Pm kisan amount release : ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿಯವರು ಪಿಎಂ ಕಿಸಾನ್ ನಿಧಿಯ17ನೇ ಕಂತು ಬಿಡುಗಡೆಗೆ ಸಹಿ ಹಾಕುವ ಮೂಲಕ ತಮ್ಮ 3ನೇ ಅವಧಿಯನ್ನು ಆರಂಭಿಸಿದ್ದಾರೆ.
ಹೌದು, ಸುಮಾರು 20 ಸಾವಿರ ಕೋಟಿ ರೂಪಾಯಿ ಪಿಎಂ ಕಿಸಾನ್ ನಿಧಿ ಯೋಜನೆಯು ಸುಮಾರು 9.3 ಕೋಟಿ ರೈತರಿಗೆ ಅನುಕೂಲವಾಗಲಿದೆ.
ಪಿಎಂ ಕಿಸಾನ್ ಯೋಜನೆಗೆ ಹಣ ಬಿಡುಗಡೆಗೆ ಸಹಿ ಹಾಕಿದ ಬಳಿಕ ಮಾತನಾಡಿದ ಅವರು, ನಮ್ಮದು ರೈತರ ಕಲ್ಯಾಣಕ್ಕೆ ಸಂಪೂರ್ಣ ಬದ್ಧವಾಗಿರುವ ಸರ್ಕಾರವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತವು ಇದಕ್ಕೆ ಸಂಬಂಧಿಸಿದೆ. ಮುಂದಿನ ದಿನಗಳಲ್ಲಿ ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ನಾವು ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ ಎಂದು ಹೇಳಿದ್ದಾರೆ.
Pm kisan amount release ಪಿಎಂ ಕಿಸಾನ್ 17ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಬಿಡುಗಡೆಗಾಗಿ ಕಾಯುತ್ತಿರುವ ರೈತರಿಗೆ ಈಗಾಗಲೇ ಸಂತಸದ ಸುದ್ದಿ ದೊರೆತಿದೆ. ಅತೀ ಶೀಘ್ರದಲ್ಲಿ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.ಯಾವ ಯಾವ ರೈತರ ಖಾತೆಗೆ ಹಣ ಜಮೆಯಾಗಲಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ರೈತರು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ವೆಬ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ನಿಮ್ಮ ಜಿಲ್ಲೆ ಆಯ್ಕೆ ಮಾಡಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ.
ಏನಿದು ಪಿಎಂ ಕಿಸಾನ್ ಯೋಜನೆ?
ಪಿಎಂ ಕಿಸಾನ್ ಯೋಜನೆಯನ್ನು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವುದಕ್ಕಾಗಿ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನುಮೂರು ಕಂತುಗಳಲ್ಲಿ ಹಣ ಬಿಡುಗಡೆ ಜಮೆ ಮಾಡಲಾಗಿದೆ. ರೈತರಿಗೆ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿಯಂತೆ ಒಟ್ಟು ಒಂದು ವರ್ಷದಲ್ಲಿ 6 ಸಾವಿರ ರೂಪಾಯಿ ಜಮೆ ಮಾಡಲಾಗುವುದು.
ಇದನ್ನೂ ಓದಿ : ಗೃಹಲಕ್ಷ್ಮೀ ಅನ್ನಭಾಗ್ಯ ಹಣ ಜಮೆ ಮೊಬೈಲ್ ನಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಈಗಾಗಲೇ ದೇಶಾದ್ಯಂತ 9 ಕೋಟಿಗೂ ಹೆಚ್ಚು ರೈತರು ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಈ ಯೋಜನೆಯು ಅತೀ ಮಹತ್ವದ್ದಾಗಿದೆ..
ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣಯಾವಾಗ ಜಮೆಯಾಗಲಿದೆ?
ಪಿಎಂ ಕಿಸಾನ್ ಯೋಜನೆಯ 16 ನೇ ಕಂತು ಫೆಬ್ರವರಿ 28 ರಂದು ಜಮೆ ಮಾಡಲಾಗಿದ್ದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಯೋಜನೆಯ ಹಣ ರೈತರ ಖಾತೆಗೆ ಜಮೆಯಾಗಲಿದೆ. ಈ ಆಧಾರದ ಮೇಲೆ ಜೂನ್ ತಿಂಗಳ ಇದೇ ವಾರದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮೆ ಯಾಗುವ ಸಾಧ್ಯತೆಯಿದೆ.
ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆಗೆ ಸಹಿ ಸಹ ಹಾಕಿದ್ದಾರೆ. ಹಾಗಾಗಿ ಅತೀ ಶೀಘ್ರದಲ್ಲಿ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ. ಮುಂಗಾರು ಹಂಗಾಮಿನ ಬಿತ್ತನೆಗಾಗಿ ಕಾಯುತ್ತಿರುವ ರೈತರಿಗೆ ಇದೊಂದು ಗುಡ್ ನ್ಯೂಸ್ ಆಗಲಿದೆ.