23 crore compensation released ಕಳೆದ ಸಾಲಿನಲ್ಲಿ ಅತೀವೃಷ್ಟಿಯಿಂದ ಹಾಗೂ ನೆಟೆ ರೋಗದಿಂದ ಬೆಳೆ ಹಾನಿಯಾದ ರೈತರ ಖಾತೆಗೆ ಮೂರು ದಿನಗಳಲ್ಲಿ ಪರಿಹಾರ ಹಣ ಜಮೆ ಮಾಡಲಾಗುವುದು.
ಹೌದು, ಅತೀವಷ್ಟಿಯಿಂದ, ನೆಟೆ ರೋಗದಿಂದ ಹಾನಿಗೊಳಗಾದ ಬೆಳೆಗಳಿಂದ ಕಂಗಾಲಾಗಿರುವ ರೈತರಿಗೆ ಬಿಡುಗಡೆ ಆಗಬೇಕಿರುವ 23 ಕೋಟಿ ರೂಪಾಯಿಗಳ ಪರಿಹಾರ ಹಣವನ್ನು ಮೂರು ದಿನಗಳಲ್ಲಿ ರೈತರ ಖಾತೆಗೆ ಜಮೆ ಮಾಡುವಂತೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ಅವರು ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಮಾತನಾಡಿ, ಮುಂಗಾರು ಬಿತ್ತನೆಯ ಸಮಯ ಆರಂಭವಾಗಿದೆ. ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ ಖರೀದಿ ಸೇರಿದಂತೆ ಇನ್ನಿತರ ಕೃಷಿ ಚಟುವಟಿಕೆಗಳಿಗೆ ಹಣದ ಅವಶ್ಯಕತೆ ಇರುತ್ತದೆ. ಹೀಗಾಗಿ ಪರಿಹಾರ ಧನ ಮೂರ್ನಾಲ್ಕು ದಿನಗಳ ಒಳಗಾಗಿ ರೈತರಿಗೆ ಪಾವತಿಸಬೇಕೆಂದು ತಿಳಿಸಿದರು.
ಇದನ್ನೂ ಓದಿ : ಪಿಎಂ ಕಿಸಾನ್ ಮುಂದಿನ ಕಂತು ಜಮೆಯಾಗಲಿ ಇಕೆವೈಸಿ ಕಡ್ಡಾಯ- ಇಕೆವೈಸಿ ಆಗಿದೆಯೇ? ಚೆಕ್ ಮಾಡಿ
ಬೀದರ್ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ 5577 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು, 1666 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳು ಹಾನಿಗೊಳಗಾಗಿದ್ದು, ಇವೆರಡಕ್ಕೂ ಒಟ್ಟು 7.85 ಕೋಟಿ ರೂಪಾಯಿ ಮಂಜೂರಾಗಿದೆ. ನೆಟೆ ರೋಗದಿಂದ ಹಾನಿಗೀಡಾದ 14494 ಹೆಕ್ಟೇರ್ ತೊಗರಿ ಬೆಳೆಗೆ 14.49 ಕೋಟಿ ರೂಪಾಯಿ (ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂಪಾಯಿಗಳಂತೆ) ಮಂಜೂರಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ಈ ಎರಡೂ ಬೆಳೆ ಹಾನಿ ಪರಿಹಾರ ಒಟ್ಟು ಸುಮಾರು 23 ಕೋಟಿ ರೂಪಾಯಿಗಳನ್ನು ಆಯಾ ರೈತರ ಖಾತೆಗಳಿಗೆ ಮೂರ್ನಾಲ್ಕು ದಿನಗಳಲ್ಲಿ ಜಮೆ ಆಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾಧಿಕಾರಿ ಗೋವಿಂದರೆಡ್ಡಿಯವರಿಗೆ ಸೂಚಿಸಿದರು.
23 crore compensation released ಬೆಳೆ ಹಾನಿ ನಿಮಗೆಷ್ಟು ಜಮೆಯಾಗಿದೆ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ರೈತರು ಮನೆಯಲ್ಲಿಯೇ ಕುಳಿತು ತಮಗೆಷ್ಟು ಬೆಳೆ ಹಾನಿಯಾಗಿದೆ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಪರಿಹಾರ ಹಣ ಸಂದಾಯ ವರದಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿರೈತರು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿನಲ್ಲಿಫ್ಲಡ್ ಆಯ್ಕೆ ಮಾಡಿಕೊಂಡು ಇಯರ್ ನಲ್ಲಿ 2022-23 ಆಯ್ಕೆ ಮಾಡಿಕೊಳ್ಳಬೇಕು. ನಂತರ 12 ಅಂಕಿಗಳ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ಅದರ ಮುಂದುಗಡೆ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿದ ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಅತೀವೃಷ್ಟಿಯಿಂದ ಬೆಳೆ ಹಾನಿಯಾದಾಗ ಎಷ್ಟು ಹಣ ಜಮೆ ಮಾಡಲಾಗಿದೆ. ಯಾವ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಯಾವ ಬೆಳೆಗೆ ಜಮೆ ಮಾಡಲಾಗಿದೆ? ಎಷ್ಟು ಎಕರೆಗೆ ಜಮೆ ಮಾಡಲಾಗಿದೆ ಹಾಗೂ ಯಾವ ಸರ್ವೆ ನಂಬರಿಗೆ ಜಮೆಯಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಕಾಣಿಸುತ್ತದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡಲು ವಿಳಂಬ ಮಾಡದಿರಲು ಸೂಚನೆ
ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ರೈತನ ಪತ್ನಿಗೆ 3 ಸಾವಿರ ರೂಪಾಯಿಗಳ ಮಾಸಾಶನ ತಲುಪಿಸುವಲ್ಲಿ ವಿಳಂಬವಾಗದಿರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.
ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿ,ಕಳೆದ ಸಾಲಿನಲ್ಲಿಆತ್ಮಹತ್ಯೆ ಮಾಡಿಕೊಂಡ19 ಜನ ರೈತರ ಕುಟುಂಬಗಳಿಗೆ ಪರಿಹಾರ ಧನ ಮತ್ತು ಮಾಸಾಶನ ವ್ಯವಸ್ಥೆಯನ್ನು ಜಿಲ್ಲಾಡಾಳಿತ ಮುತುವರ್ಜಿವಹಿಸಿ ಮಾಡಬೇಕೆಂದರು.