ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ ಎಸ್ಪಿ/ಟಿಎಸ್ಪಿ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿ ವಾಹನ ಖರೀದಿಗೆ 2 ಲಕ್ಷ ರೂಪಾಯಿ ಸಹಾಯಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪ್ರವಾಸೋದ್ಯಮ ಇಲಾಖೆಯಿಂದ 20213-14ನೇ ಸಾಲಿನಿಂದ2016-17ನೇ ಸಾಲಿನವರೆಗೆ ಎಸ್.ಸಿ.ಎಸ್.ಪಿ ಟಿಎಸ್.ಪಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಬಾಕಿಯಿರುವ ಪರಿಶಿಷ್ಟ ಜಾತಿಗೆ 7 ಹಾಗೂ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 8 ಅಭ್ಯರ್ಥಿಗಳು ಸೇರಿದಂತೆ ಒಟ್ಟು 15 ಪ್ರವಾಸಿ ಟ್ಯಾಕ್ಸಿ ಖರೀದಿಸಲು ತಲಾ 2 ಲಕ್ಷ ಸಹಾಯಧನದಲ್ಲಿ ಟ್ಯಾಕ್ಲಿ ಕಲ್ಪಿಸುವ ಸಂಬಂಧ ಅರ್ಜಿ ಸಲ್ಲಿಸುವಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ.
ಪ್ರವಾಸಿ ಟ್ಯಾಕ್ಸಿ ವಾಹನ ಚಲಾಯಿಸಲು ಆಸಕ್ತಿಯಿರುವ ವಿದ್ಯಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಪಡೆದುಕೊಳ್ಳುವ ದೃಷ್ಟಿಯಿಂದ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಸಹಾಯಧನ ನೀಡಲಾಗುವುದು. ಪ್ರವಾಸಿ ಟ್ಯಾಕ್ಸಿಗಳಿಗೆ ತಗಲುವ ಒಟ್ಟು ವೆಚ್ಚದಲ್ಲಿ 2 ಲಕ್ಷ ರೂಪಾಯಿಗಳನ್ನು ಇಲಾಖೆಯಿಂದ ಸಹಾಯಧನ ರೂಪದಲ್ಲಿ ಭರಿಸಲಾಗುವುದು. ಶೇ. 5 ರಷ್ಟು ಹಣವನ್ನು ಫಲಾನುಭವಿಗಳು ಭರಿಸಬೇಕು. ಉಳಿದ ಮೊತ್ತವನ್ನು ರಾಷ್ಟ್ರೀಕೃತ/ವಾಣಿಜ್ಯ ಬ್ಯಾಂಕ್ ಮೂಲಕ ಸಾಲ ಒದಗಿಸಲಾಗುವುದು.
ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ವಯಸ್ಸು ಎಷ್ಟಿರಬೇಕು?
ಅರ್ಜಿದಾರರು ಕನಿಷ್ಟ 20 ವರ್ಷದಿಂದ ಗರಿಷ್ಠ 45 ವರ್ಷದೊಳಗಿರಬೇಕು. ಕನಿಷ್ಠ 10 ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳಲ್ಲಿ ವಾಹನಾ ಚಾಲನಾ ಪರವಾನಗಿ ಬ್ಯಾಡ್ಜ್ ಪಡೆಯಬೇಕು. ಪಡೆಯಬೇಕು. ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು. ಅರ್ಜಿದಾರರು ಯಾವ ಜಿಲ್ಲೆಯ ನಿವಾಸಿಯಾಗಿರುತ್ತಾರೋ ಅದೇ ಜಿಲ್ಲೆಯಲ್ಲಿ ಅರರ್ಜಿ ಸಲ್ಲಿಸಬೇಕು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅಭ್ಯರ್ಥಿಗಳು ಯಾವ ಯಾವ ದಾಖಲೆ ಹೊಂದಿರಬೇಕು?
ಅಭ್ಯರ್ಥಿಗಳು ಪಡಿತರ ಚೀಟಿ ಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ವಾಸಸ್ಥಳ ಪ್ರಮಾಣ ಪತ್ರ ಪಡೆದಿರಬೇಕು. ಲಘು ವಾಹನ ಚಾಲನಾ ಪರವಾನಗಿ ಪ್ರಮಾಣ ಪತ್ರ ಪಡೆದಿರಬೇಕು. ಎಸ್.ಎಸ್.ಎಲ್.ಸಿ ಅಂಕಪಟ್ಟಿ ಹೊಂದಿರಬೇಕು. ಅರ್ಜಿದಾರರ ಕುಟುಂಬದಲ್ಲಿ ಯಾವೊಬ್ಬ ಸದಸ್ಯರು ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಟ್ಯಾಕ್ಸಿ ಪಡೆದಿರಬಾರದು.
ಅರ್ಜಿ ಎಲ್ಲಿ ಸಲ್ಲಿಸಬೇಕು?
ಅರ್ಜಿದಾರರು ನಿಗದಿ ಪಡಿಸಿದ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆಯಿಂದ ಪಡೆದು ಅಗತ್ಯ ದಾಖಲೆಗಳನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಲು ಕೋರಲಾಗಿದೆ. ಆಸಕ್ತರು ಸಹಾಯಕ ನಿರ್ದೇಶಕ ಕಚೇರಿ, ಪ್ರವಾಸೋದ್ಯಮ ಇಲಾಖೆ, ಉಪ ವಿಭಾಗಾಧಿಕಾರಿಗಳ ಕಚೇರಿ ಆವರಣ, ರೈಲ್ವೆ ನಿಲ್ದಾಣದ ಪಕ್ಕ ದಾವಣಗೆರೆ ಇವರಿಂದ ಅರ್ಜಿ ಪಡೆದು ಮೇ 20 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಪಿಎಂ ಕಿಸಾನ್ ಸ್ಟೇಟಸ್ ನಲ್ಲಿ Payment Processed ಕಾಣುತ್ತಿದೆಯೇ? ಏನಿದರ ಅರ್ಥ? ಮೊಬೈಲ್ ನಲ್ಲೇ ಚೆಕ್ ಮಾಡಿ
ಸದ್ಯ ದಾವಣಗೆರೆ ಜಿಲ್ಲೆಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರ ಜಿಲ್ಲೆಯ ಅಭ್ಯರ್ಥಿಗಳಿಂದಲೂ ಅರ್ಜಿ ಆಹ್ವಾನಿಸುವ ಸಾಧ್ಯತೆಯಿದೆ.
ದಾವಣಗೆರೆ ಜಿಲ್ಲೆಯ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಅಗತ್ಯ ದಾಖಲೆಗಳು ಸಲ್ಲಿಸಿ ಸರ್ಕಾರದ ಸಹಾಯಧನದ ಸೌಲಭ್ಯ ಪಡೆದುಕೊಂಡು ಜೀವನ ರೂಪಿಸಿಕೊಳ್ಳಬಹುದು.