ಇನ್ನೂ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ

Written by Ramlinganna

Published on:

2 days heavy rain: ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಶನಿವಾರ ಹಾಗೂ ಭಾನುವಾರ ಸಹ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗುಸಹಿತ ಮಳೆ ಆಗಲಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಪ್ರತಿ ಗಂಟೆಗೆ  40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ.

ಉತ್ತರ ಕನ್ನಡ, ಹಾಸನ, ಮಂಡ್ಯ ದಾವಣಗೆರೆ ಜಿಲ್ಲೆಯ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರುಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣಕ್ಕಿಂತ ಕಡಿಮೆಮಳೆಯಾಗಲಿದೆ.

2 days heavy rain : ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಪ್ರತ್ಯೇಕ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಪ್ರತ್ಯೇಕ ವಾಯುಭಾರ ಕುಸಿತದಿಂದ ಮುಂಗಾರು ಆರಂಭಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಮೇ 31 ಕ್ಕೆ ಮುಂಗಾರು ಕೇರಳ ಪ್ರವೇಶಿಸಿದ ಒಂದೆರಡು ದಿನದಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮನವಾಗಲಿದೆ. ಈಗಾಗಲೇ ಮುಂಗಾರು ಮಾರುತಗಳು ನೈಋತ್ಯ ದಿಕ್ಕಿನ ಕಡೆ ಆಗಮಿಸಿವೆ. ಈ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಮುಂಗಾರಿಗೆ ಇನ್ನಷ್ಟು ಪುಷ್ಟಿ ನೀಡಲಿದೆ.

ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ಮತ್ತೊಂದು ವಾಯುಭಾರ ಕುಸಿತ ಪ್ರಬಲಗೊಂಡರೆ ಮುಂದಿನ ಎರಡು ದಿನ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್ಎನ್.ಡಿಎಂಸಿ ನಿವೃತ್ತ ನಿರ್ದೇಶಕ ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲವೇ? ಈ ನಂಬರಿಗೆ ಕರೆ ಮಾಡಿ

ದಕ್ಷಿಣ ಒಳನಾಡಿನ 17 ಜಿಲ್ಲೆಗಳಲ್ಲಿ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ರಾಮನಗರದಲ್ಲಿ ಮಾತ್ರ ಮಳೆ ಕೊರತೆ ಉಂಟಾಗಿದೆ. ಉಳಿದ ಕಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಒಟ್ಟಾರೆ ದಕ್ಷಿಣ ಒಳನಾಡಿನಲ್ಲಿ ಶೇ. 23 ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ ತಿಂಗಳು ಮುಕ್ತಾಯಕ್ಕೆ ಇನ್ನೂ ಒಂದು ವಾರ ಕಾಲಾವಕಾಶವಿದೆ. ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ?  ಇಲ್ಲಿ ಕರೆ ಮಾಡಿ ತಿಳಿದುಕೊಳ್ಳಿ

ನಿಮ್ಮೂರಿನಲ್ಲಿ ಹಾಗೂ ನಿಮ್ಮರಿನ ಸುತ್ತಮುತ್ತಲಿರುವ ಊರುಗಳಲ್ಲಿಮಳೆ ಯಾವಾಗ ಬರುತ್ತದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, 9243345433 ಗೆ ಕರೆ ಮಾಡಿದರೆ ಸಾಕು, ನಿಮಗೆ ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಸಿಗುತ್ತದೆ.

ಇನ್ನೂ ಮುಂದೆ ಸಿಡಿಲು ಬೀಳುವ ಮೊದಲೇ ಮೊಬೈಲಿಗೆ ಮುನ್ಸೂಚನೆ ನೀಡಲಿದೆ sidilu app

ಸಿಡಿಲು ಆ್ಯಪ್ ಬಳಕೆದಾರ ಇರುವ ಜಾಗದಿಂದ ಎಷ್ಚು ಕಿಲೋ ಮೀಟರ್ ಅಥವಾ ಮೀಟರ್ ದೂರದಲ್ಲಿ ಸಿಡಿಲು, ಗುಡುಗು ಕಂಡು ಬರುತ್ತಿದೆ ಹಾಗೂ ಮಳೆಯ ಮಾಹಿತಿ ನೀಡುತ್ತದೆ ಈ ಸಿಡಿಲು ಆ್ಯಪ್.

ಸಿಡಿಲು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ? (How to install Sidilu App)

ಸಿಡಿಲು ಎಂಬ ಆ್ಯಪ್ ನ್ನು ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಳ್ಳಲು ಈ

https://play.google.com/store/apps/details?id=com.moserptech.sidilu&hl=en&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು  ಅಲ್ಲಿ ಕಾಣುವ install ಮೇಲೆ ಕ್ಲಿಕ್ ಮಾಡಬೇಕು.ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. Allow Sidilu to access this devices location  ಕೆಳಕಡೆ While using the App ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಇದ್ದ ಸ್ಥಳದ ಸುತ್ತಮುತ್ತ ಎಲ್ಲಲ್ಲಿ ಸಿಡಿಲು ಬಡಿಯುವ ಸಾಧ್ಯತೆಯಿದೆ ಎಂಬು ಕಾಣಿಸುತ್ತದೆ.

ಒಂದು ವೇಳೆ ನಿಮ್ಮ ಸುತ್ತಮುತ್ತ ಸಿಡಿಲು ಬಡಿಯುವ ಸಾಧ್ಯತೆಯಿಲ್ಲದಿದ್ದಲ್ಲಿ No lightning activity in your area  ಎಂಬ ಮೆಸೇಜ್ ಗೋಚರಿಸುತ್ತದೆ. ನೀವು ಇದ್ದ ಸ್ಥಳ ತೋರಿಸಲಾಗಿರುತ್ತದೆ. ನಿಮ್ಮ ಸುತ್ತಮುತ್ತ 1 ಕಿ.ಮೀ ದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಸಿಡುಲು ಬೀಳುವ ಸಾಧ್ಯತೆಯಿದ್ದರೆ ಅಲ್ಲಿ ನಿಮಗೆ ಮೆಸೇಜ್ ಗೋಚರಿಸುತ್ತದೆ.

Leave a Comment