ಇಂದು ಈ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ

Written by Ramlinganna

Published on:

PMkisan money release today : ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗೆ ಇಂದು 18ನೇ ಕಂತಿನ ಹಣ ಜಮೆಯಾಗಲಿದೆ. ಹೌದು, ಪ್ರಧಾನಿ ನರೇಂದ್ರ ಮೋದಿಯವರು ದೇಶದಎಲ್ಲಾ ರೈತರ ಖಾತೆಗೆ ಏಕಕಾಲದಲ್ಲಿ ಹಣ ಜಮೆ ಮಾಡಲಿದ್ದಾರೆ. 9 ಕೋಟಿಗೂ ಅಧಿಕ ರೈತರಿಗೆ ಸುಮಾರು 20 ಸಾವಿರ ಕೋಟಿ ರೂಪಾಯಿ ಹಣ ಜಮೆ ಮಾಡಲು ಚಾಲನೆ ನೀಡಲಿದ್ದಾರೆ.   ರೈತರು ತಮ್ಮ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ಈಗಲೇ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಪಿಎಂ ಕಿಸಾನ್ ಯೋಜನೆ ಯಾರು ಯಾರು ತಮ್ಮ ಹೆಸರನ್ನು ನೋಂದಣಿ ಮಾಡಿಸಿದ್ದೀರೋ ಅಂತಹ ರೈತರು ತಮ್ಮ ಖಾತೆಗೆ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

PMkisan money release today ಪಿಎಂ ಕಿಸಾನ್ ಯೋಜನೆಯ ಹಣ ತಮ್ಮ ಖಾತೆಗೆ ಜಮೆಯಾಗುತ್ತೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ತಮ್ಮ ಖಾತೆಗೆ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx   

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ನಮೂದಿಸಿ ನೀವು ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ಪಿಎಂ ಕಿಸಾನ್ ಸ್ಟೇಟಸ್ ನಲ್ಲಿ ಏನೇನು ಮಾಹಿತಿ ಇದ್ದರೆ ಹಣ ಜಮೆಯಾಗಲಿದೆ?

ಪಿಎಂ ಕಿಸಾನ್ ಸ್ಟೇಟಸ್ ಪೇಜ್ ಓಪನ್ ಆದ ನಂತರ ನಿಮಗೆ ನಿಮ್ಮ ನೋಂದಣಿ ಸಂಖ್ಯೆ, ನೀವು ನೋಂದಣಿ ಮಾಡಿದ ದಿನಾಂಕ, ನಿಮ್ಮ ಹೆಸರು, ತಂದೆಯ ಹೆಸರು, ಊರು, ನಿಮ್ಮ ಮೊಬೈಲ್ ನಂಬರ್  ಕಾಣಿಸುತ್ತದೆ. ನಿಮಗೆ ಕೊನೆಯ ಯಾವ ಕಂತು ಜಮೆಯಾಗಿದೆ ಎಂಬ ಸ್ಟೇಟಸ್ ಕಾಣಿಸುತ್ತದೆ. ಯಾವ ಬ್ಯಾಂಕಿಗೆ ಹಾಗೂ ಯಾವಾಗ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

Eligibility status ಮೇಲೆ ಕ್ಲಿಕ್ ಮಾಡಿದಾಗ ಲ್ಯಾಂಡ್ ಸೀಡಿಂಗ್, ಇಕೆವೈಸಿ ಸ್ಟೇಟಸ್ ಹಾಗೂ ಆಧಾರ್ಬ್ಯಾಂಕ್ ಸೀಡಿಂಗ್ ಸ್ಟೇಟಸ್  ಈ ಎಲ್ಲಾ ಕಡೆ Yes ಇರಬೇಕು.

Reason of ineligibility (if any) ಮೇಲೆ ಕ್ಲಿಕ್ ಮಾಡಿದಾಗ ನೀವು ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದಿದ್ದೀರೋ ಇಲ್ಲವೋ ಎಂಬುದು ಕಾಣಿಸುತ್ತದೆ

Latest installments details ಮೇಲೆ ಕ್ಲಿಕ್ ಮಾಡಿದಾಗ ಯಾವಾಗ ಕೊನೆಯ ಕಂತು ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಪಿಎಂ ಕಿಸಾನ್ ಹಣ ಯಾವ ಯಾವ ತಿಂಗಳಲ್ಲಿ ಜಮೆಯಾಗಲಿದೆ?

ರೈತ ಬಾಂಧವರಿಗೆಲ್ಲಾ ಗೊತ್ತಿದ್ದ ಹಾಗೆ, ಪಿಎಂ ಕಿಸಾನ್ ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಇದನ್ನೂ ಓದಿ ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೇ? ಇಲ್ಲೇ ಚೆಕ್ ಮಾಡಿ

ಏಪ್ರೀಲ್ ರಿಂದ ಜುಲೈ ತಿಂಗಳಲ್ಲಿ ಮೊದಲ ಕಂತು ಜಮೆ ಮಾಡಲಾಗುವುದು. ಅದೇ ರೀತಿ  ಆಗಸ್ಟ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ಎರಡನೇ ಕಂತು ಜಮೆ ಮಾಡಲಾಗುವುದು. ಹಾಗೂ ಡಿಸೆಂಬರ್ ದಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ಮೂರನೇ ಕಂತು ಜಮೆ ಮಾಡಲಾಗುವುದು.

Leave a Comment