Three days rain from today : ಅರಬ್ಬಿ ಸಮುದ್ರದಲ್ಲಿ ವಾಯುಭಾರತ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಬಳ್ಳಾರಿ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಮೇಲೆ ತಿಳಿಸಿದ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತಿ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಜೋರು ಮಳೆಯಾಗಲಿದ್ದು, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ ಆಧಾರ್ ನಂಬರ್ ಹಾಕಿ FID ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಬೆಂಗಳೂರು ನಗರದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಮ ಹಾಗೂ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 18 ರ ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.
Three days rain from today ಭಾರಿ ಮಳೆಯ ಎಚ್ಚರಿಕೆ ಬುದವಾರ ಶಾಲೆಗಳಿಗೆ ರಜೆ
ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯ ಹಿನ್ನೆಲೆ ಬುಧವಾರ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೌದು, ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಬುಧವಾರ (ಅಕ್ಟೋಬರ್ 16) ರಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಸರ್ಕಾರಿ ಶಾಲೆಗಳಿಗೆ ದಸರಾ ರಜೆ ನಡೆಯುತ್ತಿದೆ. ಖಾಸಗಿ ಶಾಲೆ ಕಾಲೇಜುಗಳು ದಸರಾ ರಜೆ ಮುಗಸಿ ಆರಂಭವಾಗಿದ್ದವು. ಆದರೆ ಕಳೆಡ ಎರಡು ದಿನದಿಂದ ಸುರಿಯುತ್ತಿರುವ ಮಳೆ ಬೆಂಗಳೂರಿನಲ್ಲಿ ಸಾಕಷ್ಟು ಹಾನಿ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾಕ್ರಮವಾಗಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಜಿ. ಬುಧವಾರ ಎಲ್ಲಾ ಮಾದರಿಯ ಶಾಲೆ ಹಾಗೂ ಪಿಯುಸಿ ವರೆಗಿನ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಉಳಿದಂತೆ ಪದವಿ, ಡಿಪ್ಲೋಮಾ ಸ್ನಾತಕೋತ್ತರ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿದೆ.
ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.