75 ಕೋಟಿ ಪರಿಹಾರ ಬಿಡುಗಡೆಃ ನಿಮಗೆಷ್ಟು ಜಮೆಯಾಗಿದೆ?

Written by Ramlinganna

Updated on:

75 crore crop compensation  ನೆಟೆ ರೋಗದಿಂದ ತೊಗರಿ ಬೆಳೆ ನಾಶವಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು 74.67 ಕೋಟಿ ರೂಪಾಯಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಹೌದು, ಕಳೆದ ಸಾಲಿನ ಅಂದರೆ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡು ಬೆಲೆ ನಷ್ಟ ಉಂಟಾಗಿ ರೈತರು ಹಾನಿ ಅನುಭವಿಸಿದ್ದರು.

ಅದಕ್ಕೆ ಸಂಬಂಧಿಸಿದ ರೈತರಿಗೆ ಪರಿಹಾರ ನೀಡಲು 233 ಕೋಟಿ ರೂಪಾಯಿ ಮೀಸಲಿರಿಸಲಾಗಿತ್ತು. ಅದರಲ್ಲಿ ಈಗಾಗಲೇ ಎರಡು ಕಂತಿನಲ್ಲಿ 148.33 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿತ್ತು. ನಂತರ ವಿಧಾನಸಭೆ ಚುನಾವಣೆ ಸೇರಿ ಮತ್ತಿತರ ಕಾರಣಗಳಿಂದಾಗಿ ಬಾಕಿ ಪರಿಹಾರ ಬಿಡುಗಡೆ ಸಾಧ್ಯವಾಗಿರಲಿಲ್ಲ. ಇದೀಗ ಬಾಕಿ ಪರಿಹಾರದ ಮೊತ್ತವಾದ 74.67 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಆ ಮೊತ್ತವನ್ನು 4 ಜಿಲ್ಲೆಗಳ ಅರ್ಹ ರೈತರ ಬ್ಯಾಂಕ್ ಖಾತೆಗೆ ಶೀಘ್ರ ವರ್ಗಾಯಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

75 crore crop compensation ನಿಮಗೆ ನೆಟೆರೋಗದಿಂದ ಹಣ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ

ನೆಟೆ ರೋಗದಿಂದ ಯಾವ ಯಾವ ರೈತರ ಬೆಳೆ ಹಾನಿಯಾಗಿದೆಯೋ ಅವರಿಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು.  ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ  ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.

ಅಲ್ಲಿ ನಿಮ್ಮ ಹೆಸರು, ವಿಳಾಸ ಕಾಣಿಸುತ್ತದೆ. ನಿಮ್ಮ ಹುಟ್ಟಿದ ದಿನಾಂಕ ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಓಕೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಡಿಬಿಟಿ ಆ್ಯಪ್  ಓಪನ್ ಆಗುತ್ತದೆ.

ಇದನ್ನೂ ಓದಿ ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ರೈತರ ಎಫ್ಐಡಿ ಚೆಕ್ ಮಾಡಿ

ಅಲ್ಲಿ ಪೇಮೆಂಟ್ ಸ್ಟೇಟಸ್, ಪ್ರೌಫೈಲ್ ಹಾಗೂ ಕಂಟ್ಯಾಕ್ಟ್ ಹೀಗೆ ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವ ಯಾವ ಯೋಜನೆಗಳಿಂದ ನಿಮಗೆ ಹಣ ಜಮೆಯಾಗುತ್ತಿದೆ ಎಂಬ ಪಟ್ಟಿ ಕಾಣಿಸುತ್ತದೆ. ಆ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಇದರೊಂದಿಗೆ ರೈತರು ಬೆಳೆ ವಿಮೆ ಪರಿಹಾರ  ಜಮೆಯಾಗಿದ್ದನ್ನು ಪ್ರತ್ಯೇಕವಾಗಿ ಚೆಕ್ ಮಾಡಬಹುದು.  ಹೌದು, ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಹಾಗೂ ಬೆಳೆ ವಿಮೆ ಹಣ ಪ್ರತ್ಯೇಕವಾಗಿ ಚೆಕ್ ಮಾಡಬಹುದು.

Leave a Comment