ಪಿಎಂ ಕಿಸಾನ್ ಹಣ ಈ ರೈತರ ಖಾತೆಗಷ್ಟೆ ಜಮೆ

Written by Ramlinganna

Updated on:

PM kisan release date : ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತು ಅಂದರೆ 18ನೇ ಕಂತಿನ ಹಣ ಅಕ್ಟೋಬರ್ 5 ರಂದು  ರೈತರ ಖಾತೆಗೆ ಜಮೆಯಾಗಲಿದೆ? ಯಾರು ಯಾರಿಗೆ ಜಮೆಯಾಗಲಿದೆ? ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

ಪಿಎಂ ಕಿಸಾನ್ ಯೋಜನೆಯಡಿ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಈ ತಿಂಗಳ ಕೊನೆಯ ವಾರ ಅಥವಾ ಅಥವಾ ಅಕ್ಟೋಬರ್ ತಿಂಗಳ  5 ರಂದು  ಪಿಎಂ ಕಿಸಾನ್ 18ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮೆಯಾಗುವುದು ಗ್ಯಾರೆಂಟಿ.ಹಾಗಾಗಿ ಯಾವ ಯಾವ ರೈತರು ಇನ್ನೂ ಇಕೆವೈಸಿ ಹಾಗೂ ಆಧಾರ್ ಸೀಡ್ ಮಾಡಿಸಿಲ್ಲವೋ ಅವರು ಕೂಡಲೇ ತಮ್ಮಹತ್ತಿರದ ಬ್ಯಾಂಕ್ ಶಾಖೆಯಲ್ಲಿ ಆಧಾರ್ ಸೀಡ್ ಮಾಡಿಸಿಕೊಳ್ಳಬೇಕು. ಇಕೆವೈಸಿ ಇನ್ನೂ ಯಾರು ಯಾರು ಮಾಡಿಸಿಲ್ಲವೋ ಅವರು ಸಹ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಿಕೊಳ್ಳಬಹುದು.

 PM kisan release date ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಮೊದಲು  ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನೀವು ಆಯ್ಕೆ ಮಾಡಿಕೊಂಡ ಊರಿನಲ್ಲಿ ಯಾರು ಯಾರು ಫಲಾನುಭವಿಗಳಾಗಿದ್ದಾರೆ ಅವರ ಹೆಸರು ಕಾಣಿಸುತ್ತದೆ. ಎ ದಿಂದ ಹೆಸರುಗಳು ಆರಂಭವಾಗುತ್ತದೆ.

ಇದನ್ನೂ ಓದಿ ಬೆಳೆಹಾನಿಯಾದ ರೈತರ ಪಟ್ಟಿ ಬಿಡುಗಡೆ ನಿಮ್ಮ ಹೆಸರು ಚೆಕ್ ಮಾಡಿ

ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿಕೊಂಡು ಪಟ್ಟಿಯಲ್ಲಿ ನಿಮ್ಮ  ಹೆಸರು ಚೆಕ್ ಮಾಡಿಕೊಳ್ಳಬಹುದು.

ಇಕೆವೈಸಿ ಮಾಡಿಸುವುದು ಕಡ್ಡಾಯ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಲು ರೈತರು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.ಯಾವ ಯಾವ ರೈತರು ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರು ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬಹುದು. ತಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.

PM kisan list released  ಇಕೆವೈಸಿ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು.ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಒಂದು ವೇಳೆ ಇಕೆವೈಸಿ ಆಗಿದ್ದರೆ ಇಕೆವೈಸಿ ಇಸ್ ಡನ್ ಸಕ್ಸೆಸಫುಲಿ ಎಂಬ ಸಂದೇಶ ಕಾಣಿಸುತ್ತದೆ.

ಇಕೆವೈಸಿ ಆಗಿಲ್ಲವಾದರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಇಕೆವೈಸಿ ಮಾಡಿಸಿಕೊಳ್ಳಬಹುದು.  ಇಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಇಕೆವೈಸಿ ಮಾಡಿದರೆ ಮಾತ್ರ ರೈತರ ಖಾತೆಗೆ ಮುಂದಿನ ಕಂತು ಜಮೆಯಾಗುತ್ತದೆ. ಇಲ್ಲದಿದ್ದರೆ ಜಮೆಯಾಗುವುದಿಲ್ಲ

Leave a Comment