Agniveer job notification : ಬೆಂಗಳೂರಿನ ಪ್ರಧಾನ ನೇಮಕಾತಿ ವಲಯ ಕಚೇರಿ ಹಾಗೂ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 26 ರಿಂದ ಡಿಸೆಂಬರ್ 8 ರವರೆಗೆ ಅಗ್ನಿವೀರ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ ಮನ್, 10ನೇ ತರಗತಿ ತೇರ್ಗಡೆ, ಅಗ್ನಿವೀರ್ ಟ್ರೇಡ್ಸ್ ಮೆನ್ 8 ನೇ ತರಗತಿ ತೇರ್ಗಡೆ, ಅಗ್ನಿವೀರ್ ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿಗಾಗಿ ರ್ಯಾಲಿ ನಡೆಯಲಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ರ್ಯಾಲಿ ಆಯೋಜಿಸಲಾಗಿದೆ.
Agniveer job notification
ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು https://joinindianarmy.nic.in/ ವೆಬ್ಸೈಟ್ ದಲ್ಲಿ ಪ್ರಕಟಿಸಲಾಗಿದೆ. 2024ರ ಅಕ್ಟೋಬರ್ 10 ರಿಂದ ಶಾರ್ಟ್ ಲಿಸ್ಟಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವೇಶ ಕಾರ್ಡನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಪ್ರವೇಶ ಕಾರ್ಡಗಳನ್ನು ಭಾರತೀಯ ಸೇನಾ ನೇಮಕಾತಿಯ ವೆಬ್ಸೈಟ್ ದಲ್ಲಿ ವೈಯಕ್ತಿಕ ಖಾತೆ ಮತ್ತು ನೋಂದಾಯಿತ ಇ-ಮೇಲೆ ಐಡಿಯನ್ನು ಲಾಗಿನ್ಮಾಡುವ ಮೂಲಕ ಪಡೆಯಬಹುದಾಗಿದೆ.
ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮೀಶಕ್ಕೊಳಗಾಗಬಾರದು. ನೇಮಕಾತಿ ಪರೀಕ್ಷೆ ಹಾಗೂ ಅಂತಿಮ ಅರ್ಹತೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ದ್ರಾಕ್ಷಿ ಬೆಳೆಗಾರರಿಗೆ 40.10 ಕೋಟಿ ಬೆಳೆ ವಿಮೆ ಜಮೆ
Bele vime released : ಪ್ರಸಕ್ತ ವರ್ಷದಲ್ಲಿ ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ 40.10 ಕೋಟಿ ವಿಮೆ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿ ತಾಲೂಕಿನ ಘಟನಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಥಣಿ ಹಾಗ ಕೋರಮಂಡಲ ಇಂಟರ್ನ್ಯಾಶನಲ್ ಲಿ. ಸಹಯೋಗದಲ್ಲಿ ಜರುಗಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶಾಲಾ ಕಂಪೌಂಡ್ ನಿರ್ಮಾಣ, ಅಡುಗೆ ಕೋಣೆ ನಿರ್ಮಾಣಕ್ಕೆ ಅಡಿಗಲ್ಲು, ಪ್ರಧಾನಮಂತ್ರಿ ಅವಾಸ್ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ಗ್ರಂಥಾಲಯಕ್ಕೆ ಕಂಪ್ಯೂಟರ್ ವಿತರೆಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ : ದಸರಾ ಹಬ್ಬಕ್ಕೆ ಈ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆ
ಕಳೆದ ಸಾಲಿನಲ್ಲಿದ್ರಾಕ್ಷಿ ಬೆಳೆಗಾರರಿಗೆ36 ಕೋಟಿ ರೂಪಾಯಿ ಬೆಳೆವಿಮೆ ಮಾಡಲಾಗಿತ್ತು. ಈ ವರ್ಷ ಎಕರೆಗೆ 50 ರಿಂದ 90 ಸಾವಿರದಂತೆ ತಾಲೂಕಿನಲ್ಲಿ 40.10 ಕೋಟಿ ಸರ್ಕಾರದಿಂದ ಪರಿಹಾರ ನೀಡಲಾಗಿದೆ. ಇದರಿಂದ ಕಷ್ಟ ಕಾಲದಲ್ಲಿರೈತರಿಗೆ ಅನುಕೂಲವಾಗಲಿದೆ ಎಂದು ಅವರು ಕೃಷಿ ವಿಮೆ, ತಾಂತ್ರಿಕ ದೋಷ ಹಾಗೂ ಮಾಹಿತಿ ಕೊರತೆಯಿಂದ ರೈತರಿಗೆ ಸರಿಯಾದ ಸಮಯಕ್ಕೆ ವಿಮೆ ಹಣ ಬರುತ್ತಿಲ್ಲ. ಮುಂಬರುವ ದಿನಗಳಲ್ಲಿ ಈಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿಸರ್ಕಾರ ಚಿಂತನೆ ನಡೆಸಿದೆ. ಮೆಕ್ಕೆಜೋಳ, ಸೋಯಾಬಿನ್, ತೊಗರಿ, ಶೇಂಗಾ ಸೇರಿದಂತೆ ಇನ್ನಿತರ ಬೆಳೆಗಳ ಹಾನಿ ಹಾಗೂ ವಿಮೆ ಹಣ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಅಥಣಿ ಪೂರ್ವ ಭಾಗದ ರೈತರ ಬಹುದಿನಗಳ ಕನಸಾಗಿದ್ದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಕೃಷ್ಣಾ ನದಿ ದಡದ ಝಂಡರವಾಡ ಗ್ರಾಮದ ರೈತರು ಭೂಮಿ ನೀಡಲು ಒಪ್ಪಿದ್ದು, ಶೀಘ್ರದಲ್ಲಿಯೇ ನೀರಾವರಿ ಕಾಮಗಾರಿ ಆರಂಭಿಸುವ ಮೂಲಕ ಬರುವ 20 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಆ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದ್ದಾರೆ.