ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ್ಧ ಐದು ಗ್ಯಾರೆಂಟಿಗಳಲ್ಲಿಯುವ ನಿಧಿಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ನಿರುದ್ಯೋಗಿಗಳಿಗೆ ಈಗ 1500 ರಿಂದ 3000 ರವರೆಗೆ ನಿರುದ್ಯೋಗ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಚುನಾವಣೆ ಮುಂಚೆ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಐಧು ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯ ಪ್ರಯೋಜನ ಪಡೆಯುವ ಸಂಬಂಧ ನಿಯಮಗಳನ್ನು ರೂಪಿಸಿ ರಾಜ್ಯ ಸರ್ಕಾರವು ಶನಿವಾರ ಆದೇಶಿಸಿದೆ.
ಯುವನಿಧಿ ಯೋಜನೆ ಅಡಿಯಲ್ಲಿ ಪದವಿ ಪೂರ್ಣಗೊಳಿಸಿದವರಿಗೆ 3 ಸಾವಿರ ರೂಪಾಯಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದವರಿಗೆ 1500 ರೂಪಾಯಿ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
ಪದವಿ ಅಥವಾ ಡಿಪ್ಲೋಮಾ ಪೂರ್ಣಗೊಳಿಸಿ 6 ತಿಂಗಳಾದರೂ ಉದ್ಯೋಗ ಲಭಿಸದ ಕನ್ನಡಿಗರಿಗೆ ಯೋಜನೆಯ ಅನ್ವಯವಾಗಲಿದೆ. ಈ ಸೌಲಭ್ಯ ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯವಾಗಲಿದ್ದು, ಅಷ್ಟರೊಳಗೆ ಉದ್ಯೋಗ ದೊರೆತರೆ ಅಂತಹವರಿಗೆ ಯೋಜನೆಯ ಸೌಲಭ್ಯ ನೀಡುವುದನ್ನು ಸ್ಥಗಿತಗೊಳಿಸಲಾಗುವುದು. ಭತ್ಯೆಯನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿ ಮಾಡಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಸೇವಾಸಿಂಧು ಪೋರ್ಟಲ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್
https://sevasindhu.karnataka.gov.in/Sevasindhu/Kannada?ReturnUrl=%2F
ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನಿರುದ್ಯೋಗ ಸ್ಥಿತಿಯ ತಪ್ಪುಮಾಹಿತಿ ನೀಡಿದವರಿಗೆ ದಂಡ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿರುವವರು ಶಿಶುಕ್ಷು (ಅಪ್ರೆಂಟಿಸ್) ವೇತನ ಪಡೆಯುತ್ತಿರುವವರು, ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಮಾಡುತ್ತಿರುವವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆ ಅಡಿ ಹಾಗೂ ಬ್ಯಾಂಕುಗಳಲ್ಲಿಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಯುವನಿಧಿ ಭತ್ಯೆ ಪಡೆಯಲು ಅರ್ಹರಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಯುವನಿಧಿಗೆ ಷರತ್ತುಗಳು
ಪದವಿ ಡಿಪ್ಲೋಮಾ ಮುಗಿಸಿ 6ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯ ಅನ್ವಯವಾಗಲಿದೆ.
ಈ ಸೌಲಭ್ಯವಲು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯ ಸ್ಥಗಿತಗೊಳಿಸಲಾಗುವುದು.
ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದೆ. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅತವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಇದನ್ನೂ ಓಧಿ : ಪಿಎಂ ಕಿಸಾನ್ ಹಣ ಜಮೆಯಾಗಲು ಇಕೆವೈಸಿ ಕಡ್ಡಾಯ- ಇಕೆವೈಸಿ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
2023 ರ ವರ್ಷದಲ್ಲಿತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಅಂದರೆ ಆರು ತಿಂಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಸೇರಿದಂತೆ) ಪ್ರತಿ ತಿಂಗಳು 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ನೀಡಲಾಗುವುದು. ಅದೇ ರೀತಿ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ ಭತ್ಯೆ ಉದ್ಯೋಗ ಸಿಗುವವರೆಗೆ ಅಥಾ ಗರಿಷ್ಠ 2 ವರ್ಷಗಳ ಅವಧಿಗೆ ನೀಡಲು ಯಿುವನಿಧಿ ಯೋಜನೆಯನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.
ಈ ಯೋಜನೆಗೆ ಯಾರು ಅರ್ಹರಿರುವುದಿಲ್ಲ?
ಯುವನಿಧಿ ಯೋಜನೆಗೆ ಉನ್ನತ ವ್ಯಾಸಂಗ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರಿಸುವವರು. ಶಿಶುಕ್ಷು ವೇತನ ಪಡೆಯುತ್ತಿರುವವರು. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.