ಇಂದಿನಿಂದ ಇಲ್ಲಿ ಎರಡು ದಿನ ಭಾರಿ ಮಳೆ- ಯೆಲ್ಲೋ ಅಲರ್ಟ್

Written by Ramlinganna

Published on:

Havamana ilakhe mahiti: ರಾಜ್ಯದಲ್ಲಿ ಮುಂಗಾರು ಮಳೆಯಿಂತೆ ಈಗ ಹಿಂಗಾರು ಮಳೆಯ ಆರ್ಭಟವೂ ಜೋರಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಮತ್ತು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಕೊಡಗು, ಮಂಡ್ಯ, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Havamana ilakhe mahiti: ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ,  ರಾಮನಗರ, ಬೆಂಗಳೂರು, ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಗಳಲ್ಲಿ ಪ್ರತ್ಯೇಕ ಗುಡುಗು ಸಹಿತ ಮಳೆ ಬೀಳಲಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅಕ್ಟೋಬರ್ 8 ರವರೆಗೆ ಗುಡುಗು ಮಿಂಚು ಹಾಗೂ ಜೋರಾದ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಕೆಲವೆಡೆ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಅಪ್ಪ ತನ್ನ ಮಗನಿಗಾಗಿ ಹೇಗೆ ಸಾಲಗಾರನಾಗುತ್ತಾನೆ? ಮನಕಲಕುವ ವೀಡಿಯೋ ನೋಡಲು ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

father debt

ವಿಜಯನಗರ, ದಾವಣಗೆರೆ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಇಬ್ಬರು ರೈತರು ಸೇರಿ ಮೂವರು ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರದ ಬಣಕಾರನಾರಪ್ಪ, ಬಣಕಾರ ಪ್ರಶಾಂತ, ಸಿಡಿಲಿಗೆ ಮೃತಪಟ್ಟಿದ್ದಾರೆ ಇದೇ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಂತೆಬೆನ್ನೂರಿನಲ್ಲಿ ಮನೆಯ ಗೋಡೆ ಕುಸಿದು ಬಸವರಾಜಪ್ಪ ಎಂಬ ವೃದ್ದರು ಮೃತರಾಗಿದ್ದಾರೆ.

Havamana ilakhe mahiti ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Weather forecast heavy rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?  

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಇದನ್ನೂ ಓದಿ Land podi ನಕ್ಷೆ ಮೊಬೈಲ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಇನ್ನೇಕೆ ತಡ, ಈಗಲೇ ಕರೆ ಮಾಡಿ ನೋಡಿ, ನಿಮ್ಮೂರಲ್ಲಿ ಮಳೆಯ ಆಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ.ಈ ಮಾಹಿತಿ ನಿಮಗೆ ಉಪಯುಕ್ತವಾಗಿದೆ ಎಂದುಕೊಂಡಿದ್ದೇನೆ. ರೈತರಿಗೆ ಹವಾಮಾನ ವರದಿ ಪಡೆದುಕೊಂಡು ತಮ್ಮ ಕೃಷಿ ಚಟುವಟಿಕೆ ಕೈಗೊಳ್ಳಬಹುದು.

Leave a Comment