Anganawadi Teacher: ಮಹಿಳೆಯರಿಗೆ ಗುಡ್ ನ್ಯೂಸ್. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಅಂಗನವಾಡಿ ಟೀಚರ್ ಹುದ್ದೆಗೆ ಕಾಯುತ್ತಿರುವ ಮಹಿಳೆಯರು ಈಗ ಎಲ್ಲೆಲ್ಲಿ ಹುದ್ದೆಗಳು ಖಾಲಿಯಿವೆ ಎಂಬುದನ್ನು ಚೆಕ್ ಮಾಡಿಕೊಂಡು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು? ಯಾವ ಯಾವ ತಾಲೂಕಿನಿಂದ ಅರ್ಜಿ ಆಹ್ವಾನಿಸಲಾಗಿದೆ? ಕೊನೆಯ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿವಿಧ ತಾಲೂಕುಗಳಿಂದ 61 ಅಂಗನವಾಡಿ ಕಾರ್ಯಕರ್ತೆ ಹಾಗೂ 238 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಕಲಬುರಗಿ ಜಿಲ್ಲೆಯ ಒಂಬತ್ತು ಶಿಶು ಅಭಿವೃದ್ಧಿಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆ ಹಾಗೂ 238 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಫಜಲ್ಪೂರ ತಾಲೂಕಿನಲ್ಲಿ 17 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 25 ಸಹಾಯಕಿಯರ ಹುದ್ದೆಗಳು, ಆಳಂದ ತಾಲೂಕಿನಲ್ಲಿ 5 ಅಂಗನವಾಡಿ ಕಾರ್ಯಕರ್ತೆಯರ ಮತ್ತು 26 ಸಹಾಯಕಿಯರ ಹುದ್ದೆಗಳು, ಚಿಂಚೋಳಿ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆಯರ ಹಾಗೂ15 ಸಹಾಯಕಿಯರ ಹುದ್ದೆಗಳು, ಚಿತ್ತಾಪುರ ತಾಲೂಕಿನಲ್ಲಿ 10 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ನಿಮ್ಮ ಜಮೀನು ಹಿಂದೆ ಯಾರ ಯಾರ ಹೆಸರಿನಲ್ಲಿತ್ತು? ಇಲ್ಲೇ ಚೆಕ್ ಮಾಡಿ
ಕಲಬುರಗಿ (ಗ್ರಾಮೀಣ) ಯೋಜನೆ ವ್ಯಾಪ್ತಿಯಲ್ಲಿ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳು, ಕಲಬುರಗಿ (ನಗರ) ಯೋಜನೆ ವ್ಯಾಪ್ತಿಯಲ್ಲಿ 92 ಅಂಗನವಾಡಿ ಸಹಾಯಕಿಯರ ಹುದ್ದೆಗಳು, ಜೇವರ್ಗಿ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆಯರ ಮತ್ತು 20 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೇಡಂ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರ ಮತ್ತು 19 ಸಹಾಯಕಿಯರ ಹುದ್ದೆಗಳು ಹಾಗೂ ಶಹಾಬಾದ್ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 11 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಬಹುದು.
ಆಗಸ್ಟ್ 7 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
Anganawadi Teacher ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://karnemakaone.kar.nic.in/abcd/ApplicationForm_JA_org.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ಕೆಟಗೇರಿ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅರ್ಹ ಮಹಿಳೆಯರ ಬಳಿ ಆಧಾರ್ ಕಾರ್ಡ್ ಇರಬೇಕು. ವಿಧ್ಯಾಭ್ಯಾಸ ಅರ್ಹತೆ ಪ್ರಮಾಣ ಪತ್ರ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಜನ್ಮದಿನಾಂಕದ ದಾಖಲೆ ಇರಬೇಕು. ಇತ್ತೀಚಿನ ಭಾವಚಿತ್ರ ಇರಬೇಕು.
ವಯೋಮಿತಿ
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.
ವಿಕಲಚೇತನರಿಗೆ 10 ವರ್ಷ ಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ವಿದ್ಯಾರ್ಹತೆ
ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಒಂದು ವರ್ಷದ ನರ್ಸರಿ ಅಥವಾಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಸದರಿಯವರಿಗೆ ಬೋನಸ್ 5 ಅಂಕಗಳನ್ನು ನೀಡಲಾಗುವುದು.