50489 ರೈತರಿಗೆ ಬೆಳೆ ವಿಮೆ ಪರಿಹಾರ ಹಣ ಜಮೆ

Written by Ramlinganna

Updated on:

50489 farmers to get crop insurance :  2021-22ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಲ್ಲಿ 50489 ರೈತರಿಗೆ ಬೆಳೆ ವಿಮೆ ಪರಿಹಾರ ಹಣವನ್ನು ಪಾವತಿಸಲಾಗಿದೆ.  ಉಳಿದ ಬೆಳೆ ವಿಮೆ ಮೊತ್ತ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು, ಹಿಂಗಾರು ಮತ್ತು ಬೇಸಿಗೆ 2021-22 ರ ಹಂಗಾಮಿನಲ್ಲಿ ಒಟ್ಟು 5612.14 ಲಕ್ಷ ಬೆಳೆ ವಿಮೆ ಪರಿಹಾರ ಮೊತ್ತವನ್ನು 51099 ಅರ್ಹ ರೈತರಿಗೆ ಲೆಕ್ಕಾಚಾರ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 55.37 ಕೋಟಿ ರೂಪಾಯಿ  ಬೆಳೆ ವಿಮೆ ಪರಿಹಾರ ಮೊತ್ತವನ್ನು 50.489 ರೈತರಿಗೆ ವಿಮಾ ಸಂಸ್ಥೆಯವರಿಂದ ಇತ್ಯರ್ಥಪಡಿಸಲಾಗಿದೆ. ಉಳಿದ 74.56 ಲಕ್ಷ ರೂಪಾಯಿ ಬೆಳೆವಿಮೆ ಪರಿಹಾರ ಮೊತ್ತವನ್ನು 610 ರೈತರಿಗೆ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

50489 farmers to get crop insurance ಬೆಳೆ ವಿಮೆ ಪರಿಹಾರ ಹಣ ಜಮೆ ಲೆಕ್ಕಾಚಾರ

ಮುಂಗಾರು ಹಂಗಾಮಿನಲ್ಲಿ 66079 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದರು. ಈ ರೈತರಿಗೆ 5461.98 ಲಕ್ಷ ರೂಪಾಯಿ ಬೆಳೆ ವಿಮೆ ಪರಿಹಾರ ಹಣ ಲೆಕ್ಕಾಚಾರ ಮಾಡಲಾಗಿದೆ. ಇದರಲ್ಲಿ 49891 ರೈತರಿಗೆ 5394.21 ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸಲಾಗಿದೆ. ಇನ್ನೂ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಗ ನೋಂದಣಿ ಮಾಡಿಸಿದ 594 ರೈತರಿಗೆ 67.77 ಲಕ್ಷ ರೂಪಾಯಿ ಮೊತ್ತವನ್ನು ಇತ್ಯರ್ಥಪಡಿಸಲಾಗುವುದು.

ಇದನ್ನೂ ಓದಿ ಹಿಂಗಾರು ಬೆಳೆಗಳ ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಹಿಂಗಾರು ಹಂಗಾಮಿಗೆ 737 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದರು.ಇದರಲ್ಲಿ 614 ರೈತರಿಗೆ 1.50 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಹಣ ನೀಡಲು ಲೆಕ್ಕಾಚಾರ ಮಾಡಲಾಗಿದೆ. ಇದರಲ್ಲಿ 598 ರೈತರು 1.43 ಕೋಟಿ ರೂಪಾಯಿ ಹಣವನ್ನು ಬೆಳೆ ವಿಮೆ ಪರಿಹಾರ ಹಣ ನೀಡಲಾಗಿದೆ. ಇನ್ನೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ 16 ರೈತರಿಗೆ  6.79 ಲಕ್ಷ ರೂಪಾಯಿ ರೈತರಿಗೆ ಬೆಳೆ ವಿಮೆ ಪರಿಹಾರ ಹಣ ಇತ್ಯರ್ಥಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳೆ ವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ರೈತರು ಬೆಳೆ ವಿಮೆ ಪರಿಹಾರ ಹಣ ಅಂದರೆ 2021-22ನೇ ಸಾಲಿನಲ್ಲಿ  ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಮುಂಗಾರು ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ವಿಮೆ ಮಾಡಿಸಿದ ರೈತರು ತಮ್ಮ ಮೊಬೈಲ್ ನಲ್ಲೇ  ಜಮೆಯಾಗಿದೆಯೋ ಇಲ್ಲವೋ ಎಂಬುದನನು ಚೆಕ್ ಮಾಡಬಹುದು.

ಬೆಳೆ ವಿಮೆ ಪರಿಹಾರ ಹಣ ಸ್ಟೇಟಸ್ ಚೆಕ್ ಮಾಡಲು ಈ

https://www.samrakshane.karnataka.gov.in/Premium/CheckStatusMain_aadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ಮೊಬೈಲ್ ನಂಬರ್ ನಮೂದಿಸಬೇಕು.ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. Search ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಜಮೆಯಾಗಿರುವ ಮಾಹಿತಿ ಕಾಣುತ್ತದೆ.

ಒಂದು ವೇಳೆ ನೀವು ಬೆಳೆ ವಿಮೆ ಮಾಡಿಸಿದ ನಂತರವೂ ನಿಮಗೆ ಬೆಳೆ ವಿಮೆ ಜಮೆಯಾಗಿರದಿದ್ದರೆ ರೈತರು ಯಾವ ಬೆಳೆ ವಿಮಾ ಕಂಪನಿಗೆ ಹಣ ಪಾವತಿಸಿದ್ದೀರೋ ಆ ಕಂಪನಿಯ ಸಿಬ್ಬಂದಿಗೆ ಕರೆ ಮಾಡಿ ವಿಚಾರಿಸಬಹುದು. ನಿಮಗೆ ವಿಮಾ ಕಂಪನಿ ಸಿಬ್ಬಂದಿಯ ಮೊಬೈಲ್ ನಂಬರ್ ಗೊತ್ತಿರದಿದ್ದರೆ 1800 180 1551 ಗೆ ಕರೆ ಮಾಡಿ ವಿಚಾರಿಸಬಹುದು. ಇದು ಉಚಿತ ಸಹಾವಾಣಿಯಾಗಿದೆ. ಉಚಿತ ಸಹಾಯವಾಣಿಗೆ ಕರೆ ಮಾಡಿದ ನಂತರ ರೈತರಿಗೆ ಆಯಾ ಜಿಲ್ಲೆಯ ವಿಮಾ ಕಂಪನಿಯ ಸಿಬ್ಬಂದಿ ಮೊಬೈಲ್ ನಂಬರ್ ನೀಡುವರು.

Leave a Comment