Gruhalakshmi money release date : ಮಹಿಳೆಯರಿಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು, ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನಭವಿ ಮಹಿಳೆಯರಿಗೆ ಸಂತಸದ ಸುದ್ದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಎರಡು ಕಂತಿ ಹಣ ಬಾಕಿಯಿದೆ. ಈ ಹಣವನ್ನು ಮಾರ್ಚ್ 31 ರ ನಂತರ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಈಗ ಕೆಲವು ಕಾರಣಗಳಿಂದ ತಡವಾಗಿದೆ. ಈ ಹಣವನ್ನು ಮುಂದಿನ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Gruhalakshmi money release date ಎರಡು ಕಂತಿನ ಹಣ ಒಂದೇ ದಿನ ಬಿಡುಗಡೆ
ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳಬಾಕಿ ಹಣ ಒಂದೇ ದಿನ ಬಿಡುಗಡೆಯಾಗಲಿದೆ ಎಂದುಹೇಳಲಾಗಿದೆ. ಯುಗಾದಿ ಹಬ್ಬದ ಸಮಯದಲ್ಲಿ ಗೃಹಲಕ್ಷ್ಮೀ ಯೋಜನೆಯ ಎಱಡು ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ.
Gruhalakshmi pending amount release ಡಿಬಿಟಿ ಆ್ಯಪ್ ನಲ್ಲಿ ಸಿಗಲಿದೆ ಗೃಹಲಕ್ಷ್ಮೀ ಹಣ ಜಮೆ
ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ
DBT Karnataka ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು. ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.
Gruhalakshmi pending amount release ಗೃಹಲಕ್ಷ್ಮೀ ಫಲಾನುಭವಿಗಳ ಅರ್ಹತೆ
ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯಲು ಯಾರು ಯಾರು ಅರ್ಹತೆ ಪಡೆದಿದ್ದಾರೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಹೊಂದಿರಬೇಕು. ಈ ರೇಶನ್ ಕಾರ್ಡ್ ನಲ್ಲಿ ಮಹಿಳೆಯ ಹೆಸರು ಕುಟುಂಬದ ಯಜಮಾನಿ ಎಂದು ಬರೆದಿರಬೇಕು.
ಇದನ್ನೂ ಓದಿ : ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಇಲ್ಲೆ ಚೆಕ್ ಮಾಡಿ
ತಮಗೆಲ್ಲಾ ಗೊತ್ತಿದ್ದ ಹಾಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಹಣ ಫಲಾನಭವಿಗಳ ಖಾತೆಗೆ ಜಮೆಯಾಗಿತ್ತು. ನಂತರ ಜನವರಿ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿತ್ತು. ಈಗ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಒಟ್ಟಿಗೆ ಜಮೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ
ಗೃಹಲಕ್ಷ್ಮೀ ಗ್ಯಾರೆಂಟಿ ಹಣವನ್ನು ಪಾವತಿ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡ ಬಗ್ಗೆ ಹಲವಾರು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ರಾಜ್ಯ ಸರ್ಕಾರ ಈಗ ಹಂತ ಹಂತವಾಗಿ ಗ್ಯಾರೆಂಟಿ ಯೋಜನೆಯ ಹಣ ಬಿಡುಗಡೆ ಮಾಡಲು ಮುಂದಾಗಿದೆ.