ಈ ರೈತರಿಗೆ 434 ಕೋಟಿ ರೂಪಾಯಿ ಬೆಳೆ ವಿಮೆ ಮಂಜೂರು

Written by Ramlinganna

Updated on:

434 crore insurance has been sanctioned  ಸರ್ಕಾರ ಕೊನೆಗೂ ರೈತ ಸಂಘದ ನಿರಂತರ ಹೋಟಾರದ ಫಲವಾಗಿ  ಬೆಳೆವಿಮೆ ಕಟ್ಟಿದ ರೈತರಿಗೆ 434 ಕೋಟಿ ರೂಪಾಯಿ ಹಣ ಮಂಜೂರು ಮಾಡಿದೆ.

ಹೌದು,  ಹಾವೇರಿ ಜಿಲ್ಲೆಯಲ್ಲಿ ಬೆಳೆ ವಿಮೆ ಪಾವತಿಸಿದ ರೈತರಿಗೆ ವಿಮೆ ಹಣ ಬಿಡುಗಡೆ ಮಾಡಬೇಕೆಂದು ರೈತ ಸಂಘ ನಿರಂತರವಾಗಿ ಹೋರಾಟ ನೀಡಿಸಿತ್ತು. ರೈತ ಸಂಘದ ಹೋರಾಟಕ್ಕೆ ಸಂದ ಜಯ ಇದಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ರೈತರ ಸಮಸ್ಯೆಗಳಿಗೆ ಪೂರಕವಾಗಿ ಸರ್ಕಾರ ಬೆಳೆ ವಿಮೆ ಮಂಜೂರು ಮಾಡಿದ್ದು ಸ್ವಾಗತಾರ್ಹ. ಹಾವೇರಿ ಜಿಲ್ಲೆಯ 1,87,706 ರೈತರ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ್ದರು. 1,65,688 ಫಲಾನುಭವಿಗಳಿಗೆ 434.19 ಕೋಟಿ ರೂಪಾಯಿ ಮಂಜೂರಾಗಿದೆ. ಕೂಡಲೇ ಅದನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಅತೀವೃಷ್ಟಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಬೆಳೆವಿಮೆ ಪರಿಹಾರವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದೆ ವಾರದ ಒಳಗಾಗಿ ಪೂರ್ಣ ಪ್ರಮಾಣದ ಹಣವನ್ನು  ರೈತರಿಗೆ ವಿತರಿಸಬೇಕೆಂದು ಆಗ್ರಹಿಸಿದ್ದಾರೆ.

ಅತೀವೃಷ್ಟಿಯಿಂದಾಗಿ ಬೆಳೆ ಕಳೆದುಕೊಂಡ ರೈತರಿಗೆ ಪೂರ್ಣ ಪ್ರಮಾಣದ ಪರಿಹಾರ ವಿತರಿಸುವಲ್ಲಿ ಸರ್ಕಾರ ವಿಫಲಗೊಂಡಿದೆ. ಅನೇಕ ರೈತರು ತಹಶೀಲ್ದಾರ ಕಚೇರಿ, ಬ್ಯಾಂಕುಗಳಿಗೆ ಅಲೆದಾಡುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಪರಿಹಾರ ಹಣ ರೈತರ ಖಾತೆಗೆ ಜಮೆ ಮಾಡಬೇಕು. ಮನೆ ಕಳೆದುಕೊಂಡ ಬಡವರಿಗೆ ಸರ್ಕಾರ ಒಂದು ಕಂತಿನ ಪರಿಹಾರ ನೀಡಿ ಕೈಚೆಲ್ಲಿ ಕುಳಿತಿದೆ.  ಮತ್ತೆ ಮಳೆಗಾಲ ಆರಂಭಗೊಂಡರೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹಾಗಾಗಿ ಸರ್ಕಾರ ಪೂರ್ಣಪ್ರಮಾಣದ ಹಣ ಬಿಡುಗಡೆ ಮಾಡಿ ಫಲಾನುಭವಿಗಳ ಖಾತೆಗೆಜಮೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಹಾವೇರಿ ಜಿಲ್ಲೆಯ ರೈತರು ಸೇರಿದಂತೆ ಇನ್ನಿತರ ಜಿಲ್ಲೆಯ ರೈತರೂ ಸಹ ತಮ್ಮ ಅರ್ಜಿ ಸ್ಟೇಟಸ್ ಚೆಕ್ ಮಾಡಬಹುದು.

434 crore insurance has been sanctioned  ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

ಬೆಳೆ ವಿಮೆ ಪಾವತಿಸಿದ ರೈತರು ತಮ್ಮ ಅರ್ಜಿಯ ಸ್ಟೇಟಸನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಈ

https://www.samrakshane.karnataka.gov.in/publichome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರಿಗೆ ಫಾರ್ಮರ್ಸ್ ಕಾಲಂ ಕೆಳಗಡೆ ಕೆಲವು ಆಯ್ಕೆಗಳು ಕಾಣುತ್ತವೆ.  ಪ್ರಿಮಿಯಂ ಕ್ಯಾಲ್ಕುಲೇಟರ್, ಕ್ರಾಪ್ ಯು ಕ್ಯಾನ್ ಇನ್ಸುರ್, ಚೆಕ್ ಸ್ಟೇಟಸ್, ನೋ ಯುವರ್ ಇನ್ಸುರೆನ್ಸ್ ಕಂ, ಫೈಂಡ್ ಗ್ರಾಮ್ ಪಂಚಾಯತ್ ಸೇರಿದಂತೆ ಇನ್ನಿತರ ಆಯ್ಕೆಗಳು ಕಾಣುತ್ತವೆ. ಅಲ್ಲಿ ರೈತರು ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಅಥವಾ ಈ

https://www.samrakshane.karnataka.gov.in/Premium/CheckStatusMain_aadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಓಪನ್ ಆಗುವ ಪೇಜ್ ನಲ್ಲಿ Mobile No ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿದ ನಂತರ search ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದ ಕಾಣಿಸುತ್ತದೆ. ಅಂದರೆ ವಿಮಾ ಕಂಪನಿಯಿಂದ ಅರ್ಜಿ ಸ್ವೀಕೃತವಾಗಿದೆ ಅದರ ಮುಂದುಗಡೆ ವಿಮೆ ಎಲ್ಲಿ ಪಾವತಿಸಿದ್ದೀರಿ ಎಂಬುದು ಕಾಣಿಸುತ್ತದೆ. ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದರೆ ನೀವು ವಿಮೆ ಯಾವಾಗ ಪಾವದಿಸಿದ್ದೀರಿ ಎಂಬುದು ಕಾಣಿಸುತ್ತದೆ.

ಈ ಆಧಾರದ ಮೇಲೆ ನಿಮಗೆ ಬೆಳೆ ವಿಮೆ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ನಿರ್ಧರಿಸಿಕೊಳ್ಳಬಹುದು. ಅಲ್ಲಿ ಕಾಣುವ ವೀವ್ ಡಿಟೇಲ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹೆಸರು, ಸರ್ವೆ ನಂಬರ್, ಯಾವ ಬೆಳೆಗೆ ವಿಮೆ ಮಾಡಿಸಿದ್ದೀರಿ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಚೆಕ್ ಮಾಡಬಹುದು.

Leave a Comment