ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2021-22ನೇ ಸಾಲಿನಲ್ಲಿ ಕೆಳಕಂಡ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಯಡಿ: ಈ ಯೋಜನೆಯಡಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (2,3,4,5ನೇ ಕಂತುಗಳು) ಸುವಿಧಾ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು https://suvidha.karnataka.gov.in/ ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ 2022ರ ಜನವರಿ 10 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ನಿಗಮದ https://dbcdc.karnataka.gov.in/ ವೆಬ್‌ಸೈಟ್‌ದಿಂದ ಪಡೆಯಬಹುದಾಗಿದೆ. ಈ ಹಿಂದಿನಂತೆಯೇ ಕೆಳಕಂಡ ಯೋಜನೆಯಡಿ ಸೌಲಭ್ಯ ಪಡೆಯಲು ಅಭ್ಯರ್ಥಿಗಳು ನೇರವಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ: ಈ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ.ಗಳ ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.
ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಸೇರಿದವರಾಗಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.
ಅರ್ಹ ಅಭ್ಯರ್ಥಿಗಳು ಈ ಹಿಂದಿನAತೆಯೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗವ್ಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ವೆಬ್‌ಸೈಟ್‌ನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ 2022ರ ಜನವರಿ 10 ರೊಳಗಾಗಿ ಜಿಲ್ಲಾ ಕಚೇರಿಗೆ ನೇರವಾಗಿ ಸಲ್ಲಿಸಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನ್ನು, ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ:080-22374832ಗೆ ಸಂಪರ್ಕಿಸಲು ಕೋರಲಾಗಿದೆ.