Havamana ilakhe ಇಂದಿನಿಂದ 5 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

Written by Ramlinganna

Published on:

Havamana ilakhe: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿಇಂದಿನಿಂದ ಐದು ದಿನಗಳ ಕಾಲ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ.ಅದರಲ್ಲಿ ಹಳೇ ಮೈಸೂರು ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಯಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ ಜೊತೆಗೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.

ಮೈಸೂರು , ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ರಾಮನಗರ, ಚಾಮರಾಜನಗರ, ಮಂಡ್ಯ, ಕೋಲಾರ ಜಿಲ್ಲೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ.

ಈ ಜಿಲ್ಲೆಗಳಲ್ಲಿ ಸೋಮವಾರ ರಂಜೆ ಮಳೆಯಾಗಿದೆ. ಅದರಲ್ಲೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಸೇರಿದಂತೆ ಮತ್ತೆರಡು ಕಡೆಗಳಲ್ಲಿ ಭಾರಿ ಮಳೆ ಸುರಿದಿದೆ.

Havamana ilakhe ಯಾವ ದಿನ ಎಲ್ಲಿ ಮಳೆಯಾಗಲಿದೆ?

ಮೇ 7 ರಿಂದ  ಮೇ 10 ರವರೆಗೆ ಜೋರಾಗಿ ಮಳೆಯಾಗಲಿದೆ. ದಕ್ಷಿಣ ಕನ್ನಡ,ಉಡುಪಿಯಲ್ಲಿ ಮೇ 7 ರಿಂದ ಐದು ದಿನ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಮೇ 10 ರಿಂದ ಮೂರು ದಿನ ಮಳೆಯಾಗಲಿದೆ.ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮೇ 8 ರಿಂದ10 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.

Havamana ilakhe ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ- ಎಚ್ಚರಿಕೆ

ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ಸಂಭವನೀಯ ಪ್ರವಾಹ ಎದುರಿಸಲು ಸಜ್ಜಾಗುವಂತೆ ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಇದನ್ನೂ ಓದಿ : ಬರಗಾಲ ಪರಿಹಾರ ಜಮೆ ನಿಮಗೆಷ್ಟು ಜಮೆ ಇಲ್ಲೇ ಚೆಕ್ ಮಾಡಿ

ರಾಜ್ಯದಲ್ಲಿ ಮುಂಗಾರು ಮಳೆ ಶೇ. 104 ಇರುತ್ತದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕಂದಾಯ ಇಲಾಖೆಯಿಂದ ಹೊರಡಿಸಿರುವ ಸುತ್ತೋಲೆಯಲ್ಲಿ ಯಾವ ಇಲಾಖೆಯಿಂದ ಏನು ಕ್ರಮಕೈಗೊಳ್ಳಬೇಕೆಂದು ನಿರ್ದೇಶನ ನೀಡಲಾಗಿದೆ.

ಪ್ರವಾಹದಿಂದಾಗುವ ಹಾನಿ ತಡೆಗಟ್ಟಲು ತಾಲೂಕು ಆಡಳಿತಗಳ ಜತೆ ಸಭೆ ನಡೆಸಿ ಸಜ್ಜಾಗುವಂತೆ   ಸೂಚಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ.

ಇದನ್ನೂ ಓದಿ ಮಳೆಗಾಲಕ್ಕೆ  ಮುಂಚಿತವಾಗಿ ನೀರು ಸರಾಗವಾಗಿ ಹರಿಯುವಂತೆ ಕಾಲುವೆಗಳನ್ನು ಸರಿಪಡಿಸಬೇಕು. ಚರಂಡಿ, ಸೇತುವೆಗಳಲ್ಲಿ ತುಂಬಿರುವ ಹೂಳು ತೆಗೆಯಬೇಕು ನದಿ ನೀರಾವರಿ ಕೆರೆ ಕಾಲುವೆಗಳ ಸಮೀಪದ ನೆರೆಪೀಡಿತ ಪ್ರದೇಶವನ್ನು ಗುರುತಿಸಿ ಚರಂಡಿಗಳ ಮೇಲಿನ ಚಪ್ಪಡಿಗಳನ್ನು ಸುಸ್ಥಿತಿಯಲ್ಲಿರಿಸಲು ತಿಳಿಸಬೇಕು.

ಅಧಿಕಾರಿ ಮತ್ತು ಸಿಬ್ಬಂದಿ ಮೊಬೈಲ್ ನಂಬರ್ ಸಂಗ್ರಹಸಿ ವ್ಯಾಟ್ಸ್ ಆ್ಯಪ್ ಗ್ರೂಪ್ ರಚಿಸಬೇಕು. ತುರ್ತು ನಿರ್ವಹಣಾ ಕೇಂದ್ರ ಸ್ಥಾಪಿಸಬೇಕು. ಭೂ ಕುಸಿತವಾಗುವ ಪ್ರದೇಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ವರುಣಮಿತ್ರ ಸಹಾಯವಾಣಿ ನೆರವು ಪಡೆಯಬೇಕು. ವಿದ್ಯುತ್, ಆರೋಗ್ಯ, ಪಶು ಸಂಗೋಪನೆ, ಕೌಶಲ್ಯಾಭಿವೃದ್ಧಿ, ಅಗ್ನಿಶಾಮಕ ಸೇರಿ ಅಗತ್ಯ ಇಲಾಖೆಗಳನ್ನು ಸಜ್ಜುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

Havamana ilakhe ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಮಂಡ್ಯದಲ್ಲಿ ಯುವಕ ಬಲಿ

ಮಂಡ್ಯ ನಗರದ ಶಿಲ್ಪಶ್ರೀ ಆಸ್ಪತ್ರೆ ಬಳಿ ಭಾರಿ ಮಳೆಗೆ ಮರ ಬಿದ್ದು, ಜಿ. ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್ (27) ಎಂಬ ಯುವಕ ಮೃತಪಟ್ಟಿದ್ದಾನೆ. ಮಳೆ ಬಂದಿದ್ದರಿಂದ ಸ್ನೇಹಿತನ ಕಾರಿನೊಳಗೆ ಕುಳಿತಿದ್ದ.ಕಾರಿನ ಮರ ಬಿದ್ದು, ಕಾರ್ತಿಕ್ ಮೃತಪಟ್ಟಿದ್ದಾನೆ. ಮಂಗಳವಾರ ಆತನ ಹುಟ್ಟುಹಬ್ಬವೂ ಇತ್ತು.

Leave a Comment