ಇಂದು ಇಲ್ಲಿ ಭಾರಿ ಮಳೆ- ಶಾಲೆಗಳಿಗೆ ರಜೆ ಘೋಷಣೆ

Written by Ramlinganna

Published on:

Today heavy school holiday : ಹಿಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇಂದು (ಬುಧವಾರ) ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.

ಹೌದು, ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಅವರು ಆದೇಶಿಸಿದ್ದಾರೆ.

Today heavy school holiday ಬೆಂಗಳೂರು ನಗರ ವಿದ್ಯಾರ್ಥಿಗಳಿಗೆ ರಜೆ

ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಆದರೆ, ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಎಂಜಿನೀಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈಗ ನೀಡಿರುವ ರಜೆಯಿಂದ ಉಂಟಾಗಿರುವ ಕಲಾಕಾ ಸಮಯದ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿ ನಡೆಸುವ ಮೂಲಕ ಸರಿದೂಗಿಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿ ಅವರು ಸಲಹೆ ನೀಡಿದ್ದಾರೆ.

ಬಂಗಾಳದಲ್ಲಿ ವಾಯುಭಾರ ಕುಸಿತ- ಭಾರಿ ಮಳೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬುಧವಾರದ ವೇಳೆಗೆ ಅಧು ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ ಜಮೀನಿನ ಓರಿಜಿನಲ್ ಸರ್ವೆ ಟಿಪ್ಪಣಿ ಇಲ್ಲೇ ಡೌನ್ಲೋಡ್ ಮಾಡಿ

ಚಂಡಮಾರುತದ ಪರಿಣಾಮ ಪಶ್ಚಿಮಬಂಗಾಳ, ಒಡಿಸಾದ ತೀರ ಪ್ರದೇಶಗಳಲ್ಲಿ ಅಕ್ಟೋಬರ್ 24 ರ ರಾತ್ರಿ ಹಾಗೂ 25 ರ ಮುಂಜಾನೆ ವೇಳೆ ಹಾದು ಹೋಗಲಿದ್ದು, ಈ ವೇಳೆ 100-110 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಇದೆ ಎಂದು ಐಎಂಡಿ ಮಾಹಿತಿ ನೀಡಿದೆ. ಈ ಚಂಡಮಾರತಕ್ಕೆ ಡಾನಾಎಂದು ಹೆಸರಿಡಲಾಗಿದೆ.

ಚಂಡಮಾರುತದ ಪ್ರಭಾವ ಒಡಿಸ್ಸಾದ ಮೇಲೆ ಅಧಿಕ ಇರಲಿದೆ.ಭಾರಿ ಗಾಳಿ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಪ್ರದೇಶಗಳಿಗೆ ಕೆಂಪು, ಆರೇಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಕೆಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗಿದೆ.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?                        

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

Leave a Comment