ಇಂದು 20 ಜಿಲ್ಲೆಗಳಲ್ಲಿ ಭಾರಿ ಮಳೆ- ಯೆಲ್ಲೋ ಅಲರ್ಟ್ ಘೋಷಣೆ

Written by Ramlinganna

Published on:

20 district rain alert : ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಹೌದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಭಾಗದಲ್ಲಿ ಸಾಧಾರಣೆ ಮಳೆಯಾಗಲಿದೆ. ಅದೇ ರೀತಿ ಜುಲೈ 24 ಮತ್ತು 25 ರಂದು ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಆದರೆ ಮತ್ತೆ ಜುಲೈ 26 ರಂದು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ರೈತರಲ್ಲಿ ಹರ್ಷ ತಂದಿದೆ.

20 district rain alert ರಾಜ್ಯದ ಯಾವ ಯಾವ 20 ಜಿಲ್ಲೆಗಳಲ್ಲಿ ಮಳೆಯಾಗಲಿದೆ ?

ಜುಲೈ 23 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಪುಡಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ, ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಆದರೆ ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆ ಇಲ್ಲ.

ಜುಲೈ 26 ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲಿದೆ. ಹಾಗಾಗಿ  ಈ ಜಿಲ್ಲೆಗಳಿಗೆ ಯೆಲ್ಲೋ ಅಳರ್ಟ್ ಎಚ್ಚರಿಕೆ ನೀಡಲಾಗಿದೆ.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ಮೊಬೈಲ್ ನಲ್ಲಿಯೇ ಜಮೀನಿನ ಪೋಡಿ ನಕ್ಷೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ  ಪಡೆಯಬಹುದು.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ತಿಳಿದುಕೊಳ್ಳಬಹುದು.

Leave a Comment