ಇಂದಿನಿಂದ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Written by Ramlinganna

Published on:

4 days heavy rain: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬುಧವಾರದಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬುಧವಾರ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವುದರಿಂದ  ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಪ್ರತಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಉಳಿದ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ ನೀವು ನಿಂತಿರುವ ಜಮೀನು ಯಾರ ಹೆಸರಿಗಿದೆ? ಚೆಕ್ ಮಾಡಿ

ಮಳೆಯ ಜತೆಗೆ ವೇಗವಾಗಿ ಗಾಳಿ ಬೀಸುವುದರಿಂದ ಮೀನುಗಾರರು ಎಚ್ಚರ ವಹಿಸಬೇಕು.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ತಲುಪುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಗುರುವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದ್ದು, ಆರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಶುಕ್ರವಾರ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಏಳು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಕನ್ನಡ ಭಾಷೆೆ ಆಯ್ಕೆ ಮಮಾಡಿಕೊಳ್ಳಬೇಕು. ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಅಲ್ಲಿ ಕ್ಲಿಕ್ ಮಾಡಿದರೆ ನಿಮಗೆ ಮುಂದಿನ ಐದು ದಿನ ಮಳೆಯಾಗಲಿದೆಯೋ ಇಲ್ಲವೋ ಹಾಗೂ ಯಾವ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂಬ ಮಾಹಿತಿ ರೈತರಿಗೆ ಕಾಣಿಸಲಿದೆ.

4 days heavy rain ಮಳೆ ಮಾಹಿತಿ ಬೇಕೆ? ಈ ನಂಬರಿಗೆ ಕರೆ  ಮಾಡಿ  

ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹೌದು, 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ. ನಿಮ್ಮೂರಿನ ಸುತ್ತಮುತ್ತಲಿನ ವಾತಾವರಣ ಹೇಗಿರಲಿದೆ? ಮಳೆಯಾಗುತ್ತೋ ಇಲ್ಲವೋ ಯಾವಾಗ ಮಳೆಯಾಗುತ್ತದೆ ಎಂಬ ಮಾಹಿತಿ ಸಹ ನಿಮಗೆ ಸಿಗುತ್ತದೆ.ಇದಕ್ಕಾಗಿ ನೀವು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಮನೆಯಲ್ಲಿಯೇ ಕುಳಿತು ಕೇವಲ ಒಂದು ಕರೆ ಮಾಡಿ ಮಾಹಿತಿಯನ್ನು ಅತೀ ಸುಲಭವಾಗಿ ಪಡೆಯಬಹುದು.

Leave a Comment