Polythene cover subsidy : ಕೃಷಿ ಭಾಗ್ಯ ಯೋಜನೆ ಅಡಿ ಸೌಲಭ್ಯ ಹಾಗೂ ಸಹಾಯಧನ ಪಡೆಯಲು ಜಿಲ್ಲೆಯ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೃಷಿ ಭಾಗ್ಯ ಪ್ಯಾಕೇಜ್ ನಲ್ಲಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನುಒಳಗೊಂಡಿದ್ದು, ಘಟಕಗಳ ವಿವರ ಇಂತಿದೆ. ಕ್ಷೇತ್ರ ಬಹು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ ವಿನ್ಯಾಸಕ್ಕೆ), ನೀರು ಇಂಗಿಹೋಗದಂತೆ ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗಕ್ಕೆ ಗರಿಷ್ಠ 70,000 ರೂಪಾಯಿ ಹಾಗೂ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ವರ್ಗಕ್ಕೆ ಗರಿಷ್ಠ 8000 ರೂಪಾಯಿ ಮಿತಿಯೊಂದಿಗೆ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಜಿ.ಐ.ವೈರ್ ಫೆನ್ಸಿಂಗ್) ಹೊಂಡದಿಂದ ನೀರು ಎತ್ತಲೂ ಡೀಜಲ್ ಪೆಟ್ರೋಲ್ ಸೋಲಾರ್ ಪಂಪ್ ಸೆಟ್ (10 ಹೆಚ್.ಪಿ.ಯವರೆಗೆ) ಸೋಲಾರ್ ಪಂಪ್ ಸೆಟ್ ಅಳವಡಿಸಿದ ಫಲಾನುಭವಿಗಳಿಗೆ 30000 ರೂಪಾಯಿಗಳ ಪ್ರೋತ್ಸಾಹ ಧನ ನೀಡುವುದು ಹಾಗೂ ನೀರನ್ನು ಬೆಳೆಗ ಹಾಯಿಸಲು ಸೂಕ್ಷ್ಮ (ತುಂತುರು ಅಥವಾ ಹನಿ) ನೀರಾವರಿ ಯೋಜನೆಯ ಒಗ್ಗೂಡಿಸುವಿಕೆಯಡಿ ಸಬ್ಸಿಡಿ ನೀಡಲಾಗುವುದು.
Polythene cover subsidy ನೀರು ಬಳಕೆ ಮಾಡಿ ಆದಾಯ ಹೆಚ್ಚಿಸಿ
ಮಳೆ ಆಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿಸಲು ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಉತ್ಪಾದಕತೆ ಹೆಚ್ಚಿಸಿ, ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳಗಳಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಪ್ಯಾಕೇಜ್ ಯೋಜನೆಯಪ್ರಮುಖ ಗುರಿಯಾಗಿದೆ. ಜೇಷ್ಠತಾ ಆಧಾರದ ಮೇಲೆ, ನಿಯಮಾನುಸಾರ ಪರಿಶೀಲಿಸಿ ರೈತರ ಅರ್ಜಿಗಳನ್ನು ಪುರಸ್ಕರಿಸಲಾಗುವುದು.
ಮೇಲಿನ ಸಬ್ಸಿಡಿ ಪಡೆಯಲು ಇಚ್ಚಿಸುವ ರೈತರು ಕಲಬುರಗಿ ಜಿಲ್ಲೆಯವರಾಗಿರಬೇಕು.
ಹನಿ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ : 2024-25 ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಮತ್ತು ಅಟಲ್ ಭೂಜಲ್ ಯೋಜನೆಯಡಿ ಕೃಷಿ ಬೆಳೆಗಳಲ್ಲಿ ನೀರಿನ ಸಮರ್ಥ ಬಳಕೆಯನ್ನು ಉತ್ತೇಜಿಸಲು ಕೃಷಿ ಇಲಾಖೆ ವತಿಯಿಂದ ತುಂತುರು ಮತ್ತು ಹನಿ ನೀರಾವರಿ ಘಟಕಗಳನ್ನು ಶೇ. 90 ರ ರಿಯಾಯಿತಿ ದರದಲ್ಲಿ ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಹಣಿ, ಕೃಷಿ ಬೆಳೆ ದೃಢೀಕರಣ ಪತ್ರ, ಕೊಳವೆಬಾವಿ, ತೋಟಗಾರಿಕೆ ಮತ್ತು ರೇಷ್ಮೆಇಲಾಖೆಗಳ ನಿರಕ್ಷೇಪಣೆ ಪತ್ರ, 100 ರೂಪಾಯಿ, ಸ್ಟ್ಯಾಂಪ್ ಪೇಪರ್, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಪ್ರತಿ, 4 ಪಾಸ್ ಪೋರ್ಟ್ ಭಾವಚಿತ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರ, ಮತ್ತಿತರ ದಾಖಲೆ ಸಲ್ಲಿಸಬೇಕು.
ಇದನ್ನೂ ಓದಿ : Pmkisan farmers new list ಪಿಎಂ ಕಿಸಾನ್ ಹೊಸ ಪಟ್ಟಿ ಬಿಡುಗಡೆ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಗುಡಿಬಂಡೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದಎ. ಕೇಶವರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದಕ್ಕಾಗಿ ಕೊಳವೆ ಬಾವಿಗೆ 4 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಮಗ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನಿತರ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ನಿರುದ್ಯೋಗಿಗಳು ಆಗಸ್ಟ್ 31 ರೊಳಗಗಾಗಿ ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್ನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಿಚ್ಚಿಸುವ ಫಲಾನುಭವಿಗಳಿಗೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕದ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರುಜಿಲ್ಲೆಗಳಿಗೆ 4.75 ಲಕ್ಷ ರೂಪಾಯಿ ಇರುತ್ತದೆ. ಇದರಲ್ಲಿ ವಿದ್ಯುದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75 ಸಾವಿರ ರೂಪಾಯಿಯನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.
ಇನ್ನುಳಿದ ಜಿಲ್ಲೆಗಳಿಗೆ 3.75 ಲಕ್ಷ ರೂಪಾಯಿ ನೀಡಲಾಗುವುದು. ಇದರಲ್ಲಿ ವಿದ್ಯುದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75 ಸಾವಿರ ರೂಪಾಯಿ ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ವೆಚ್ಚ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50 ಸಾವಿರ ರೂಪಾಯಿ ಸಾಲವನ್ನು ಶೇ. 4 ರ ಬಡ್ಡಿ ದರದಲ್ಲಿಮಂಜೂರು ಮಾಡಲಾಗುವುದು.