ಕೇಂದ್ರ ಸರ್ಕಾರಿ ನೌಕರರ (7th pay commission DA hike) ತುಟ್ಟಿ ಭತ್ಯೆ ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು 2021ರ ಜುಲೈ 1 ರಿಂದಲೇ ಅನ್ವಯವಾಗುವಂತೆ ಶೇ. 17 ರಿಂದ ಶೇ. 28 ರಷ್ಟು ಹೆಚ್ಚಿಸಲಾಗಿದೆ.
2021ರ ಜುಲೈ 1 ರಿಂದಲೇ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗಲಿದೆ.ಕೇಂದ್ರ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸುಮಾರು 34,400 ಕೋಟಿ ವೆಚ್ಚವಾಗಲಿದೆ. ಇದರಿಂದ ಕೇಂದ್ರ ಸರ್ಕಾರದ 48,34,000 ನೌಕರರು ಹಾಗೂ 65,26,000 ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ ಎಂದು ವಾರ್ತಾ ಮತ್ತು ಪ್ರಚಾರ ಖಆತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಕೋವಿಡ್-19 ಸೋಂಕಿನ ಪರಿಣಾಮ ಕಳೆದ ವರ್ಷ ಕೇಂದ್ರ ಸರ್ಕಾರಿ ನೌಕರರ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ನೆರವನ್ನು ಹೆಚ್ಚಳ ಮಾಡಲಾಗಿತ್ತು. ಇದೀಗ ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ ನೀಡಿದೆ.
ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ. ರೈಲ್ವೆ ಇಲಾಖೆಯಲ್ಲಿ ಮಾತ್ರ ಎರಡು ಪಾಳಿಯಲ್ಲಿ ಕೆಲಸ ಮಾಡಲು ಆದೇಶ ನೀಡಲಾಗಿದೆ.
01.01.2020 ರಿಂದ 30.06.2021 ರ ಅವಧಿಗೆ ತುಟ್ಟಿ ಭತ್ಯೆ / ಪರಿಹಾರ ದರ ಶೇ 17 ರಷ್ಟಿದೆ, ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2021ರ ಜುಲೈ 1ರಿಂದ ಕೇಂದ್ರ ಸರ್ಕಾರಿ ನೌಕರರ ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.17ರಿಂದ ಶೇ.28ಕ್ಕೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಈ ಹಿಂದಿನ ಶೇ.17ಕ್ಕಿಂತ, ಶೇ.11ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದಂತಾಗಿದೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.