆಳೆ ಹಾನಿಯಾಗಿದೆ. ನಿಖರವಾದ ಮಾಹಿತಿಯನ್ನು ಪ್ರತಿಯೊಂದು ಜಿಲ್ಲೆಯಿಂದ ಪಡೆದುಕೊಳ್ಳುತ್ತಿದ್ದೇನೆ ಪ್ರಾಥಮಿಕ ಸಮೀಕ್ಷೆ ಆದ ತಕ್ಷಣವೇ ಪರಿಹಾರ ಕೊಡುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

130 crore released for cropdamage  ಬೆಳೆಹಾನಿ ಪರಿಹಾರಕ್ಕೆ 130 ಕೋಟಿ ಬಿಡುಗಡೆ-ಆರ್. ಅಶೋಕ

ಮಳೆಯಿಂದಾಗಿ ಬೆಳೆ ಹಾನಿಯಾದ ಸಂಬಂಧ ಪರಿಹಾರ ಕಾರ್ಯಗಳಿಗೆ 130 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಕಾಲಿಕ ಮಳೆಯಿಂದಾಗಿ ಹಲವು ಬೆಳೆಗಳು ನಾಶವಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಎಷ್ಟು ನಷ್ಟವಾಗಿದೆ ಎಂದು ಅಧಿಕಾರಿಗಳು ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದು. ಯಾವ ಯಾವ ಬೆಳೆಗೆ ಎಷ್ಟು ಪರಿಹಾರ ಎಂಬುದರ ಕುರಿತು ಈಗಾಗಲೇ ಬೆಲೆ ನಿಗದಿಯಾಗಿದೆ.

ಬೆಳೆಹಾನಿಗೆ ಕೂಡಲೇ ಪರಿಹಾರ-ಬಿ.ಸಿ. ಪಾಟೀಲ್

ಅಕಾಲಿಕ ಮಳೆಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸರ್ಕಾರ ನಿಮ್ಮೊಂದಿಗಿದೆ. ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಾಥಮಿಕ ಸಮೀಕ್ಷೆ ಮುಗಿದ ತಕ್ಷಣ ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ಅಕಾಲಿಕ ಮಳೆಯಿದಾಗಿ ಈ ತಿಂಗಳಲ್ಲಿ 3.63 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು.

Leave a Comment