ನಿರುದ್ಯೋಗಸ್ಥರಿಗೆ ವಿವಿಧ ನಿಗಮಗಳ ವತಿಯಿಂದ ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪ್ರಸಕ್ತ 2022-2023ನೇ ಸಾಲಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಅಭಿವೃದ್ಧಿ ಕೋಶಗಳಿಂದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗಂ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇ.ವಿ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿಗೆ ಗರಿಷ್ಠ 50 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಉಳಿದ ಮೊತ್ತವನ್ನು ಸಾಲದೊಂದಿಗೆ ಖರೀದಿಸಿ ವಿತರಿಸಲುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಕೊಡಗು ಜಿಲ್ಲೆಯವರಾಗಿರಬೇಕು. ಅರ್ಹ ಅಭ್ಯರ್ಥಿಗಳು ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿಯಿಂದ ಅರ್ಜಿಪಡೆದು ಡಿಸೆಂಬರ್ 23 ರೊಳಗಾಗಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಇತ್ತೀಚಿನ ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಗುರುತಿನ ಚೀಟಿ, ಆಧಾರ್ ಕಾರ್ಡ್ (ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು) ಬ್ಯಾಂಕ್ ಪಾಸ್ ಬುಕ್, ಡಿಎಲ್ (ದ್ವಿಚಕ್ರ ವಾಹನ ಚಾಲನಾ ಪರವಾನಗಿ ಪತ್ರ) ದಾಖಲೆಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಕಚೇರಿಗೆ ಸಲ್ಲಿಸಬೇಕು.
ಇದನ್ನೂ ಓದಿ : ನಿಮ್ಮ ಹೆಸರಿನಲ್ಲಿರುವ ಪಹಣಿ ಎಷ್ಟು ವರ್ಷಗಳ ಹಳೆಯದ್ದು? ಮೊಬೈಲ್ ನಲ್ಲೇ ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ನಿಯಮಿತ, ಕೊಡಗು ಜಿಲ್ಲೆ,571201 ದೂರವಾಣಿ ಸಂಖ್ಯೆ 08272 228857 ಗೆ ಸಂಪರ್ಕಿಸಬಹುದುಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ. ಫಲಾಪೇಕ್ಷಿ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 1.50 ಲಕ್ಷ ರೂಪಾಯಿಯಾಗಿರಬೇಕು. ನಗರ ಪ್ರದೇಶದವರಿಗೆ2 ಲಕ್ಷ ರೂಪಾಯಿ ಮಿತಿಯೊಳಗಿರಬೇಕು. ಫಲಾಪೇಕ್ಷಿಯ ಕುಟುಂಬದ ಸದಸ್ಯರು ಯಾವುದೇ ಸರ್ಕಾರಿ ಸಂಸ್ಥೆಯಲ್ಲಿನೌಕರಿಯಲ್ಲಿರಬಾರದು. ಒಂದು ಬಾರಿ ನಿಗಮದ ವತಿಯಿಂದ ಈ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿ ಎಲ್ಲಿ ಸಲ್ಲಿಸಬೇಕು?
ಅರ್ಪ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು
https://sevasindhu.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ನಿಮ್ಮ ಹತ್ತಿರದ ಸಿಎಸ್.ಸಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆಯ ವತಿಯಿಂದ ವಿವಿಧ ಕಾರ್ಯಕ್ರಮದಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನೀರು, ತೆಂಗು ಸಂಗ್ರಹಣ ಘಟಕ, ಮೋಹಕ ಕೀಟ ಬಲೆಗಳು, ಜಿಗುಟಾದ ಬಲೆಗಳು, ಸೌರಶಕ್ತಿ ಆಧಾರಿತ ಕೃತಕ ಬುದ್ಧಿಯ ಕೀಟನಿಯಂತ್ರಕ ಬಲೆಗಳು ಖರೀದಿಗೂ ಸಹಾಯಧನ ನೀಡಲಾಗುವುದು. ಇಧರೊಂದಿಗೆ ಸೌರಶಕ್ತಿ ಆಧಾರಿತ ಕೃತಕ ಬುದ್ಧಿಯ ಕೀಟನಿಯಂತ್ರಕ ಬಲೆಗಳ ಖರೀದಿಗೆ, ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಶ ಮಿಶ್ರಣ, ಜೈವಿಕ ಗೊಬ್ಬರ ಪ್ಲಾಸ್ಟಿಕ್ ಕ್ರೇಟ್ಸ್ ಖರೀದಿಗೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.