ನಾಳೆಯಿಂದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

Written by Ramlinganna

Published on:

2 days rain : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಳಿ ಪರಿಣಾಮ ರಾಜ್ಯದಲ್ಲಿ ಮಂಗಳವಾರದಿಂದ (ಜನವರಿ 14) ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಇಂತಹ ಮಾಹಿತಿ ಪಡೆಯಿರಿ

ದಕ್ಷಿಣ ಕರ್ನಾಟಕ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರಗಳಲ್ಲಿ 14 ರಂದು ಹಾಗೂ ಹಾಸನ ಕೊಡಗು, ಮಂಡ್ಯ, ಮೈಸೂರು ಹಾಗೂ ತುಮಕೂರಿನಲ್ಲಿ ಜನವರಿ15 ರಂದು ಸಾಧಾರಣ ಮಳೆಯಾಗಲಿದೆ. ಉತ್ತರ ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೀದರ್, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ  ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಮಂಜು ಹೆಚ್ಚಾಗಿ ಬೀಳಲಿದೆ.

ಇದನ್ನೂ ಓದಿ ಈ ರೈತರಿಗಷ್ಟೇ ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಜಮೆ

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಾಗಿದೆ.ಕೆಲ ಜಿಲ್ಲೆಗಳಲ್ಲಿ ಮಾತ್ರ ಕನಿಷ್ಠ ಹಾಗೂ ಗರಿಷ್ಠ ತಾಪಮಾನದಲ್ಲಿ ಸರಾಸರಿ 1-2 ಡಿ.ಸೆ ಉಷ್ಣಾಂಶ ಕುಸಿತವಾಗಲಿದೆ. ರಾತ್ರಿ ವೇಳೆ ಶೀತ ಗಾಳಿಯೂ ಬೀಸಲಿದೆ ಎಂದು ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

2 days rain ಬೆಂಗಳೂರಿನಲ್ಲಿ ತಾಪಮಾನ ಕುಸಿತ

ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ಮುಂದುವರೆದಿದ್ದು, ಮುಂದಿನ 48 ಗಂಟೆಗಳ ಕಾಲ ರಾಜಧಾನಿಯಲ್ಲಿ ತಾಪಮಾನ 18 ಡಿ.ಸಿ ದಿಂದ 25 ಡಿ.ಸೆ ವರೆಗೆ ಇರಲಿದೆ ಎನ್ನಲಾಗಿದೆ.

2 days rain ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಮಳೆ ಮಾಹಿತಿ ಬೇಕೆ? ಈ ನಂಬರಿಗೆ ಕರೆ

ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹೌದು, 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.

ಸಿಡಿಲು ಆ್ಯಪ್ ಸಿಡಿಲು ಬೀಳುವ ಮೊದಲೇ ತಿಳಿಸಲಿದೆ

ಸಿಡಿಲು ಎಂಬ ಆ್ಯಪ್ ನ್ನು ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಳ್ಳಲು ಈ

https://play.google.com/store/apps/details?id=com.moserptech.sidilu&hl=en&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು  ಅಲ್ಲಿ ಕಾಣುವ install ಮೇಲೆ ಕ್ಲಿಕ್ ಮಾಡಬೇಕು.ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. Allow Sidilu to access this devices location  ಕೆಳಕಡೆ While using the App ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಇದ್ದ ಸ್ಥಳದ ಸುತ್ತಮುತ್ತ ಎಲ್ಲಲ್ಲಿ ಸಿಡಿಲು ಬಡಿಯುವ ಸಾಧ್ಯತೆಯಿದೆ ಎಂಬು ಕಾಣಿಸುತ್ತದೆ.

ಒಂದು ವೇಳೆ ನಿಮ್ಮ ಸುತ್ತಮುತ್ತ ಸಿಡಿಲು ಬಡಿಯುವ ಸಾಧ್ಯತೆಯಿಲ್ಲದಿದ್ದಲ್ಲಿ No lightning activity in your area  ಎಂಬ ಮೆಸೇಜ್ ಗೋಚರಿಸುತ್ತದೆ. ನೀವು ಇದ್ದ ಸ್ಥಳ ತೋರಿಸಲಾಗಿರುತ್ತದೆ. ನಿಮ್ಮ ಸುತ್ತಮುತ್ತ 1 ಕಿ.ಮೀ ದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಸಿಡುಲು ಬೀಳುವ ಸಾಧ್ಯತೆಯಿದ್ದರೆ ಅಲ್ಲಿ ನಿಮಗೆ ಮೆಸೇಜ್ ಗೋಚರಿಸುತ್ತದೆ.

Thunder (ಗುಡುಗು) ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಇರುತ್ತದೆಯೋ ಇಲ್ಲವೋ ಎಂಬ ಮೆಸೆಜ್ ಗೋಚರಿಸುತ್ತದೆ.

Leave a Comment