ಪಿಎಂ ಕಿಸಾನ್ ಹಣ ಜಮೆಯಾಯಿತೋ ಇಲ್ಲವೋ ಇಲ್ಲೇ ಚೆಕ್ ಮಾಡಿ

Written by Ramlinganna

Updated on:

ಪಿಎಂ ಕಿಸಾನ್ ಯೋಜನೆಯ 17ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಿದ್ದಾರೆ. ಈ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಯಿತೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಯಾರು ಯಾರು ತಮ್ಮ ಹೆಸರುಗಳನ್ನು ನೋಂದಣಿ ಮಾಡಿಸಿದ್ದಾರೋ ಹಾಗೂ ಯಾವ ರೈತರು ಈ ಯೋಜನೆಗೆ ಅರ್ಹರಾಗಿದ್ದಾರೋ ಅಂತಹ ರೈತರಿಗೆ  ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮೆಯಾಗಿದೆ. .  ಆದರೂ ಸಹ ಇನ್ನೂ ಕೆಲವು ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಿಲ್ಲ.. ಅಂತಹ ರೈತರಿಗೇಕೆ ಹಣ ಜಮೆಯಾಗಿಲ್ಲ ಎಂಬುದನ್ನು ಇಲ್ಲೇ ಚೆಕ್ ಮಾಡಬಹುದು.

ಏನಿದು ಪಿಎಂ ಕಿಸಾನ್ ಯೋಜನೆ?

ಪಿಎಂ ಕಿಸಾನ್ ಯೋಜನೆಯನ್ನು 2018-19 ರ ಸಾಲಿನಲ್ಲಿ ಆರಂಭಿಸಲಾಯಿತು. ರೈತರಿಗೆ ಆರ್ಥಿಕ ಸಹಾಯವಾಗಲೆಂಬ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೆ ತಲಾ 2 ಸಾವಿರ ರೂಪಾಯಿ ಜಮೆ ಮಾಡಲಾಗುತ್ತಿದೆ. ಹೀಗೆ ಸಮಾನವಾಗಿ ಮೂರು ಕಂತುಗಳಲ್ಲಿ  ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತ 6 ಸಾವಿರ ರೂಪಾಯಿಯನ್ನು ಖಾತೆಗೆ ಜಮೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ರೈತರ ಖಾತೆಗೆ 16 ಕಂತುಗಳಿಂದ ಒಟ್ಟು 32 ಸಾವಿರ ರೂಪಾಯಿ ಜಮೆಯಾಗಿದೆ. ಈಗ 17ನೇ ಕಂತಿನ ಹಣ ಜೂನ್  18 ರಂದು ಜಮೆಯಾಯಿತು

ಪಿಎಂ ಕಿಸಾನ್ ಜಮೆಯಾಗಿದೆಯೋ ಇಲ್ಲವೋ ಸ್ಟೇಟಸ್ ಹೀಗೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx      

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ನಮೂದಿಸಿ ನೀವು ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ ನೀವು ಈ know your registration no. ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಆಗ ನೀವು ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಗೆಟ್ ಡಿಟೇಲ್ಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ಕಾಣಿಸುತ್ತದೆ. ನಿಮ್ಮ ಹೆಸರು ಕಾಣಿಸುತ್ತದೆ. ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದರೂ ಜಮೆಯಾಗುತ್ತಿಲ್ಲವೇ?

ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದಿದ್ದರೂ ಸಹ ನಿಮಗೆ ಏಕೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ.  ರೈತರು ತಮ್ಮ ಹೆಸರು ಆಧಾರ್ ಕಾರ್ಡ್ ಜಮೀನಿನ ಪಹಣಿ (ಉತಾರ) ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ಒಂದೇ ರೀತಿಯಾಗಿರಬೇಕು.  ಹೆಸರು ಮತ್ತು ತಂದೆಯ ಹೆಸರು ವ್ಯತ್ಯಾಸವಾಗಿದ್ದರೆ ಜಮೆಯಾಗುವುದಿಲ್ಲ.

ಇದನ್ನೂ ಓದಿ ಯಾವುದೇ ಜಮೀನು ಯಾರ ಹೆಸರಿನಲ್ಲಿದೆ? Mobileನಲ್ಲೇ ಚೆಕ್ ಮಾಡಿ

ನಿಮ್ಮ ಹೆಸರಿನಲ್ಲಿರುವ ಜಮೀನು ರೈತ ಸಂಪರ್ಕ ಕೇಂದ್ರದ ಮೂಲಕ ಲಿಂಕ್ ಆಗಿರಬೇಕು. ಅಂದರೆ ಎಫ್ಐಡಿ ಆಗಿದ್ದವರಿಗೆ ಮಾತ್ರ 17 ನೇ ಕಂತಿನ ಹಣ ಜಮೆಯಾಗಿದೆ.

Leave a Comment