ಹಿರಿಯ ನಾಗರಿಕರಿಗೆ 5 ಲಕ್ಷ ರೂಪಾಯಿಯವರೆಗೆ ಉಚಿತ ವಿಮೆ

Written by Ramlinganna

Published on:

5 lakh free treatment : 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ.

ಯಾವುದೇ ಆದಾಯ ಮಿತಿ ಪರಿಗಣಿಸದೆ ಎಲ್ಲಾ ವೃದ್ಧರಿಗೂ ಆರೋಗ್ಯ ವಿಮೆ ಸೌಲಭ್ಯ ಸಿಗಲಿದೆ. ದೇಶವ್ಯಾಪಿ 6ಕೋಟಿ ಹಿರಿಯ ನಾಗರಿಕರಿಗೆ ಕೇಂದ್ರದ ಉಚಿತ ಆರೋಗ್ಯ ವಿಮೆ ಸಿಗಲಿದೆ.

ಈವರೆಗೂ ಆಯುಶ್ಮಾನ್ ಭಾರತ್ ಕಾರ್ಡ್ ಪಡೆಯಲು ಅನುಸರಿಸಲಾಗುತ್ತಿದ್ದ ವಿಧಾನವೇ ಪರಿಷ್ಕ್ೃತ ಯೋಜನೆಗೂ ಅನ್ವಯವಾಗಲಿದೆ. ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಅರ್ಜಿದಾರರು ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ಗಳ್ನು ಹೊಂದಿದ್ದರೆ ಸಾಕು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು

5 lakh free treatment ಎಬಿ ಪಿಎಮ್.ಜೆಎವೈಯೋನೆಗೆ ನೋಂದಣಿ ಮಾಡುವುದು ಹೇಗೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆ ಈ ಕೆಳಗಡೆ ನೀಡಲಾದ ಹಂತಗಳ ಪ್ರಕಾರ ನೋಂದಣಿ ಮಾಡಿಕೊಳ್ಳಬಹುದು.

5 lakh free treatment ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆ ನೋಂದಣಿ ಮಾಡಲು

https://pmjay.gov.in/

ಅಲ್ಲಿ ತೆರೆದುಕೊಳ್ಳುವ ಪೇಜ್ ನ ಬಲಭಾಗದಲ್ಲಿ Am I Eligible ಎಂಬ ಟ್ಯಾಬ್ ಮೇಲೆ ಕ್ಲಿಕ್ ಮಾಡಬೇಕು.

ನಂತರ ಮೊಬೈಲ್ ನಂಬರ್ ನಮೂದಿಸಬೇಕು. ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ನಂತರ ವೆರಿಫೈ ಮೇಲೆಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿಬರುತ್ತದೆ.  ಮೊಬೈಲಿಗೆ ಬರುವ ಓಟಿಪಿ ದಾಖಲಿಸಬೇಕು. ಓಟಿಪಿ ನಮೂದಿಸಿದ ನಂತರ ಮತ್ತೆ  ವೆರಿಫೈ ಮೇಲೆ ಕ್ಲಿಕ್ ಮಾಡಬೇಕು ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ .  ತಾವು ಇರುವ ರಾಜ್ಯದ ಹೆಸರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಯೋಜನೆ ಆಯ್ಕೆ ಮಾಡಿಕೊಳ್ಳಬೇಕು. ಅಂದರೆ ಪಿಎಂಜೆಎನ್ಎಮ್ಎಎನ್ (ಪಿವಿಟಿಜಿ) ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು.  ನಂತರನಿಮ್ಮ ಆಧಾರ್ ಕಾರ್ಡ್ ಆಯ್ಕೆ ಮಾಡಿಕೊಳ್ಳಬೇಕು.ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು.ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾಕೋಡ್ ಹಾಕಿ ನಿಮ್ಮಹೆಸರು ನೋಂದಾಯಿಸಿಕೊಳ್ಳಬೇಕು. ಒಂದು ವೇಳೆ ನೀವು. ಆಯುಶ್ಮಾನ್ ಭಾರತ್ ಯೋಜನೆಗೆ ಈಗಾಗಲೇ ಕುಟುಂಬ ನೋಂದಾಯಿಸಿದ್ದರೆ ಅಲ್ಲಿ ಹೆಸರು ಕಾಣಿಸಲಿದೆ.

5 lakh free treatment ಈ ಯೋಜನೆಗೆ ಅರ್ಜಿ ಸಲ್ಲಿಸುವವರು 70 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷಕ್ಕಿಂತ ಹೆಚ್ಚಿರಬೇಕು.

ಈ ಯೋಜನೆಯ ಅಡಿ ಬಡ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂಪಾಯಿಯವರೆಗೆ ವಿಮಾ ಸೌಲಭ್ಯ ಕಲ್ಪಿಸಲಾಗುತ್ತಿತ್ತು. ಅಂದರೆ ಸರ್ಕಾರಿ  ಆಸ್ಪತ್ರೆಗಳಲ್ಲಿ ಲಭ್ಯವಿರದ ಚಿಕಿತ್ಸೆಗಳನ್ನು ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಪಡೆಯಬಹುದಾಗಿತ್ತು.

ಇದನ್ನೂ ಓದಿ ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಇಲ್ಲೆ ಚೆಕ್ ಮಾಡಿ

ಪರಿ ಷ್ಕೃತ ಯೋಜನೆಯಲ್ಲಿ ಬಡ ಕುಟುಂಬಗಳಿಗೆ 5 ಲಕ್ಷ ರೂಪಾಯಿಯವರೆಗಿನ ವಿಮಾ ಸೌಲಭ್ಯ ಹಾಗೆಯೇ ಇರಲಿದೆ.ಹೆಚ್ಚುವರಿಯಾಗಿ ಆದಾಯದ ಇತಿ ಮಿತಿಗಳಿಲ್ಲದೆ 70 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲರಿಗೂ ವಾರ್ಷಿಕ 5 ಲಕ್ಷ ರೂಪಾಯಿಯವರೆಗೆ ವಿಮಾ ಸೌಲಭ್ಯ ಸಿಗಲಿದೆ.

ಫಲಾನುಭವಿಗಳು ತಮ್ಮ ತವರು ರಾಜ್ಯದಲ್ಲಿ ಮಾತ್ರವಲ್ಲದೆ ದೇಶದ ಯಾವುದೇ ಭಾಗದಲ್ಲಿಯೂ ಚಿಕಿತ್ಸೆ ಪಡೆಯಬಹುದು. 70 ವಯೋಮಾನದವರು ಹೊಸ ಯೋಜನೆಯ ಅಡಿಯಲ್ಲಿ ಹೊಸ ಆರೋಗ್ಯ ಕಾರ್ಡ್ ಪಡೆಯಲಿದ್ದಾರೆ. ಖಾಸಗಿ ಆರೋಗ್ಯ ವಿಮಾ ಪಾಲಿಸಿಗಳು ಅಥವಾ ನೌಕರರ ರಾಜ್ಯ ವಿಮಾಯೋಜನೆಗಳ ಫಲಾನುಭವಿಗಳುಕೂಡ ಎಬಿಪಿಂ ಜೆಎವೈ ಲಾಭ ಪಡೆಯಲು ಅರ್ಹರಾಗಿರುತ್ತಾರೆ.

Leave a Comment