10 thousand incentive money : ಕ್ರೀಡಾಪಟು ವಿದ್ಯಾರ್ಥಿಗಳಿಗಿಲ್ಲಿದೆ ಗುಡ್ ನ್ಯೂಸ್. ಹೌದು,ಕ್ರೀಡೆಯಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಅವರನ್ನು ಪ್ರೋತ್ಸಾಹಿಸಲು 10 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು.
ಹೌದು, 2023-24ನೇ ಸಾಲಿಗೆ ಪ್ರೋತ್ಸಾಹಿತ ಕ್ರೀಡಾಪಟು ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆಯಡಿ ಪ್ರತಿಭಾವಂತ ಮಾಧ್ಯಮಿಕ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವಾರ್ಷಿಕ 10 ಸಾವಿರ ರೂಪಾಯಿಯಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಹ ಕ್ರೀಡಾಪಟುಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
10 thousand incentive money ಯಾವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು?
ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು ( 6 ರಿಂದ10ನೇ ತರಗತಿ) ಗಳಿಗೆ ವಾರ್ಷಿಕ 10 ಸಾವಿರ ರೂಪಾಯಿಯಂತೆ ಪ್ರೋತ್ಸಾಹಿತ ಕ್ರೀಡಾಪಟು ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ವಿದ್ಯಾರ್ಥಿ ವೇತನನೀಡಲಾಗುವುದು.
2023-24 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ
Seva Sindhu 1 (karnataka.gov.in)
ವೆಬ್ಸೈಟ್ ದಲ್ಲಿ ಆನ್ಲೈನ್ ಮೂಲಕ 2024 ರ ಜೂನ್ 20 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅರ್ಜಿದರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ ( 6 ರಿಂದ 10ನೇ ತಗರತಿ)ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 01-04-2023 ರಿಂದ 31-03-2024 ರವರೆಗೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಅಥವಾ ಭಾರತ ಸರ್ಕಾರದಿಂದ ಮಾನ್ಯತೆಪಡೆದ ಅಧಿಕೃತಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಹಾಗೂ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.
ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ 10 ಸಾವಿರ ರೂಪಾಯಿಗಳನ್ನು ಮಾತ್ರ ಮಂಜೂರು ಮಾಡಲಾಗುವುದು.
ಇದನ್ನೂ ಓದಿ : 74 ಕೋಟಿ ಬರ ಪರಿಹಾರ ಜಮೆ: ನಿಮಗೆಷ್ಟು ಜಮೆ ಇಲ್ಲೇ ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
10 thousand incentive money ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
Seva Sindhu 1 (karnataka.gov.in)
ಸೇವಾಸಿಂಧು ಪೋರ್ಟಲ್ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಸೇವಾ ಸಿಂಧು ಪೋರ್ಟಲ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅರ್ಜಿ ತೆರೆದುಕೊಳ್ಳುವುದು. ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು.