ಮಹಿಳೆಯರಿಗೆ ಗುಡ್ ನ್ಯೂಸ್ ಈ ವಾರದಲ್ಲಿ ಗೃಹಲಕ್ಷ್ಮೀ 3 ಕಂತಿನ ಹಣ ಜಮೆ

Written by Ramlinganna

Published on:

Gruhalakshmi amount credit this week : ರಾಜ್ಯದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡ್ ನ್ಯೂಸ್ ನೀಡಿದ್ದಾರೆ. ಹೌದು, ಇದೇ ಮೇ ತಿಂಗಳ ಮೊದಲ ವಾರದಲ್ಲಿ ಮೂರು ಕಂತಿನ ಹಣ ಜಮೆಯಾಗಲಿದೆಎಂದು ಸಚಿವೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಹಾಗಾದರೆ ಯಾವ ಯಾವ ತಿಂಗಳ ಹಣ ಪೆಂಡಿಂಗ್ ಇದೆ. ಯಾವ ದಿನಾಂಕದಂದು ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೇ ತಿಂಗಳಲ್ಲಿ ಪೆಂಡಿಂಗ್ ಇರುವ ಮೂರು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿದಿದ್ದಾರೆ. ಬಾಕಿ ಇರುವಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದೆ. ಹಾಗಾಗಿ ಮೇ ತಿಂಗಳಲ್ಲಿ ಮೊದಲ ಮೂರು ವಾರಗಳಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Gruhalakshmi amount credit this week ಇಲ್ಲಿಯವರೆಗೆ ಎಷ್ಟುಕಂತುಗಳ ಹಣ ಜಮೆಯಾಗಿದೆ?

ಗೃಹಲಕ್ಷ್ಮೀ ಯೋಜನೆಯು 2023 ರ ಆಗಸ್ಟ್ ತಿಂಗಳಲ್ಲಿ ಆರಂಭವಾಗಿದೆ. 2024ರ ಡಿಸೆಂಬರ್ ವರೆಗೂ 17 ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿತ್ತು. ಜನವರಿ ತಿಂಗಳ ಹಣವನ್ನು ಏಪ್ರೀಲ್ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗಿತ್ತು. ಇದೀಗ ಫೆಬ್ರವರಿ, ಮಾರ್ಚ್, ಹಾಗೂ ಏಪ್ರೀಲ್ ತಿಂಗಳ ಹಣ ಬಿಡುಗಡೆ ಆಗಬೇಕಿದೆ.  ಈ ಮೂರು ಕಂತಿನ ಹಣ ಒಟ್ಟಿಗೆ ಜಮೆ ಮಾಡಲಾಗುವುದೋ ಅಥವಾ ಹಂತ ಹಂತವಾಗಿ ಪ್ರತಿ ವಾರ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂಬುದು ಅತೀ ಶೀಘ್ರದಲ್ಲಿ ಗೊತ್ತಾಗಲಿದೆ.

ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆಷ್ಟು ಕಂತುಗಳು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಹಣ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಫಲಾನುಭವಿಗಳು DBT Karnataka  ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಚೆಕ್ ಮಾಡಬಹುದು.

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು.  ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ  ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.

ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಹತೆ ಪಡೆದಿದ್ದೀರಾ? ಇಲ್ಲಿದೆ ಮಾಹಿತಿ

ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಹತೆ ಪಡೆದಿದ್ದಿರಾ? ನಿಮಗೇಕೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ನೋಂದಣಿ  ಮಾಡಿಸಿದರೂ ನಿಮಗೇಕೆ ಹಣ ಜಮೆಯಾಗಿಲ್ಲ ಎಂಬುದರ ಮಾಹಿತಿ ಇಲ್ಲಿದೆ.

ಇದನ್ನೂ ಓದಿ ಗ್ರಾಪಂನಿಂದ ನಿಮ್ಮೂರಿಗೆ ಯಾವ ಯಾವ ಕಾಮಗಾರಿ ಮಂಜೂರಾಗಿದೆ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.

ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ.

Leave a Comment