3 ಕೋಟಿ ಜನರ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮೆ

Written by Ramlinganna

Updated on:

3 crore amount deposited ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಿಪಿಎಲ್  ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರ ಖಾತೆಗೆ ಹೆಚ್ಚುವರಿ ಐದು ಕೆಜಿ ಅಕ್ಕಿಯ ಆಗಸ್ಟ್ ತಿಂಗಳ 2ನೇ ಕಂತಿನ ಹಣ ಜಮೆಯಾಗಿದೆ.

ಹೌದು, ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ 2ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಈ ವರೆಗೆ 30 ಜಿಲ್ಲೆಗಳ 86.72 ಲಕ್ಷ ಪಡಿತರ ಕಾರ್ಡುಗಳ 3.03 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ  ಮಾತ್ರ ನೇರ ಹಣ ವರ್ಗಾವಣೆ ಬಾಕಿಯಿದೆ.

ಮೂರ್ನಾಲ್ಕು ದಿನಗಳಲ್ಲಿ 2.81 ಲಕ್ಷಕ್ಕೂ ಹೆಚ್ಚು ಕುಟುಂಬಗಳ 10.32 ಲಕ್ಷ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹೆಚ್ಚುವರಿ ಅಕ್ಕಿಯ ಹಣ ನೇರ ವರ್ಗಾವಣೆ ಆಗಲಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

31 ಜಿಲ್ಲೆಗಳಲ್ಲಿ 1.03 ಕೋಟಿ ಕುಟುಂಬಗಳು ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿದ್ದಾರೆ. ಒಟ್ಟು 3,69,36,906 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆಗಸ್ಟ್ ತಿಂಗಳು ಒಂದರಲ್ಲೇ ಸುಮಾರು 605.90 ಕೋಟಿ ರೂಪಾಯಿಗಳನ್ನು ಫಲಾನುಭವಿಗಳಿಗೆ ಸಂದಾಯ ಮಾಡಲಾಗುತ್ತಿದೆ.

3 crore amount deposited ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಜಮೆಯಾಗಿದೆಯೋ ಇಲ್ಲವೋ? ಇಲ್ಲೇ ಚೆಕ್ ಮಾಡಿ

ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳು ಜುಲೈ ಹಾಗೂ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://ahara.kar.nic.in/status3/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಫುಡ್,ಸಿವಿಲ್ ಸಪ್ಲೈಯಿಸ್ ಹಾಗೂ ಕಂಸ್ಯೂಮರ್ ಅಫೇರ್ಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಪಡಿತರ ಚೀಟಿಗೆ ಸಂಬಂಧಿಸಿದ ಏನೇನು ಮಾಹಿತಿಗಳನ್ನು ಚೆಕ್ ಮಾಡಬಹುದು ಎಂಬುದರ ಕುರಿತು ಕಾಣಿಸುತ್ತದೆ. ಅಲ್ಲಿ ನೇರ ನಗದು ವರ್ಗಾವಣೆಯ ಸ್ಥಿತಿ (DBT) ಮೇಲೆ ಕ್ಲಿಕ್ ಮಾಡಬೇಕು.  ಆಗ ಇನ್ನೊಂದು ಪೇಜ್ ಓಪನ್ ಆಗುವುದು. ಅಲ್ಲಿ ನಿಮಗೆ ವರ್ಷ, ತಿಂಗಳು ಆರ್ ನಂಬರ್ ಹೀಗೆ ಕಾಣಿಸುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಒರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಅಲ್ಲಿ ನೀವು ಆಗಸ್ಟ್ ತಿಂಗಳು ಆಯ್ಕೆ ಮಾಡಿಕೊಳ್ಳಬೇಕ. ನಂತರ ನಿಮ್ಮ ಆರ್.ಸಿ ನಂಬರ್ (ರೇಶನ್ ಕಾರ್ಡ್ ನಂಬರ್) ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನ್ನು ನಮೂದಿಸಬೇಕು.  ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಹೆಸರು ಕಾಣಿಸುತ್ತದೆ. ಅಲ್ಲಿ ಕುಟುಂಬದ ಸದಸ್ಯರ ಸಂಖ್ಯೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಏನಿದು ಆನ್ನಭಾಗ್ಯ ಯೋಜನೆ?

ಅನ್ನಭಾಗ್ಯ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಸದಸ್ಯರುನಗುಣವಾಗಿ  5 ಕೆಜಿ ಅಕ್ಕಿ ನೀಡಲಾಗುತ್ತಿದೆ. ನಿಮ್ಮ ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದರೆ 20 ಕೆಜಿ ಅಕ್ಕಿ ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವದಲ್ಲಿ 5 ಕೆಜಿ. ಹೆಚ್ಚುವರಿ ಅಕ್ಕಿಯನ್ನು ನೀಡಲು ಘೋಷಣೆ ಮಾಡಿತ್ತು.

ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದಂತೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕುಟುಂಬದ ಸದಸ್ಯರುಸಾರವಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಒಬ್ಬ ಸದಸ್ಯರಿಗೆ 170 ರೂಪಾಯಿ ಹಣವನ್ನು ನೀಡಲಾಗುವುದು. ಒಂದು ಕುಟುಂಬದಲ್ಲಿ ಆರು ಜನ ಸದಸ್ಯರಿದ್ದರೆ 170 ರಂತೆ ಒಟ್ಟು ಆರು ಜನರಿಗೆ 1020 ರೂಪಾಯಿ ಫಲಾನುಭವಿಯ ಖಾತೆಗೆ ಹಣ ಜಮೆ ಮಾಡಲಾಗುವುದು.

ಅನ್ನಭಾಗ್ಯದ ಯೋಜನೆಯಡಿ ಜುಲೈ ತಿಂಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಜುಲೈ ತಿಂಗಳಲ್ಲಿ ಮೊದಲನೇ ಕಂತು ಆಗಸ್ಟ್ ತಿಂಗಳ ಎರಡನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.

Leave a Comment