2021-22ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ 2.25 ಲಕ್ಷ ರೂಪಾಯಿ ಸಬ್ಸಿಡಿಯಲ್ಲಿ ಬೋರ್ವೆಲ್ ಕೊರೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಪ್ರವರ್ಗ-1ರಲ್ಲಿ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ರೈತರು ಕನಿಷ್ಠ 02 ಎಕರೆ ಹಾಗೂ ಗರಿಷ್ಠ 05 ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತೀ ಸಣ್ಣ ರೈತರಾಗಿರಬೇಕು. ವಾರ್ಷಿಕ ವರಮಾನ 98,000 ರೂಪಾಯಿಗಳ ಮಿತಿಯಲ್ಲಿರಬೇಕು. ಅರ್ಜಿದಾರರ ವಯೋಮಿತಿ ಕನಿಷ್ಠ 18 ವರ್ಷ ದಿಂದ ಗರಿಷ್ಠ 55 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳನ್ನು ಹೊಂದಿರಬೇಕು?
ಅರ್ಜಿದಾರರು 2 ಪಾಸ್ಪೋರ್ಟ್ ಅಳತೆಯ ಫೋಟೊಗಳನ್ನುಹೊಂದಿರಬೇಕು. ಕಂದಾಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಭೂಹಿಡುವಳಿ ಸಣ್ಣ ಹಾಗೂ ಅತೀ ಸಣ್ಣ ರೈತರ ದೃಡೀಕರಣ ಪ್ರಮಾಣ ಪತ್ರ ಹೊಂದಿರಬೇಕು.ಹಾಲಿ ಜಮೀನಿನಲ್ಲಿ ನೀರಾವರಿ ಸೌಲಭ್ಯ ಇಲ್ಲದೆ ಇರುವ ಬಗ್ಗೆಕಂದಾಯ ಇಲಾಖಾ ಅಧಿಕಾರಿಗಳಿಂದ ದೃಢೀಕರಣ ಪ್ರಮಾಣ ಪತ್ರ ಹೊಂದಿರಬೇಕು. ವಾಸಸ್ಥಳ ಪ್ರಮಾಣ ಪತ್ರಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಜಮೀನಿನ ಪಹಣಿ ಹೊಂದಿರಬೇಕು.
ರೈತರಿಗೆ ನೀಡುವ ಸಹಾಯಧನ ಎಷ್ಠು ಗೊತ್ತೇ?
ಗಂಗಾ ಕಲ್ಯಾಣ ಯೋಜನೆಯಡಿ 24 ಜಿಲ್ಲೆಗಳಿಗೆ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕ ವೆಚ್ಚ 2.25 ಲಕ್ಷ ರೂಪಾಯಿ ಸಹಾಯಧನವನ್ನು ನಿಗದಿಪಡಿಸಿದೆ. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಸೌಲಭ್ಯ ಒದಗಿಸಲು ಅವಕಾಶ ಇರುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಘಟಕ ವೆಚ್ಚ 3.75 ಲಕ್ಷ ರೂಪಾಯಿ ಸಹಾಯಧನವನ್ನು ನಿಗದಿಪಡಿಸಲಾಗಿದೆ. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರಿ ಸೌಲಭ್ಯಒದಗಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://ambigaradevelopment.karnataka.gov.in/
ಗೆ ಸಂಪರ್ಕಿಸಬಹುದು. ಇದಲ್ಲದೇ ನಿಗಮದ ಕೇಂದ್ರ ಕಚೇರಿಯ ಸಹಾಯವಾಣಿ ದೂರವಾಣಿ ಸಂಖ್ಯೆ 080-22864099ಗೆ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ 2022ರ ಮಾರ್ಚ್ 10ರ ಸಂಜೆ 5.30 ಗಂಟೆಯೊಳಗಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಗಂಗಾ ಕಲ್ಯಾಣ ಯೋಜನೆಯ ಅರ್ಜಿ ನಮೂನೆ ಪಡೆಯಲು ರೈತರು
https://ambigaradevelopment.karnataka.gov.in/storage/pdf-files/GK%20Form.pdf
ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅರ್ಜಿ ಓಪನ್ ಆಗುತ್ತದೆ. ರೈತರು ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡುಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.