government office timing changed ಬಿಸಿಲಿನಿಂದಾಗಿ ತಾಪಮಾನದಲ್ಲಿ ತೀವ್ರ ಹೆಚ್ಚಳವಾಗಿರುವ ಕಾರಣದಿಂದ ಕಲಬುರಗಿ ಮತ್ತು ಬೆಳಗಾವಿ ವಿಭಾಗದ ಒಂಬತ್ತು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೇ ಅಂತ್ಯದವರೆಗೂ (government office timing changed) ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಭಾನುವಾರ ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಬಿಸಿಲಿನ ತಾಪಕ್ಕೆ ಜನರು ಮನೆಗಳಿಂದ ಹೊರ ಬಾರದಂಥ ಸ್ಥಿತಿ ನಿರ್ಮಾಣವಾಗಿದೆ. ರಣ ಬಿಸಿಲು ಹೆಚ್ಚಾಗುತ್ತಿರುವ ಹಿನ್ನೆಲೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ನೌಕರರ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ. ಏಪ್ರಿಲ್ 12ರಿಂದ ಹೊಸ ವೇಳಾಪಟ್ಟಿಯಂತೆ ಸರ್ಕಾರಿ ಕಚೇರಿಗಳು ಕಾರ್ಯಾರಂಭ ಮಾಡಲಿವೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರವರೆಗೂ ಸರ್ಕಾರಿ ಕಚೇರಿಗಳನ್ನು ತೆರೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ಇದನ್ನೂ ಓದಿ ಗೃಹಲಕ್ಷ್ಮೀ, ಅನ್ನಭಾಗ್ಯ ಹಣ ಈ ಲಿಸ್ಟ್ ನಲ್ಲಿದ್ದವರಿಗೆ ಜಮೆ- ಚೆಕ್ ಮಾಡಿ
ಕಲಬುರಗಿ ವಿಭಾಗದ ಎಲ್ಲ ಏಳು ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಬದಲಾವಣೆ ಮಾಡಲಾಗಿದೆ.
ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲಸ ಅವಧಿಯನ್ನು ಬದಲಾಯಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ವಿಭಾಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಿದೆ.
ಉತ್ತರ ಕರ್ನಾಟಕದಲ್ಲಿ ಗುರುತಿಸಿದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಕಾರ್ಯ ನಿರ್ವಹಿಸಲಿವೆ. ನಿಗದಿತ ಜಿಲ್ಲೆಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 1.30ರವರೆಗೂ ತೆರೆದಿರುತ್ತವೆ. ಈ ಅವಧಿಯಲ್ಲೇ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಲು ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿರುತ್ತದೆ. ಹಾಗಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗಬಾರದು. ಇದರೊಂದಿಗೆ ಬಿಸಿಲಿನ ಝಳಕ್ಕೆ ಆರೋಗ್ಯದ ಮೇಲೆ ಪರಿಣಾಮ ಬೀರಬಾರದೆಂಬ ಉದ್ದೇಶದಿಂದಾಗಿ ಈ ಸೂಚನೆ ನೀಡಿದೆ. ಅಧಿಕಾರಿಗಳು ಸಹ ನೀಡಿದ ಸಮಯದೊಳಗೆ ಕಚೇರಿಗೆ ತಲುಪಿ ಸಾರ್ವಜನಿಕರ ಕೆಲಸಗಳನ್ನು ಮಾಡಬೇಕೆಂದು ಸೂಚಿಸಿದ್ದಾರೆ. ಜನರು ಸಹ ಬೆಳಗಿನ ಸಮಯದೊಳಗೆ ಕಚೇರಿಗಳಿಗೆ ತೆರಳಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳಬಹುದು.
ಇದನ್ನೂ ಓದಿ ಫೆ. 28 ರಂದು ಈ ರೈತರಿಗೆ ಪಿಎಂ ಕಿಸಾನ್ 16 ನೇ ಕಂತಿನ ಹಣ ಜಮೆ
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೋವಿಡ್ 19 ಸೇರಿದಂತೆ ವಿಶೇಷ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಿದಾಗ ಸಮಯ ಬದಲಾವಣೆ ಆದೇಶ ಅನ್ವಯವಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ