ರೈತರಿಗೆ ಬಂಪರ್ ಕೊಡುಗೆ ರೈತರಿಗೆ 20000 ಕೋಟಿ ಬಿಡುಗಡೆ

Written by Ramlinganna

Published on:

20000 crore fund release : ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ಮೊದಲ ದಿನವೇ ದೇಶದ ರೈತಾಪಿ ವರ್ಗ,ಬಡವರು, ಹಾಗೂ ಮಧ್ಯಮ ವರ್ಗದ ಜನತೆಗೆ ಭರ್ಜರಿ ಕೊಡುಗೆಗಳನ್ನುಪ್ರಕಟಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮೊದಲ ಕೊಡುಗೆಯಾಗಿ 9 ಕೋಟಿ ರೈತರಿಗೆ 20000 ಕೋಟಿ ರೂಪಾಯಿ ಮೊತ್ತದ ಪಿಎಂ ಕಿಸಾನ್ ನಿಧಿ ಬಿಡುಗಡೆಗೆ ಸೂಚಿಸಿದ್ದಾರೆ.

9.3 ಕೋಟಿ ರೈತರಿಗೆ ಅನುಕೂಲವಾಗಲಿರುವ 20,000 ಕೋಟಿ ರೂಪಾಯಿ ಮೊತ್ತದ ಪಿಎಂ ಕಿಸಾನ್ ನಿಧಿ ಯ 17ನೇ ಕಂತಿನ ಬಿಡುಗಡೆಗೆ ಅಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ.

ಹಣ ಬಿಡುಗಡೆಗೆ ಸಹಿ ಹಾಕಿದ ನಂತರ ಹೇಳಿಕೆ ನೀಡಿರುವ ಅವರು, ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣ ಬದ್ಧವಾಗಿರುವ ಸರ್ಕಾರವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತವು ಇದಕ್ಕೆ ಸಂಬಂಧಿಸಿದೆ ಎಂಬುದುರ ಸೂಕ್ತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ ಎಂದು ಹೇಳಿದ್ದಾರೆ.ಈ ಯೋಜನೆ ರೈತರಿಗೆ ವರ್ಷಕ್ಕೆ ತಲಾ 6 ಸಾವಿರ ರೂಪಾಯಿ ನೀಡುವ (ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿ)  ಯೋಜನೆ ಆಗಿದ್ದು, ಮೋದಿ-2 ಸರ್ಕಾರದಲ್ಲಿ ಈ ಯೋಜನೆ ಜಾರಿಗೆ ಬಂದಿತ್ತು.

20000 crore fund release ಪಿಎಂ ಕಿಸಾನ್ ಜಮೆಯ ಸ್ಟೇಟಸ್ ಮೊಬೈಲ್ ನಲ್ಲಿಚೆಕ್ ಮಾಡಿ

ಮತ್ತೊಂದೆಡೆ ಮೊದಲ ಸಚಿವ ಸಂಪೂಟ ಸಭೆಯಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ 3 ಕೋಟಿ ಮನೆ ನಿರ್ಮಾಣಕ್ಕೆ ಹಣಕಾಸಿನ ನೆರವು ಪ್ರಕಟಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ಮನೆ ನಿರ್ಮಿಸುವ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಿಸದೆ. ಹೀಗಾಗಿ ಕುಟುಂಬಗಳು ಮನೆ ನಿರ್ಮಾಣದ ಖರ್ಚು ವೆಚ್ಚವನ್ನು ಸರಿದೂಗಿಸಲು ಇನ್ನೂಹೆಚ್ಚುವರಿಯಾಗಿ 3 ಕೋಟಿಗ್ರಾಮೀಣ ಹಾಗೂ ನಗರ ಕುಟುಂಬಗಳ ಮನೆಗೆ ನೆರವು ನೀಡಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx     

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ನಮೂದಿಸಿ ನೀವು ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ ನೀವು ಈ

https://pmkisan.gov.in/KnowYour_Registration.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಗೆಟ್ ಡಿಟೇಲ್ಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ಕಾಣಿಸುತ್ತದೆ. ನಿಮ್ಮ ಹೆಸರು ಕಾಣಿಸುತ್ತದೆ. ನಿಮ್ಮ ನೋಂದಣಿ ಸಂಖ್ಯೆ ಬರೆದಿಟ್ಟುಕೊಳ್ಳಬೇಕು.ಅಥವಾ ಕಾಪಿ ಮಾಡಿಕೊಳ್ಳಬೇಕು. ನಂತರ ಬ್ಯಾಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು Know your status ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂಓದಿ ಎಷ್ಟು ಬೆಳೆ ಹಾನಿಯಾದರೆ ಎಷ್ಟು ವಿಮೆ ಹಣ ಜಮೆಯಾಗಲಿದೆ? ಇಲ್ಲಿದೆ ಮಾಹಿತಿ

ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದೇ ನಿಮ್ಮ ಸ್ಟೇಟಸ್ ಪೇಜ್ ಆಗಿರುತ್ತದೆ.

 

Leave a Comment