Krishi Honda ನಿರ್ಮಾಣಕ್ಕೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Subsidy for Krishi Honda ಕೃಷಿ ಹೊಂಡ ನಿರ್ಮಿಸಿ ನೀರಾವರಿ ಸೌಲಭ್ಯ ಒದಗಿಸಿಕೊಳ್ಳುವ ರೈತರಿಗೆ ಇಲ್ಲಿದೆ ಸಂತಸದ ಸುದ್ದಿ. ಹೌದು, ಕೃಷಿ ಹೊಂಡ ನಿರ್ಮಾಣಕ್ಕೆ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ. ಯಾವ ಜಿಲ್ಲಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬುದರ  ಮಾಹಿತಿ ಇಲ್ಲಿದೆ.

ಪ್ರಸಕ್ತ ಸಾಲಿನ ರಾಷ್ಟ್ರೀಯ  ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳು ಹಾಗೂ ಇತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೌಲಭ್ಯ ಪಡೆಯಲು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರೈತರು ತೋಟಗಾರಿಕೆ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಇದೇ ಜುಲೈ 8 ಕೊನೆಯ ದಿನವಾಗಿದೆ. ಬೇಗನೆ ಅರ್ಜಿ ಸಲ್ಲಿಸಿರೈತರು ಮೇಲಿನ ಸೌಲಭ್ಯ ಪಡೆದುಕೊಳ್ಳಬಹುದು.

ಇದನ್ನೂ ಓದಿ ನಿಮ್ಮ ಸರ್ವೆ ನಂಬರಿನಲ್ಲಿ ಯಾವ ರೈತರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಅಧಿಕಾರಿಗಳ ಪ್ರಸನ್ನ ಕುಮಾರ್ ಜಿ. ಎಚ್. 910838179 (ಕಸಬಾ), ವೆಂಕಟೇಶ್ವರ ನಾಯಕ್ ಎಲ್. (ಬಿಳಿಚೋಡು), ಸುನೀಲ್ ಕುಮಾರ ಎಚ್.ಟಿ. ಅವರನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನಿನ ಪಹಣಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ರೈತರ ಎಫ್ಐಡಿ ಇರುವುದು ಕಡ್ಡಾಯವಾಗಿದೆ. ಇದರೊಂದಿಗೆ ಇತ್ತೀಚನ ಭಾವಚಿತ್ರಇರಬೇಕು. ಈ ಹಿಂದೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರಬಾರದು.

Subsidy for Krishi Honda ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಏನೇನು ನೀಡಲಾಗುವುದು?  

ಮಳೆ ನೀರಿನ ಸಮರ್ಥ ಬಳಕೆ ಮತ್ತು ಸಂರಕ್ಷಿತ ನೀರಾವರಿಗೆ ತನ್ಮೂಲಕ ಸುಧಾರಿತ ಬೆಳೆ ಉತ್ಪಾದನಾ ಪದ್ದತಿ ಅಳವಡಿಸಲು ರೈತರನ್ನು ಪ್ರೋತ್ಸಾಹಿಸಲು ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಪ್ಯಾಕೇಜ್ ರೂಪದಲ್ಲಿ ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಪಂಪ್ ಸೆಟ್, ಲಘು ನೀರಾವರಿ ಘಟಕ, ಕೃಷಿ ಹೊಂಡದ ಸುತ್ತಲು ನೆರಳು ಪರದೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.

ಕೃಷಿ ಹೊಂಡ ನಿರ್ಮಾಣಕ್ಕೆ ನೀಡಲಾಗುವ ಸಬ್ಸಿಡಿಗಳ ಮಾಹಿತಿ

ಕೃಷಿ ಭಾಗ್ಯ ಯೋಜನೆಯಡಿಯಲ್ಲಿಕೃಷಿ ಹೊಂಡ ಹಾಗೂ ಇತರ ಘಟಕಗಳ ಅನುಷ್ಠಾನಕ್ಕೆ ಸಬ್ಸಿಡಿ ನೀಡಲಾಗುವುದು. ಹೌದು, ಕೃಷಿ ಹೊಂಡ ನಿರ್ಮಾಣಕ್ಕೆ ಸಾಮಾನ್ಯ ಜನರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುವುದು.

ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ / ಪರ್ಯಾ ಮಾದರಿಗಳಿಗೆ ಗರಿಷ್ಠ 50 ಸಾವಿರರೂಪಾಯಿ ನೀಡಲಾಗುವುದು. ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ ಸೆಟ್ 3 ರಿಂದ 5 ಹೆಚ್ ಪಿ ಗೆ ಸಾಮಾನ್ಯ ಜನರಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದೆ. ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ (ತುಂತುರು ಅಥವಾ ಹನಿ ನೀರಾವರಿ)ಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಕೃಷಿ ಹೊಂಡದಸುತತ್ಲೂ ನೆರಳು ಪರದೆ ನಿರ್ಮಿಸಲು ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

Leave a Comment