Check BPL APL card : ಬಿಪಿಎಲ್ ಪಡಿತರ ಚೀಟಿದಾರರ ಪೈಕಿ ಅನರ್ಹರೆಂದು ಗುರುತಿಸಿದವರ ಕಾರ್ಡ್ ಗಳನ್ನು ಎಪಿಎಲ್ ಗೆ ಪರಿವರ್ತನೆ ಮಾಡಲಾಗಿದೆ. ನಿಮ್ಮ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ಪರಿವರ್ತನೆಯಾಗಿದೆಯೇ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಇಂತಹ ಮಾಹಿತಿ ಪಡೆಯಿರಿ
ರಾಜ್ಯಾದ್ಯಂತ 2021 ರಿದ 2023 ರ ಮೇವರೆಗೆ ಬಿಪಿಎಲ್ ಪಡಿತರ ಚೀಟಿ ಪರಿಷ್ಕರಣೆಯಲ್ಲಿ 3.35 ಲಕ್ಷ ಅನರ್ಹ ರನ್ನು ಎಪಿಎಲ್ ಗೆ ಪರಿವರ್ತಿಸಿ13.51 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ಪರಿಷ್ಕರಣೆ ಮುಂದುವರೆಯಲಿದ್ದುಇನ್ನೂ ಶೇ. 20 ಅನರ್ಹರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನುಮಾನವಿದೆ. ಅಂತಹವರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಲು ಸರ್ಕಾರ ಬದ್ಧ ಎಂದರು.
ರಾಜ್ಯದಲ್ಲಿ 25 ಲಕ್ಷ ಎಪಿಎಲ್ ಪಡಿತರ ಚೀಟಿದಾರರಿದ್ದು, ಇದರಲ್ಲಿ ಒಂದು ಲಕ್ಷ ಕಾರ್ಡದಾರರು ಮಾತ್ರ ಪಡಿತರ ಖರೀದಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಪಿಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
Check BPL APL card ರೇಷನ್ ಕಾರ್ಡ್ ಲಿಸ್ಟ್ ನಿಂದ ನಿಮ್ಮ ಹೆಸರು ರದ್ದಾಗಿದೆಯೇ? ಇಲ್ಲೇ ಚೆಕ್ ಮಾಡಿ
ರೇಶನ್ ಕಾರ್ಡ್ ಲಿಸ್ಟ್ ನಿಂದ ನಿಮ್ಮ ಹೆಸರು ರದ್ದಾಗಿದೆಯೇ ಎಂಬುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಬಲಗಡೆ ಕೆಲವು ಆಯ್ಕೆಗಳು ಕಾಣುತ್ತವೆ. ವಿಧಾನ, ಇ ಪಡಿತರ ಚೀಟಿ, ಇ-ಸ್ಥತಿ, ಇ ನ್ಯಾಯಬೆಲೆ ಅಂಗಡೆ, ಸಾರ್ವಜನಿಕ ದೂರು ಮತ್ತು ಬಹುಮಾನ ಯೋಜನೆ, ಎಸ್.ಎಂಎಸ್ ಸೇವೆ, ಸೌಕರ್ಯ ಕೇಂದ್ರಗಳು, ಅಂಕಿ ಅಂಶ, ಟೆಂಡರ್, ದರಗಳು, ಹೀಗೆ ವಿವಿಧ ಆಯ್ಕೆಗಳು ಕಾಣುತ್ತವೆ.
ಅಲ್ಲಿ ನೀವು ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನಿ ಕೆಲವು ಆಯ್ಕೆಗಳು ಕಾಣಿಸುತ್ತವೆ. ಹೊಸ ಪಡಿತರ ಚೀಟಿ, ಪಡಿತರ ಚೀಟಿ ತೋರಿಸು, ಹಂಚಿಕೆ, ಪಡಿತರಎತ್ತುವಳಿ ಸ್ಥಿತಿ, ಅಪ್ಡೇಟ್ ಆಧಾರ್, ರದ್ದುಗೊಳಿಸಲಾದ /ತಡೆಹಿಡಿಯಲಾದ ಪಟ್ಟಿ, ಹಳ್ಳಿ ಪಟ್ಟಿ ವಿತರಣೆಯಾಗುವ ಹೊಸ ಪಡಿತರ ಚೀಟಿ ಹೀಗೆ ಹಲವಾರು ಆಯ್ಕೆಗಳು ಕಾಣುತ್ತದೆ.
ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಿ
ಅಲ್ಲಿ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ತೆರೆದುಕೊಳ್ಳುತ್ತದೆ.ಅಲ್ಲಿ ಜಿಲ್ಲೆ ತಾಲೂಕು, ಗ್ರಾಮ ಪಂಚಾಯತ್, ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಯಾರ ಯಾರ ಹೆಸರಿನಲ್ಲಿ ಪಡಿತರ ಚೀಟಿ ಇದೆ ಎಂಬ ಪಟ್ಟಿ ಕಾಣಿಸುತ್ತದೆ.
ರದ್ದುಗೊಳಿಸಲಾದ/ತಡೆಹಿಡಿಯಲಾದ ರೇಶನ್ ಕಾರ್ಡ್ ಫಲಾನುಭವಿಗಳ ಹೆಸರು
ಪಡಿತರ ಚೀಟಿ ಹೊಂದಿದವರು ತಮ್ಮ ಹೆಸರು ರದ್ದುಗೊಳಿಸಲಾಗಿದೆಯೇ ಎಂಬುದನ್ನು ಚೆಕ್ ಮಾಡಲು ರದ್ದುಗೊಳಿಸಲಾದ ತಡೆಹಿಡಿಯಲಾದ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ಆಗ ಜಿಲ್ಲೆ, ತಾಲೂಕು, ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ಮಾಡಿಕೊಳ್ಳಬೇಕು.ನಂತರ ಗೊ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಪಹಣಿಗೆ ಆಧಾರ್ ಲಿಂಕ್ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಆಗ ಯಾರ ಯಾರ ಹೆಸರನ್ನು ತೆಗೆಯಲಾಗಿದೆ. ಯಾವಾಗ ತೆಗೆಯಲಾಗಿದೆ? ಯಾವ ಕಾರಣಕ್ಕಾಗಿ ರದ್ದುಗೊಳಿಸಲಾಗಿದೆ ಎಂಬ ಕಾರಣವನ್ನು ಬರೆಯಲಾಗಿದೆ. ಈ ಆಧಾರದ ಮೇಲೆ ನಿಮ್ಮ ಹೆಸರು ರದ್ದುಗೊಳಿಸಲಾಗಿದೆಯೋ ಅಥವಾ ಉಳಿಸಲಾಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.