ಇಂದಿನಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ

Written by Ramlinganna

Published on:

Two days rain red alert : ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಮಲೆನಾಡು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಹೌದು, ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 20 ಸೆಂ.ಮೀಗೂ ಅಧಿಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ 15 ರಿಂದ 20 ಸೆಂ. ಮೀ ಮೀರವರೆಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಜುಲೈ 8 ರಿಂದ 10 ರವರೆಗೆ ಮೂರು ದಿನ ಮಲೆನಾಡು ಮತ್ತು ಕರಾವಳಿಯ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿಜುಲೈ 8 ರಿಂದ ಮಳೆಯಾಗಲಿದೆ. ಅದೇ ರೀತಿ ಉತ್ತರ ಕರ್ನಾಟಕದಜಿಲ್ಲಗಳಲ್ಲಿ ಜುಲೈ 9 ರಿಂದ ಹೆಚ್ಚು ಮಳೆಯಾಗಲಿದೆ. ಒಟ್ಟಾರೆ ಕರ್ನಾಟಕದಲ್ಲಿ ಜುಲೈ 12 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಅಲ್ಲಿ ನಿಮಗೆ ಹವಾಮಾನ ವರದಿ ಕಾಣಿಸುತ್ತದೆ.

Two days rain red alert ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಇದನ್ನೂ ಓದಿ ನಿಮ್ಮ ಸರ್ವೆ ನಂಬರಿನಲ್ಲಿ ಯಾವ ರೈತರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ಇನ್ನೇಕೆ ತಡ ಕೂಡಲೇ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ನಿಮ್ಮೂರಿನ ಸುತ್ತಮುತ್ತ ಮಳೆ ಯಾವಾಗ ಬರುತ್ತದೆ ಎಂಬುದನ್ನು ಈಗಲೇ ತಿಳಿದುಕೊಳ್ಳಬಹುದು.

ಕಲಬುರಗಿ ಜಿಲ್ಲೆಯಲ್ಲಿ ತಂತುರು ಆಗಾಗ ರಭಸದ ಮಳೆ

ಕಲಬುರಗಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಆಗಾಗ ತುಂತುರು ಮಳೆ ಮತ್ತೆ ಕೆಲವು ಸಲ ರಭಸದ ಮಳೆಯಾಗುತ್ತಿದೆ. ಹಾಗಾಗಿ ಕಲಬುರಗಿ ಜಿಲ್ಲೆಯಾದ್ಯಂತ ಉತ್ತಮ ವಾತಾವರಣ ಏರ್ಪಟ್ಟಿದೆ. ಇದರಿಂದಾಗಿ ರೈತರಲ್ಲಿ ಮಂದಹಾಸ ಮೂಡಿದೆ. ಇನ್ನೂ ಒಂದು ವಾರ ಕಾಲ ಹೀಗೆ ಮಳೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರಿಂದ ಕೃ ಷಿ ಚಟುವಟಿಕೆ ಇನ್ನೂ ಹೆಚ್ಚು ಚುರುಕುಗೊಳ್ಳಲಿದೆ.

Leave a Comment