rain rain ಇಂದಿನಿಂದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ

Written by Ramlinganna

Published on:

rain rain : ರಾಜ್ಯದ ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 22 ರಿಂದ 25 ರವರೆಗೆ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ಪ್ರಕೋಪ ನಿರ್ವಹಣಾ ಕೇಂದ್ರ (ಕೆಎಸ್ಎನ್.ಡಿ.ಎಂ.ಸಿ) ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಕೆಎಸ್ಎನ್.ಡಿ.ಎಂಸಿ ಮೇ 22 ರಿಂದ 25 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಗುಡುಗು ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.ಮೇ 22 ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ  ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಮೇ 22 ರಂದು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆಯುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ.

ಮೇ 23 ರಂದು ದಕ್ಷಿಣ ಕನ್ನಡ, ಕೋಲಾರ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ರಾಮನಗರ, ಚಾಮರಾಜನಗರ ಹಾಗೂ ಮೇ 24 ರಂದು ಉಡುಪಿ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ  ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 21 ರಂದು ಕರಾವಳಿ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಇನ್ನೂ ಮೇ 22 ರಂದು ಗುಡುಗು ಸಿಡಿಲು ಸಹತಿ ಮತ್ತಷ್ಟುಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಆಲಿಕಲ್ಲುಗಳು ಬೀಳಬಹುದು ಎಂದು ಹೇಳಲಾಗಿದೆ. ಇದೇ ರೀತಿ ಮೇ 23, 24 ಹಾಗೂ ಮೇ 25 ರಂದು ಸಹ ಇದೇ ರೀತಿಯಲ್ಲಿ ಗುಡುಗು ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹೇಳಲಾಗಿದೆ.

ದಕ್ಷಿಣ ಒಳನಾಡಿನ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಮೇ 21 ರಂದು ದಕ್ಷಿಣ ಒಳನಾಡಿನಲ್ಲಿ ಯಾವುದೇ ರೀತಿಯ ವಾರ್ನಿಂಗ್ ನೀಡಲಾಗಿಲ್ಲ. ಸಾಮಾನ್ಯದಿಂದ ಮಳೆಯಾಗಲಿದೆ. ಮೇ 22 ರಂದು ಗುಡುಗುಸಿಡಿಲು ಸಹಿತ ಭಾರಿ ಮಳೆಯಾಗಲಿದೆ. ಮೇ 23, 24 ಹಾಗೂ 25 ರಂದು ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.

rain rain  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೇಗಿರಲಿದೆ?

ಮೇ 21 ರಂದು ಉತ್ತಮ ಮಳೆಯಾಗಿದೆ.ಮೇ 22 ರಂದು ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಮೇ 23 ರಂದು ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಮೇ 24 ಹಾಗೂ 25 ರಂದು ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಹಳೆಯ ಪಹಣಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಕೊಡಗು ಜಿಲ್ಲೆಯಲ್ಲಿ ಮೇ 22 ರಿಂದ 24 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉಡುಪಿಯ ದಕ್ಷಿಣ ಭಾಗದಲ್ಲಿರುವ ಕಾರ್ಕಳ, ಕಾವು,ಮುಲ್ಕಿ, ಪ್ರಾಂತ್ಯಗಳಲ್ಲಿ ಕೋಲಾರದ ಉತ್ತರ ಭಾಗದ ಕೆಲವು ಕಡೆ ಭಾರಿ ಬಿರುಸಿನಿಂದ ಕೂಡಿದ ಅಂದರೆ 64.5 ರಿಂದ 115.5 ಮಿ.ಮೀ ವರೆಗೆ ಮಳೆಯಾಗಲಿದೆ.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರಿನ ದಕ್ಷಿಣ ಭಾಗ, ಕೋಲಾರ, ಹಾಸನದ ಪಶ್ಚಿಮ ಭಾಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗದ ಪಶ್ಚಿಮ ಭಾಗ, ಧಾರವಾಡಜಿಲ್ಲೆಯ ಪಶ್ಚಿಮ, ಮಧ್ಯ ಹಾಗೂ ಈಶಾನ್ಯ ಭಾಗಗಳಲ್ಲಿಅಂದಾಜು 15.6 ರಿಂದ 64,4 ಮಿ.ಮೀ ನಷ್ಟುಮಳೆಯಾಗಲಿದೆ.

ಹಾವೇರಿ, ವಿಜಯಪುರ, ಧಾರಾವಾಡ, ಗದಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಲಾಗಿದೆ.

ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಈ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಿ

ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಕೇಳಲು 9243345433 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು.

 

Leave a Comment