3454 ಕೋಟಿ ಬರ ಪರಿಹಾರ ಬಿಡುಗಡೆ ಕೇಂದ್ರ ಸರ್ಕಾರ ಘೋಷಣೆ

Written by Ramlinganna

Published on:

3454 crore fund released : ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಮುಕ್ತಾಯವಾದ ಬೆನ್ನಲ್ಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದ್ದು, ಇನ್ನೂ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿ ರೈತರು ಸಂಕಷ್ಟ ಅನುಭವಿಸಿದ್ದರು.

ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18172 ಕೋಟಿ ರೂಪಾಯಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳುಗಳೇ ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯಮಂತ್ರಿ  ಸಿದ್ದರಾಮಯ್ಯ  ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಹಿತ ಸಂಪುಟ ಸಚಿವರು ಆರೋಪಿಸುತ್ತಿದ್ದರು.

ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಇಲ್ಲೇ ಚೆಕ್ ಮಾಡಿ

ಹೀಗಾಗಿ ರಾಜ್ಯ ಸರ್ಕಾರ ಸುಪ್ರಿಂಕೋರ್ಟ್  ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರಿಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರಿಂಕೋರ್ಟ್ ಆದೇಶಿಸಿತ್ತು. ಅದರಂತೆ ಕಳೆದ ವಾರ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರಿಂಕೋರ್ಟ್ ನಲ್ಲಿ ಒಪ್ಪಿಕೊಂಡಿತ್ತು. ಅದರಂತೆ ಸದ್ಯ ಕೇಂದ್ರ ಸರ್ಕಾರ ಬರ ಪರಿಹಾರ ಘೋಷಣೆ ಮಾಡಿದೆ.

ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಯಾವ ಬೆಳೆಗೆ ಎಷ್ಟು ಪರಿಹಾರ ನೀಡಬೇಕು?                     

ಎಸ್.ಡಿಆರ್.ಎಫ್ ಮಾರ್ಗಸೂಚಿಯ ಪ್ರಕಾರ ಶೇ. 33 ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿರುವ ರೈತರಿಗೆ ಪ್ರತಿ ಹೆಕ್ಟೇರಿಗೆ 8500 ರೂಪಾಯಿ ಹಾಗೂ ನೀರಾವರಿ ಪ್ರದೇಶಕ್ಕೆ ಹೆಕ್ಟೇರಿಗೆ 17 ಸಾವಿರ  ನೀಡಲಾಗುವುದು. ಆದರೆ ಸದ್ಯ  ಪ್ರತಿ ರೈತರಿಗೆ ತಲಾ 2 ಸಾವಿರ ರೂಪಾಯಿಯಂತೆ ತಾತ್ಕಾಲಿಕ ಪರಿಹಾರ ಹಣ ಜಮೆ ಮಾಡಲಾಗಿದೆ.

3454 crore drought fund released ನಿಮಗೆಷ್ಟು ಬರ ಪರಿಹಾರ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಬರ ಪರಿಹಾರ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಸ್ಟೇಟಸ್ ಚೆಕ್ ಮಾಡಲು ಎರಡು ಆಯ್ಕೆಗಳು ಕಾಣಿಸುತ್ತವೆ. ಹೌದು, ಪರಿಹಾರ ನಮೂದು ಸಂಖ್ಯೆ ಹಾಗೂ ಆಧಾರ್ ಸಂಖ್ಯೆ ಇವೆರಡು ಆಯ್ಕೆಗಳ ಮೂಲಕ ಸ್ಟೇಟಸ್ ಚೆಕ್ ಮಾಡಬಹುದು.

ಆಧಾರ್ ಸಂಖ್ಯೆ ನಮೂದಿಸಿ ಸ್ಟೇಟಸ್ ಚೆಕ್ ಮಾಡಿ

ನೀವು ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ Select calamity type ನಲ್ಲಿ Drought (ಬರಗಾಲ) ಆಯ್ಕೆ ಮಾಡಿಕೊಳ್ಳಬೇಕು. Select Year Type  ನಲ್ಲಿ2023-24 ಆಯ್ಕೆ ಮಾಡಿಕೊಳ್ಳಬೇಕು.  ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು.  ಇದಾದನಂತರ ವಿವರಗಳ್ನು ಪಡೆಯಲು / Fetch Details  ಮೇಲೆ ಕ್ಲಿಕರ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ಕ್ರಮ ಸಂಖ್ಯೆ, ಜಿಲ್ಲೆಯ ಹೆಸರು, ಬ್ಯಾಂಕಿನ ಹೆಸರು, ಮೊತ್ತ, ಖಾತೆದಾರರ ಹೆಸರು, ಬ್ಯಾಂಕ್ ಅಕೌಂಟ್ ನಂಬರ್, ಹಣ ಸಂದಾಯ ಸ್ಥಿತಿ, ಸಂದಾಯ ದಿನಾಂಕ ಕಾಣಿಸುತ್ತದೆ.

ಅದರ ಕೆಳಗಡೆ ಆಧಾರ್ ನಂಬರ್, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಬೆಳೆಯ ಹೆಸರು, ಬೆಳೆಯ ವಿಧ ಹಾಗೂ ಎಷ್ಟು ಎಕರೆಗೆ  ಜಮೆ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.

Leave a Comment