Rain alert in 23 district : ರಾಜ್ಯಾದ್ಯಂತ ಇಂದು ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇನ್ನೂ ಕೆಲವು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಹೌದು, ರಾಜ್ಯದ 23 ಜಿಲ್ಲೆಗಳಲ್ಲಿ ಭಾನುವಾರ ಮಳಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಯಾವ ಯಾವ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ? ಯಾವ ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೊಡಗು,ಹಾಸನ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ)
Rain alert in 23 district ಯಾವ ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ?
ಯಾದಗಿರಿ, ಕಲಬುರಗಿ, ವಿಜಯಪುರ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ಶಿವಮೊಗ್ಗ, ಕಲಬುರಗಿ, ಉಡುಪಿ, ಚಿಕ್ಕಮಗಳೂರು ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಬಗ್ಗೆಯೂ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಬರಗಾಲ ಪರಿಹಾರ ಹಣ ಬಿಡುಗಡೆ ಮೊಬೈಲ್ ನಲ್ಲೇ status ಚೆಕ್ ಮಾಡಿ
ಮೇ 15 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಆರೇಂಜ್ ಹಾಗೂ ಯೋಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಳೆ ಮಾಹಿತಿ ಬೇಕೆ? ಈ ನಂಬರಿಗೆ ಕರೆ
ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹೌದು, 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.
ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ಸಾಮಾನ್ಯ ಮಳೆಗಿಂತ ಈ ಬಾರಿ ಹೆಚ್ಚಿನ ಮಳೆ
ಬೆಂಗಳೂರಿನಲ್ಲಿ ಏಪ್ರೀಲ್ 15 ರಂದು ಭಾರತೀಯ ಹವಾಮಾನ ಇಲಾಖೆ ಈ ಬಾರಿಯ ನೈಋತ್ಯ ಮಾನ್ಸೂನ್ ಮಳೆಯ ಸಾಮಾನ್ಯ ಮಳೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಎಂದು ಸೂಚಿಸಿದೆ.