Male yavaga baruttade : ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಳಾಖೆ ಮುನ್ಸೂಚನೆ ನೀಡಿದೆ.ಹೌದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಪ್ರೀಲ್ 19 ರಂದು ಶುಕ್ವವಾರ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ,ಬೆಂಗಳೂರು, ಬೆಳಗಾವಿ, ಧಾರವಾಡದ ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಕೊಡಗು, ಹಾಸನ, ಶಿವಮೊಗ್ಗ, ರಾಮನಗರ, ವಿಜಯಪುರ, ತುಮಕೂರು ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾದ್ಯತೆಯಿದೆ. ಆದರೂ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಶಿವಮೊಗ್ಗ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಸಾಧಾರಣ ಮಳೆಯಾಗಿದೆ. ಬಿಜಾಪುರ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟಕ್ಕೆ ಕೆಲವು ಕಡೆ ಹಾನಿಯಾಗಿದೆ.
Male yavaga baruttade : ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ?
ರೈತರು, ಗ್ರಾಮಸ್ಥರಿಗೆ ತಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಗೊತ್ತಿರುವುದಿಲ್ಲ, ಅಂತಹ ರೈತರು ವರಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು.
ಇದನ್ನೂ ಓದಿ : ಮುಟೇಶನ್ ಪ್ರಕಾರ ನಿಮಗೆಷ್ಟು ಎಕರೆ ಜಮೀನಿದೆ? ಇಲ್ಲೇ ಚೆಕ್ ಮಾಡಿ
ಹೌದು, ರೈತರು ವರುಣಮಿತ್ರ ನಂಬರಿಗೆ ಕರೆ ಮಾಡಿದರೆ ಸಾಕು, ತಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಮಳೆಯೊಂದಿಗೆ ಮಳೆಯ ಮುನ್ಸೂಚನೆ ನೀಡಲಾಗುವುದು.
ವರುಣ ಮಿತ್ರ ಸಹಾಯವಾಣಿ (Varunamitra helpline Number)
ರೈತರು, ಸಾರ್ವಜನಿಕರು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ 9243345433 ಗೆ ಕರೆ ಮಾಡಿದರೆ ಸಾಕು, ಕರೆ ಸ್ವೀಕರಿಸಿದ ಸಿಬ್ಬಂದಿಗಳು ರೈತರಿಗೆ, ಸಾರ್ವಜನಿಕರಿಗೆ ಮಳೆಯ ಮಾಹಿತಿ ನೀಡತ್ತಾರೆ. ಈ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕೆಲಸ ನಿರ್ವಹಿಸುತ್ತದೆ. ಹಾಗಾಗಿ ರೈತರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿ ಪಡೆದುಕೊಳ್ಳಬಹುದು.
ವರುಣ ಮಿತ್ರ ಸಹಾಯವಾಣಿಯಿಂದ ಯಾವ ಯಾವ ಮಾಹಿತಿ ಪಡೆಯಬಹುದು? (what are information will get from Varunmitra Helpline Number)
ವರುಣ ಮಿತ್ರ ಸಹಾಯವಾಣಿಯಿಂದ ಸಾರ್ವಜನಿಕರು ಮಳೆಯ ಮಾಹಿತಿಯೊಂದಿಗೆ, ಹವಾಮಾನ, ಗಾಳಿಯ ವೇಗ, ಗಾಳಿ ಯಾವ ದಿಕ್ಕಿನಿಂದ ಯಾವ ದಿಕ್ಕಿಗೆ ಬಿಸಲಿದೆ? ಮಳೆಯ ಪ್ರಮಾಣ ಹೇಗಿರಲಿದೆ, ಗುಡುಗು ಮಿಂಚಿನ ಮಾಹಿತಿ ಪಡೆಯಲಿದ್ದಾರೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಆ ಗ್ರಾಮದ ಸುತ್ತಮುತ್ತ ವಾತಾವರಣ ಹೇಗಿರಲಿದೆ ಎಂಬ ಮಾಹಿತಿ ಪಡೆಯಲಿದ್ದಾರೆ.
ಮುಂಗಾರು ಪೂರ್ವ ಈಗಾಗಲೇ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಸಿಗೆ ಕಾಲದಲ್ಲಿ ಒಂದೆರಡು ಸಲ ಜೋರು ಮಳೆ ಸುರಿದು ಹಳ್ಳಕೊಳ್ಳಗಳು ಭರ್ತಿಯಾದರೆ ಜನಜಾನುವಾರುಗಳಿಗೆ ಅನುಕೂಲವಾಗಲಿದೆ. ಬಿಸಿಲಿಗೆ ತತ್ತರಿಸಿದ ಜನತೆ ಮಳೆಯ ಸಿಂಚನ ನೆಮ್ಮದಿ ನೀಡುತ್ತದೆ.ಬಿಸಿಲಿನ ಝಳಕ್ಕೆ ತಪ್ಪಿದಂತಾಗುತ್ತದೆ.
ಮಳೆಯ ಮಾಹಿತಿ ಪಡೆಯಲು ರೈತರು ಯಾವುದೇ ಕಚೇರಿಗೆ ಹೋಗಬೇಕಿಲ್ಲ, ಮನೆಯಲ್ಲಿಯೇ ಕುಳಿತು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಮೇಲಿನ ವರಣಮಿತ್ರ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಇನ್ನೇಕೆ ತಡ ಕೂಡಲೇ ವರುಣಮಿತ್ರ ನಂಬರಿಗೆ ಕರೆ ಮಾಡಿ ನಿಮ್ಮೂರಿನ ವ್ಯಾಪ್ತಿಯಲ್ಲಿ ಮಳೆ ಬರುತ್ತದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು. ಈ ವರುಣಮಿತ್ರ ನಂಬರ್ ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.