ಡಿಸೆಂಬರ್ 2 ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Written by Ramlinganna

Published on:

Rain start from December : ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಆಗಲು ಇಲ್ಲಿಕ್ಲಿಕ್ ಮಾಡಿ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬುಧವಾರ ಮೋಡ ಕವಿದ ವಾತಾವರಣ ಉಂಟಾಗಿತ್ತು. ಹಲವುರ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಸರಾಸರಿ 2 ರಿಂದ 3 ಡಿ.ಸೆ. ಉಷ್ಣಾಶ ಕುಸಿತವಾಗಿದೆ.

ಮಂಜು ಮುಸುಕಿದ ವಾತಾವರಣ ಜತೆಗೆ ಚಳಿ ಅನುಭವವಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಚಳಿ ಆವರಿಸುತ್ತಿದೆ. ಲಾ ನೀನಾ ಪರಿಣಾಮ ಮುಂಗಾರು ಹಾಗೂ ಹಿಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿದಿರುವುದು. ಮಣ್ಣು ಮತ್ತು ವಾತಾವರಣದಲ್ಲಿ ಹೆಚ್ಚು ತೇವಾಂಶ ಇರುವುದು ಸೇರಿ ಇತರ ಕಾರಣಗಳಿಂದ ಈ ಬಾರಿ ವಾಡಿಕೆಗಿಂತ ಹೆಚ್ಚು ಚಳಿ ಕಾಣಿಸಿಕೊಳ್ಳಲಿದೆ. ಪ್ರಸ್ತುತ ರಾಜ್ಯದಲ್ಲಿ ಆಗಾಗ್ಗೆ ಮೋಡ ಕವಿದ ವಾತಾವರಣ ಜತೆಗೆತಣ್ಣನೆ ಗಾಳಇ ಬೀಸಲಾರಂಭಿಸಿದೆ. ಸಂಜೆಮುಂಜಾನೆ ಇಬ್ಬನಿ ಹೆಚ್ಚಾಗಿ ಬೀಳುತ್ತಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಹಳೆಯ ಪಹಣಿ ಇಲ್ಲೇ ಚೆಕ್ ಮಾಡಿ

ಮೋಡ ಮುಸುಕಿದ ವಾತಾವರಣ ಇದ್ದಾಗ ಹಗಲಿನಲ್ಲಯೂ ಚಳಿ ಅನುಭವವಾಗುತ್ತಿದೆ. ತಂಪಾದಗಾಳಿ ಬೀಸಿದರೆ ಚಳಿ ಹೆಚ್ಚಿರುತ್ತದೆ.

Rain start from December ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಮಳೆ ಮಾಹಿತಿ ಬೇಕೆ? ಈ ನಂಬರಿಗೆ ಕರೆ

ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹೌದು, 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.

Leave a Comment